ಕ್ರಿಕೆಟ್ ಆಡುತ್ತಿರುವಾಗಲೇ ಕುಸಿದು ಬಿದ್ದ ಆಟಗಾರ; ಶಿವಮೊಗ್ಗ ಮೂಲದ ಕರ್ನಾಟಕ ಕ್ರಿಕೆಟಿಗ ಹೃದಯಾಘಾತದಿಂದ ನಿಧನ!

Published : May 24, 2026, 05:38 PM IST

ಬೆಂಗಳೂರು: ಇತ್ತೀಚಿಗಿನ ದಿನಗಳಲ್ಲಿ ನಡುವಯಸ್ಸಿನ ವ್ಯಕ್ತಿಗಳು ಹೃದಯಾಘಾತದಿಂದ ಕೊನೆಯುಸಿರೆಳೆಯುತ್ತಿರುವ ಆಘಾತಕಾರಿ ಘಟನೆಗಳು ನಡೆಯುತ್ತಲೇ ಇದೆ. ಇದೀಗ 2015ರ ಕರ್ನಾಟಕ ರಣಜಿ ತಂಡದ ಆಟಗಾರ ಶಿವಮೊಗ್ಗ ಮೂಲದ ಅಕ್ಷಯ್ ಎಸ್‌.ಎಲ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 

PREV
16
ಹೃದಯಘಾತಕ್ಕೆ ಮತ್ತೊಂದು ಬಲಿ

ಕೆಲ ದಿನಗಳ ಹಿಂದಷ್ಟೇ ಕಿರುತೆರೆಯ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದರು. ಈ ಘಟನೆ ಮಾಸುವ ಮುನ್ನವೇ ತೀರ್ಥಹಳ್ಳಿ ಮೂಲದ ಸಂಭಾಷಣೆಕಾರ ಟಿ.ಜಿ. ನಂದೀಶ್ ಕೂಡಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು.

26
2015ರ ಕರ್ನಾಟಕ ರಣಜಿ ಟ್ರೋಫಿ ವಿಜೇತ ತಂಡದ ಸದಸ್ಯ

ಇದೀಗ 2015ರ ಕರ್ನಾಟಕ ರಣಜಿ ಟ್ರೋಫಿ ವಿಜೇತ ತಂಡದ ಸದಸ್ಯ, ಶಿವಮೊಗ್ಗ ಮೂಲದ 39 ವರ್ಷದ ಕ್ರಿಕೆಟಿಗ ಎಸ್.ಎಲ್ ಅಕ್ಷಯ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ದುರ್ಗಿಗುಡಿ ಕ್ರಿಕೆಟ್ ಕ್ಲಬ್‌ನ ಆಟಗಾರರಾಗಿದ್ದ ಅಕ್ಷಯ್ ಮಧ್ಯಮ ವೇಗದ ಬೌಲರ್ ಹಾಗೂ ಉತ್ತಮ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದರು. ಸದ್ಯ ಕರ್ನಾಟಕ ಅಂಡರ್-19 ಕ್ರಿಕೆಟ್ ತಂಡದ ಕೋಚ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.

36
KSCA ಲೀಗ್ ಪಂದ್ಯಾವಳಿ ವೇಳೆ ಅಕ್ಷಯ್‌ಗೆ ಹೃದಯಾಘಾತ

KSCA ಲೀಗ್ ಪಂದ್ಯಾವಳಿ ವೇಳೆ ಹೃದಯಾಘಾತ ಸಂಭವಿಸಿದೆ. ಬೆಂಗಳೂರಿನ ಎಸ್ ಎಲ್ ಎಸ್ ಕ್ರೀಡಾಂಗಣದಲ್ಲಿ KSCA nassur memorial shield ಏಕದಿನ ಲೀಗ್ ಪಂದ್ಯಾವಳಿ ನಡೆಯುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ.

46
KSCA 3rd ಡಿವಿಸನ್ ಲೀಗ್ ಪಂದ್ಯದಲ್ಲಿ ದುರ್ಘಟನೆ

KSCA 3rd ಡಿವಿಸನ್ ಲೀಗ್ ಪಂದ್ಯವಾಡುತ್ತಿದ್ದಾಗ ಅಕ್ಷಯ್ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿದೆ. ನಾಲ್ಕು ಓವರ್ ಬೌಲಿಂಗ್ ಮಾಡಿ ಆರೋಗ್ಯ ಸಮಸ್ಯೆ ಎಂದು ಅಕ್ಷಯ್ ಹೊರಬಂದಿದ್ದರು. ಬಳಿಕ ನೀರು ಕುಡಿಯುತ್ತಿದ್ದಂತೆಯೇ ಸ್ಥಳದಲ್ಲಿಯೇ ಕುಸಿದುಬಿದ್ದಿದ್ದರು.

56
ಇಂದಿನ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ ಒಂದು ವಿಕೆಟ್ ಪಡೆದಿದ್ದ ಅಕ್ಷಯ್

ಇಂದು ನಡೆಯುತ್ತಿದ್ದ ಪಂದ್ಯದಲ್ಲಿ ಅಕ್ಷಯ್ 4 ಓವರ್ ಬೌಲಿಂಗ್ ಮಾಡಿ ಕೇವಲ 19 ರನ್ ನೀಡಿ ಒಂದು ವಿಕೆಟ್ ಕಬಳಿಸಿದ್ದರು. ಇನ್ನು ಅಕ್ಷಯ್ ಕರ್ನಾಟಕ ಪರ 6 ರಣಜಿ, 3 ಏಕದಿನ ಪಂದ್ಯಗಳನ್ನಾಡಿದ್ದರು.

66
ಮಾರ್ಗಮಧ್ಯದಲ್ಲಿಯೇ ಕೊನೆಯುಸಿರೆಳೆದ ಅಕ್ಷಯ್

ತಕ್ಷಣವೇ ಅಕ್ಷಯ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಇದೀಗ ಅವಲಹಳ್ಳಿಯ ಈಸ್ಟ್ ಪಾಯಿಂಟ್‌ ಆಸ್ಪತ್ರೆಯಲ್ಲಿ ಮೃತದೇಹವನ್ನು ಇಡಲಾಗಿದೆ. ಅಕ್ಷಯ್ ನಿಧನಕ್ಕೆ ಕರ್ನಾಟಕ ಕ್ರಿಕೆಟ್ ವಲಯ ಕಂಬನಿ ಮಿಡಿದಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories