Good News: ನಿವೃತ್ತಿ ವಾಪಾಸ್ ಪಡೆದು ಟಿ20 ವಿಶ್ವಕಪ್ ಆಡಲು ತೀರ್ಮಾನಿಸಿದ ದಕ್ಷಿಣ ಆಫ್ರಿಕಾದ ಆರ್‌ಸಿಬಿ ಕ್ರಿಕೆಟಿಗ..!

Published : Dec 07, 2023, 05:42 PM IST

ಬೆಂಗಳೂರು: 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಮುಕ್ತಾಯವಾಗಿದ್ದು, ಇದೀಗ ಎಲ್ಲಾ ಕ್ರಿಕೆಟ್ ತಂಡಗಳ ಚಿತ್ತ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಮೇಲೆ ನೆಟ್ಟಿದೆ. ಹೀಗಿರುವಾಗಲೇ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಇದೀಗ ನಿವೃತ್ತಿ ವಾಪಾಸ್ ಪಡೆದು, ಮುಂಬರುವ ಟಿ20 ವಿಶ್ವಕಪ್ ಟೂರ್ನಿ ಆಡಲು ತೀರ್ಮಾನಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.  

PREV
17
Good News: ನಿವೃತ್ತಿ ವಾಪಾಸ್ ಪಡೆದು ಟಿ20 ವಿಶ್ವಕಪ್ ಆಡಲು ತೀರ್ಮಾನಿಸಿದ ದಕ್ಷಿಣ ಆಫ್ರಿಕಾದ ಆರ್‌ಸಿಬಿ ಕ್ರಿಕೆಟಿಗ..!

ದಕ್ಷಿಣ ಆಫ್ರಿಕಾ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್‌ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಲು ಎದುರು ನೋಡುತ್ತಿದ್ದಾರೆ. ಮುಂಬರುವ ಟಿ20 ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಫಾಫ್ ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಮುಂದಾಗಿದ್ದಾರೆ.
 

27

ಫಾಫ್ ಡು ಪ್ಲೆಸಿಸ್‌ 2021ರಲ್ಲಿ ರಾವುಲ್ಪಿಂಡಿಯಲ್ಲಿ ಪಾಕಿಸ್ತಾನ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಕೊನೆಯ ಬಾರಿಗೆ ಅಂತರಾಷ್ಟ್ರೀಯ ಕ್ರಿಕೆಟ್ ಆಡಿದ್ದರು. ಇನ್ನು 2020ರಲ್ಲಿ ಇಂಗ್ಲೆಂಡ್ ವಿರುದ್ದ ಕೊನೆಯ ಬಾರಿಗೆ ಫಾಫ್ ಅಂತರಾಷ್ಟ್ರೀಯ ಟಿ20 ಪಂದ್ಯವನ್ನಾಡಿದ್ದರು.

37

39 ವರ್ಷದ ಫಾಫ್ ಡು ಪ್ಲೆಸಿಸ್‌ ಇತ್ತೀಚೆಗಿನ ಡೊಮೆಸ್ಟಿಕ್ ಲೆವೆಲ್ ಟೂರ್ನಿಗಳಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ. ಇದಷ್ಟೇ ಅಲ್ಲದೇ ಕಳೆದ ಐಪಿಎಲ್ ಟೂರ್ನಿಯಲ್ಲಿ ಫಾಫ್ ಡು ಪ್ಲೆಸಿಸ್ ಎರಡನೇ ಗರಿಷ್ಠ ರನ್ ಸರದಾರರಾಗಿ ಹೊರಹೊಮ್ಮಿದ್ದರು.

47

ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಪರ ಫಾಫ್ ಡು ಪ್ಲೆಸಿಸ್ 14 ಇನಿಂಗ್ಸ್‌ಗಳನ್ನಾಡಿ 730 ರನ್ ಸಿಡಿಸುವ ಮೂಲಕ ತಮ್ಮಲ್ಲಿ ಇನ್ನೂ ಕ್ರಿಕೆಟ್ ಉಳಿದಿದೆ ಎನ್ನುವುದನ್ನು ಜಗತ್ತಿನ ಮುಂದೆ ಮತ್ತೊಮ್ಮೆ ಅನಾವರಣ ಮಾಡಿದ್ದರು. ಆರ್‌ಸಿಬಿ ಪರ ಫಾಫ್ ನಾಯಕನ ಆಟ ಆಡುವಲ್ಲಿ ಯಶಸ್ವಿಯಾಗಿದ್ದರು.
 

57

ಸದ್ಯ ಅಬುಧಾಬಿ ಟಿ10 ಟೂರ್ನಿಯಲ್ಲಿ ಆಡುತ್ತಿರುವ ಫಾಫ್ ಡು ಪ್ಲೆಸಿಸ್, ಮುಂಬರುವ ಟಿ20 ವಿಶ್ವಕಪ್ ನಲ್ಲಿ ಆಡುವ ಬಗ್ಗೆ ದಕ್ಷಿಣ ಆಫ್ರಿಕಾದ ಸೀಮಿತ ಓವರ್ ತಂಡದ ಕೋಚ್ ರಾಬ್ ವಾಲ್ಟರ್ ಜೊತೆ ಚರ್ಚೆ ನಡೆಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
 

67

ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಹಿಂದಿರುಗುವ ವಿಶ್ವಾಸವಿದೆ ಎಂದು ಹೇಳುವ ಮೂಲಕ ಫಾಫ್ ತಮ್ಮ ಅಭಿಮಾನಿಗಳಿಗೆ ಗುಡ್‌ ನ್ಯೂಸ್ ನೀಡಿದ್ದಾರೆ. 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ವೆಸ್ಟ್ ಇಂಡೀಸ್ ಹಾಗೂ ಅಮೆರಿಕ ಆತಿಥ್ಯ ವಹಿಸಿದೆ.
 

77

ದಕ್ಷಿಣ ಆಫ್ರಿಕಾದ ಅತ್ಯಂತ ಫಿಟ್ ಆಗಿರುವ ಕ್ರಿಕೆಟಿಗರಲ್ಲಿ ಫಾಫ್ ಡು ಪ್ಲೆಸಿಸ್ ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ಫಾಫ್ 2014 ಹಾಗೂ 2016ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ನಾಯಕನಾಗಿ ಹರಿಣಗಳ ಪಡೆಯನ್ನು ಮುನ್ನಡೆಸಿದ್ದರು ಎನ್ನುವುದನ್ನು ಸ್ಮರಿಸಬಹುದಾಗಿದೆ.

Read more Photos on
click me!

Recommended Stories