Published : Feb 04, 2021, 02:11 PM ISTUpdated : Feb 04, 2021, 02:17 PM IST
ನವದೆಹಲಿ: ಬಹುನಿರೀಕ್ಷಿತ ಭಾರತ-ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಗೆ ಕ್ಷಣಗಣನೆ ಆರಂಭವಾಗಿದ್ದು, ಫೆಬ್ರವರಿ 05ರಿಂದ ಚೆನ್ನೈನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಎರಡು ತಂಡಗಳು ಮೇಲ್ನೋಟಕ್ಕೆ ಬಲಿಷ್ಠವಾಗಿ ಕಂಡುಬಂದಿದ್ದರೂ ಸಹಾ ಭಾರತ ಸರಣಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.
ಇಂಗ್ಲೆಂಡ್ ಎದುರಿನ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಬಲಿಷ್ಠ ತಂಡವನ್ನು ಆಯ್ಕೆ ಮಾಡಿದ್ದು, ಮಯಾಂಕ್ ಅಗರ್‌ವಾಲ್, ಇಶಾಂತ್ ಶರ್ಮಾ ಹಾರ್ದಿಕ್ ಪಾಂಡ್ಯ ಅವರಂತಹ ಸ್ಟಾರ್ ಆಟಗಾರರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಿಲ್ಲ. ಗಂಭೀರ್ ಆಯ್ಕೆ ಮಾಡಿದ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.