ಭಾರತ ದೇಸಿ ಕ್ರಿಕೆಟ್ ಲೆಜೆಂಡ್ ವಾಸೀಂ ಜಾಫರ್ ಇತ್ತೀಚೆಗಷ್ಟೇ ಎಲ್ಲಾ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ್ದಾರೆ. ಇದೀಗ ತಮ್ಮ ಕನಸಿಕ ಸಾರ್ವಕಾಲಿಕ ಏಕದಿನ ತಂಡವನ್ನು ಪ್ರಕಟಿಸಿದ್ದು, ಮಹೇಂದ್ರ ಸಿಂಗ್ ಧೋನಿಗೆ ನಾಯಕತ್ವ ಪಟ್ಟ ಕಟ್ಟಿದ್ದಾರೆ.
ವಾಸೀಂ ಜಾಫರ್ ಸಾರ್ವಕಾಲಿಕ ಏಕದಿನ ತಂಡದಲ್ಲಿ ನಾಲ್ವರು ಭಾರತೀಯರು ಸ್ಥಾನ ಪಡೆದಿದ್ದಾರೆ. ಅಚ್ಚರಿಯ ರೀತಿಯಲ್ಲಿ ಜಾಫರ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಟೆಸ್ಟ್‌ನಲ್ಲಿ ಜಾಫರ್‌ರೊಂದಿಗೆ ಇನಿಂಗ್ಸ್ ಆರಂಭಿಸುತ್ತಿದ್ದ ಸ್ಫೋಟಕ ಬ್ಯಾಟ್ಸ್‌ಮನ್ ವಿರೇಂದ್ರ ಸೆಹ್ವಾಗ್‌ಗೆ ಜಾಫರ್ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಆಸೀಸ್ ದಿಗ್ಗಜ ಕ್ರಿಕೆಟಿಗ ರಿಕಿ ಪಾಂಟಿಂಗ್ 12ನೇ ಆಟಗಾರನಾಗಿ ಸ್ಥಾನ ಪಡೆದಿದ್ದಾರೆ. ವಾಸೀಂ ಜಾಫರ್ ತಂಡದಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.