ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಬಿಜೆಪಿ ಹಾಲಿ ಸಂಸದ ಗೌತಮ್ ಗಂಭೀರ್ ತಮ್ಮ ಸಾರ್ವಕಾಲಿಕ ಕನಸಿನ ಭಾರತ ತಂಡವನ್ನು ಪ್ರಕಟಿಸಿದ್ದು, ಕನ್ನಡಿಗ ಅನಿಲ್ ಕುಂಬ್ಳೆಗೆ ನಾಯಕತ್ವ ಪಟ್ಟ ನೀಡಿದ್ದಾರೆ. ಇನ್ನು ಸದಾ ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿ ಮೇಲೆ ಕಿಡಿಕಾರುವ ಗಂಭೀರ್ ಈ ಇಬ್ಬರಿಗೂ ತಂಡದಲ್ಲಿ ಅವಕಾಶ ನೀಡಿದ್ದಾರೆ. ಆದರೆ ನಾಯಕನ ಪಟ್ಟ ನೀಡಿಲ್ಲ. ಇನ್ನುಳಿದಂತೆ ಗಂಭೀರ್ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.