ರಾಂಚಿ: ಟೀಂ ಇಂಡಿಯಾ (Team India) ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ(MS Dhoni) ತಮ್ಮ 43 ಎಕರೆ ತೋಟದಲ್ಲಿ ವಿವಿಧ ಹಣ್ಣು ಹಾಗೂ ತರಕಾರಿಗಳನ್ನು ಬೆಳೆದಿದ್ದು, ಸಾರ್ವಜನಿಕರಿಗೆ ತಮ್ಮ ಫಾರ್ಮ್‌ಗೆ ಪ್ರವೇಶಿಸಿ ಹಣ್ಣು ಹಾಗೂ ತರಕಾರಿಗಳನ್ನು ಕೊಂಡೊಯ್ಯಲು ಮುಕ್ತ ಅವಕಾಶ ನೀಡಿದ್ದಾರೆ. ತಮಗೆ ಬೇಕಾದ ಹಣ್ಣು ಹಾಗೂ ತರಕಾರಿಗಳನ್ನು ಸ್ವತಃ ಕೊಯ್ದುಕೊಳ್ಳಲು ಅವಕಾಶ ನೀಡಲಾಗಿದೆ ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಹೋಳಿ ಹಬ್ಬದ ಪ್ರಯುಕ್ತ ರಾಂಚಿಯ ತಮ್ಮ ತೋಟಕ್ಕೆ ಭಾರತ ಕ್ರಿಕಟ್ ತಂಡದ ಮಾಜಿ ನಾಯಕ, ದಿಗ್ಗಜ ಕ್ರಿಕೆಟಿಗ ಎಂ.ಎಸ್.ಧೋನಿ ಪ್ರವೇಶ ಕಲ್ಪಿಸಿದ್ದಾರೆ. ಧೋನಿ ತಮ್ಮ ಫಾರ್ಮ್‌ಗೆ ಎಜಾ ಎಂದು ಹೆಸರಿಟ್ಟಿದ್ದಾರೆ.
26
ರಾಂಚಿ ನಗರದ ಹೊರವಲಯದಲ್ಲಿ 43 ಎಕರೆ ಪ್ರದೇಶದಲ್ಲಿ ತಾವು ಸಾವಯವ ಕೃಷಿ ನಡೆಸುತ್ತಿದ್ದು, ಅಲ್ಲಿ ಬೆಳೆದಿರುವ ಬಗೆಬಗೆಯ ತರಕಾರಿ ಹಾಗೂ ಹಣ್ಣುಗಳನ್ನು ಉಚಿತವಾಗಿ ಹಂಚಲಾಗುತ್ತಿದೆ ಎಂದು ತಿಳಿದುಬಂದಿದೆ.
36
ಮಹೇಂದ್ರ ಸಿಂಗ್ ಧೋನಿಯವರ ಫಾರ್ಮ್‌ನಲ್ಲಿ ಸ್ಟ್ರಾಬೆರಿ, ಕ್ಯಾಪ್ಸಿಕಮ್, ಡ್ರ್ಯಾಗನ್ ಫ್ರೂಟ್, ಕಲ್ಲಂಗಡಿ ಮುಂತಾದ ಹಣ್ಣುಗಳು ಸೇರಿದಂತೆ ವಿವಿಧ ರೀತಿಯ ತರಕಾರಿಗಳನ್ನು ಬೆಳೆಯುವ ಮೂಲಕ ಹಲವರ ಪಾಲಿಗೆ ಸ್ಪೂರ್ತಿ ಹಾಗೂ ಮಾದರಿಯಾಗಿದ್ದಾರೆ
46
ಕೃಷಿ ಜೊತೆಗೆ ಧೋನಿ ದೇಸಿ ಹಸುಗಳು, ಕೋಳಿ, ಮೀನು ಸಾಕಾಣಿಕೆಯನ್ನೂ ಮಾಡುತ್ತಿದ್ದಾರೆ. ಸದ್ಯದಲ್ಲೇ ಜೇನು ಹುಳು ಸಾಕಾಣಿಕೆಯನ್ನೂ ಆರಂಭಿಸಲಿದ್ದಾರೆ ಎನ್ನಲಾಗಿದೆ.
56
ಶುಕ್ರವಾರದಿಂದ ಆರಂಭಗೊಂಡ ಈ ಕಾರ‍್ಯಕ್ರಮ, ಭಾನುವಾರದ ವರೆಗೂ ನಡೆಯಲಿದ್ದು ಭಾರೀ ಸಂಖ್ಯೆಯಲ್ಲಿ ಜನ ಭೇಟಿ ನೀಡುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮೂರು ದಿನಗಳ ಕಾಲ ಸಾರ್ವಜನಿಕರಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ
66
ಸದ್ಯ ಮಹೇಂದ್ರ ಸಿಂಗ್ ಧೋನಿ, ಮುಂಬೈನಲ್ಲಿ ಬೀಡುಬಿಟ್ಟಿದ್ದು, 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಭರ್ಜರಿ ಸಿದ್ದತೆಯನ್ನು ಆರಂಭಿಸಿದ್ದಾರೆ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತ್ತು