ಬಾಕ್ಸಿಂಗ್ ಡೇ ಟೆಸ್ಟ್‌ಗೆ ಟೀಂ ಇಂಡಿಯಾವನ್ನು ಪ್ರಕಟಿಸಿದ ಗೌತಮ್ ಗಂಭೀರ್

First Published | Dec 22, 2020, 12:57 PM IST

ಮೆಲ್ಬರ್ನ್: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪಿಂಕ್ ಬಾಲ್ ಟೆಸ್ಟ್‌ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 8 ವಿಕೆಟ್‌ಗಳ ಹೀನಾಯ ಸೋಲು ಕಂಡಿದೆ. ಇನ್ನು ಡಿಸೆಂಬರ್ 26ರಿಂದ ಆರಂಭವಾಗಲಿರುವ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾಗೆ ತಿರುಗೇಟು ನೀಡುವ ಲೆಕ್ಕಾಚಾರದಲ್ಲಿದೆ ಟೀಂ ಇಂಡಿಇಯಾ.
ವೈಯುಕ್ತಿಕ ಕಾರಣದಿಂದ ವಿರಾಟ್ ಕೊಹ್ಲಿ ಇನ್ನುಳಿದ ಟೆಸ್ಟ್‌ ಪಂದ್ಯಗಳಿಂದ ಹೊರಗುಳಿಯಲಿದ್ದು, ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಆಸ್ಟ್ರೇಲಿಯಾ ವಿರುದ್ದದ ಎರಡನೇ ಟೆಸ್ಟ್‌ ಪಂದ್ಯಕ್ಕೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತಂಡವನ್ನು ಪ್ರಕಟಿಸಿದ್ದಾರೆ. ಗಂಭೀರ್ ಆಯ್ಕೆ ಮಾಡಿದ ತಂಡದಲ್ಲಿ ಯಾರೆಲ್ಲ ಸ್ಥಾನ ಪಡೆದಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
 

1. ಶುಭ್‌ಮನ್‌ ಗಿಲ್‌: ಅಭ್ಯಾಸ ಪಂದ್ಯದಲ್ಲಿ ಗಮನ ಸೆಳೆದ ಯುವ ಬ್ಯಾಟ್ಸ್‌ಮನ್
2. ಮಯಾಂಕ್ ಅಗರ್‌ವಾಲ್: ರೋಹಿತ್ ಅನುಪಸ್ಥಿತಿಯಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಬೇಕಿದೆ.
Tap to resize

3. ಚೇತೇಶ್ವರ್ ಪೂಜಾರ: ಟೆಸ್ಟ್‌ ಸ್ಪೆಷಲಿಸ್ಟ್‌ ಬ್ಯಾಟ್ಸ್‌ಮನ್, ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಬೇಕಿದೆ.
4. ಅಜಿಂಕ್ಯ ರಹಾನೆ: ನಾಯಕತ್ವದ ಜತೆಗೆ ಬ್ಯಾಟಿಂಗ್‌ನಲ್ಲೂ ತಂಡಕ್ಕೆ ನೆರವಾಗಬೇಕಿದೆ.
5.ಕೆ.ಎಲ್. ರಾಹುಲ್: ಕೊಹ್ಲಿ ಸ್ಥಾನದಲ್ಲಿ ಕರ್ನಾಟಕದ ಮತ್ತೊಬ್ಬ ಆಟಗಾರ ಕೆ.ಎಲ್. ರಾಹುಲ್ ಮಧ್ಯಮ ಕ್ರಮಾಂಕಕ್ಕೆ ಬಲ ತುಂಬಬೇಕಿದೆ.
6.ರಿಷಭ್ ಪಂತ್: ವೃದ್ದಿಮಾನ್ ಸಾಹ ಸ್ಥಾನದಲ್ಲಿ ಯುವ ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್ ಪಂತ್‌ಗೆ ಗಂಭೀರ್ ಸ್ಥಾನ ನೀಡಿದ್ದಾರೆ.
7. ರವೀಂದ್ರ ಜಡೇಜಾ: ಹನುಮ ವಿಹಾರಿ ಬದಲಿಗೆ ಆಲ್ರೌಂಡರ್ ರವೀಂದ್ರ ಜಡೇಜಾಗೆ ಸ್ಥಾನ ಕಲ್ಪಿಸಲಾಗಿದೆ.
8. ರವಿಚಂದ್ರನ್ ಅಶ್ವಿನ್: ಅನುಭವಿ ಆಫ್‌ಸ್ಪಿನ್ನರ್ ಸಹಜವಾಗಿಯೇ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ.
9. ಉಮೇಶ್ ಯಾದವ್: ಅನುಭವಿ ವೇಗಿ ಉಮೇಶ್ ಯಾದವ್ ತಮ್ಮ ಸಾಮರ್ಥ್ಯಕ್ಕೆ ತಕ್ಕಂತ ಬೌಲಿಂಗ್ ದಾಳಿ ನಡೆಸಬೇಕಿದೆ.
10. ಜಸ್ಪ್ರೀತ್ ಬುಮ್ರಾ: ಟೀಂ ಇಂಡಿಯಾ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಮೇಲೂ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಸಾಕಷ್ಟು ನಿರೀಕ್ಷೆಯಿದೆ.
11. ನವದೀಪ್ ಸೈನಿಮೊಹಮ್ಮದ್ ಸಿರಾಜ್: ಆರ್‌ಸಿಬಿ ವೇಗಿಗಳಾದ ನವದೀಪ್ ಸೈನಿ ಇಲ್ಲವೇ ಮೊಹಮ್ಮದ್ ಸಿರಾಜ್ ಇಬ್ಬರಲ್ಲಿ ಒಬ್ಬರಿಗೆ ಸ್ಥಾನ ನೀಡಿದ್ದಾರೆ.

Latest Videos

click me!