ಬೆಂಗಳೂರು: ಭಾರತದ ಪ್ರತಿಭಾನ್ವಿತ ವೇಗಿ ಹಾಗೂ ಆರ್‌ಸಿಬಿ ಮಾಜಿ ಕ್ರಿಕೆಟಿಗ ವೈಶಾಕ್ ವಿಜಯ್‌ಕುಮಾರ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಸಿದ್ದಾರೆ. ಈ ಸಂದರ್ಭದಲ್ಲಿ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನವ ಜೋಡಿಗೆ ಶುಭ ಹಾರೈಸಿದ್ದಾರೆ.
ಕರ್ನಾಟಕದ ತಂಡದ ಪ್ರತಿಭಾನ್ವಿತ ವೇಗದ ಬೌಲರ್, ಆರ್‌ಸಿಬಿ ತಂಡದ ಮಾಜಿ ವೇಗಿ ವೈಶಾಕ್ ವಿಜಯ್ ಕುಮಾರ್ ತಮ್ಮ ಬಹುಕಾಲದ ಗೆಳತಿ ಸಾಗರಿಕಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಈ ಸಂದರ್ಭದಲ್ಲಿ ಹಲವು ಸ್ಟಾರ್ ಕ್ರಿಕೆಟಿಗರು ಹಾಗೂ ಸೆಲಿಬ್ರಿಟಿಗಳು ಪಾಲ್ಗೊಂಡು ಶುಭ ಹಾರೈಸಿದ್ದಾರೆ.
25
ವೈಶಾಕ್ ಮದುವೆಗೆ ಬಂದು ಶುಭ ಹಾರೈಸಿದ ಕಿಚ್ಚ ಸುದೀಪ್
ವೈಶಾಕ್ ವಿಜಯ್‌ಕುಮಾರ್ ಅಭಿನಯ ಚಕ್ರವರ್ತಿ ಖ್ಯಾತಿಯ ಕಿಚ್ಚ ಸುದೀಪ್ ಅವರನ್ನು ಮದುವೆಗೆ ಆಹ್ವಾನಿಸಿದ್ದರು. ಅದರಂತೆ ಇಂದು ನಡೆದ ಮದುವೆಯ ಶುಭ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್, ನವ ಜೋಡಿಗೆ ಶುಭಹಾರೈಸಿದರು.
35
ವೈಶಾಕ್ ಮದುವೆಯಲ್ಲಿ ಪಡಿಕ್ಕಲ್ ಭಾಗಿ
ಇನ್ನು ವೈಶಾಕ್ ಮದುವೆಯ ವೇಳೆಯಲ್ಲಿ ಸಹ ಆಟಗಾರ ಹಾಗೂ ಕರ್ನಾಟಕ ರಣಜಿ ಕ್ರಿಕೆಟ್ ತಂಡದ ನಾಯಕ ದೇವದತ್ ಪಡಿಕ್ಕಲ್ ಕೂಡಾ ಪಾಲ್ಗೊಂಡು ನವ ಜೋಡಿಗೆ ಶುಭ ಹಾರೈಸಿದರು.
ಇನ್ನು ಕ್ರಿಕೆಟ್ ವಿಚಾರಕ್ಕೆ ಬರುವುದಾದರೇ, ವೈಶಾಕ್ ವಿಜಯ್‌ಕುಮಾರ್ ಇತ್ತೀಚೆಗಷ್ಟೇ ಮುಕ್ತಾಯವಾದ ರಣಜಿ ಟ್ರೋಫಿ ಫೈನಲ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು. ಆದರೆ ಫೈನಲ್‌ನಲ್ಲಿ ಕರ್ನಾಟಕ ತಂಡವು, ಜಮ್ಮು ಮತ್ತು ಕಾಶ್ಮೀರ ಎದುರು ಮುಗ್ಗರಿಸಿತ್ತು.
55
ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯಲಿರುವ ವೈಶಾಕ್
ಕರ್ನಾಟಕ ತಂಡದ ಅತ್ಯಂತ ನಂಬಿಗಸ್ಥ ಬೌಲಿಂಗ್ ಆಲ್ರೌಂಡರ್ ಆಗಿ ಗುರುತಿಸಿಕೊಂಡಿರುವ ವೈಶಾಕ್ ವಿಜಯ್‌ಕುಮಾರ್, ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಮಿಂಚಿನ ಪ್ರದರ್ಶನ ತೋರಿ ಗಮನ ಸೆಳೆದಿದ್ದರು. ಇದೀಗ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ವೈಶಾಕ್ ಪಂಜಾಬ್ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.