ಅಜಿಂಕ್ಯ ರಹಾನೆ ನಿವೃತ್ತಿ ಬೆನ್ನಲ್ಲೇ ಅದೇ ಹಾದಿ ಹಿಡಿಯಲು ರೆಡಿಯಾದ ಐವರು ಕ್ರಿಕೆಟಿಗರು! ಲಿಸ್ಟ್‌ನಲ್ಲಿದ್ದಾರೆ ಏಕೈಕ ಕನ್ನಡಿಗ

Published : Jul 30, 2026, 04:46 PM IST

ಬೆಂಗಳೂರು: ಮುಂಬೈ ಮೂಲದ ಸ್ಟಾರ್ ಕ್ರಿಕೆಟಿಗ ಅಜಿಂಕ್ಯ ರಹಾನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಇನ್ನೂ ಐದು ಕ್ರಿಕೆಟಿಗರು ನಿವೃತ್ತಿಯ ಹಾದಿಯಲ್ಲಿದ್ದಾರೆ. ಈ ಪಟ್ಟಿಯಲ್ಲಿ ಏಕೈಕ ಕನ್ನಡಿನ ಹೆಸರೂ ಇದೆ. ಈ ಕುರಿತಾದ ಹೆಚ್ಚಿನ ಡೀಟೈಲ್ಸ್ ಇಲ್ಲಿದೆ ನೋಡಿ

PREV
16
ರಹಾನೆ ಹಾದಿಯಲ್ಲಿದ್ದಾರೆ ಐವರು ಆಟಗಾರರು

ಅಜಿಂಕ್ಯ ರಹಾನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇಂದು ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ತಂಡದಿಂದ ಹೊರಗುಳಿದಿದ್ದ ರಹಾನೆ ಕೊನೆಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಇದೀಗ ರಹಾನೆ ಮಾತ್ರವಲ್ಲದೇ ಅವರಂತೆಯೇ ಆಯ್ಕೆ ಸಮಿತಿಯಿಂದ ಪದೇ ಪದೇ ಕಡೆಗಣಿಸಲ್ಪುಡುತ್ತಿರುವ ಈ ಐವರು ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸುವ ಹೊಸ್ತಿಲಲ್ಲಿದ್ದಾರೆ. ಅಷ್ಟಕ್ಕೂ ಯಾರು ಆ ಆಟಗಾರರು ಎನ್ನುವುದನ್ನು ನೋಡೋಣ ಬನ್ನಿ

26
1. ಭುವನೇಶ್ವರ್ ಕುಮಾರ್:

ಸ್ವಿಂಗ್ ಕಿಂಗ್ ಖ್ಯಾತಿಯ ಭುವನೇಶ್ವರ್ ಕುಮಾರ್ ಕಳೆದೆರಡು ಸೀಸನ್ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ತಂಡ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೀಗಿದ್ದು ಸಾಕಷ್ಟು ಸಮಯದಿಂದ ಭುವಿ ಆಯ್ಕೆ ಸಮಿತಿಯಿಂದ ಕಡೆಗಣನೆಗೊಳಗಾಗಿದ್ದಾರೆ. ಹೀಗಾಗಿ ಭುವಿ ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸುವ ಸಮಯ ದೂರವಿಲ್ಲ ಎನ್ನಲಾಗುತ್ತಿದೆ.

36
2. ಶಾರ್ದೂಲ್ ಠಾಕೂರ್:

ಶಾರ್ದೂರ್ ಠಾಕೂರ್ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕು ಡೋಲಾಯಮಾನವಾಗಿದೆ. ಅದರಲ್ಲೂ ಭಾರತ ತಂಡಕ್ಕೆ ಹರ್ಷಿತ್ ರಾಣಾ ಹಾಗೂ ಗುರ್ನೂರ್ ಬ್ರಾರ್ ಎಂಟ್ರಿಕೊಟ್ಟ ಮೇಲಂತೂ ಶಾರ್ದೂಲ್ ಠಾಕೂರ್ ಟೀಂ ಇಂಡಿಯಾ ಕಮ್‌ಬ್ಯಾಕ್ ಹಾದಿ ಮತ್ತಷ್ಟು ಕಠಿಣವಾಗಿದೆ. ಇದೀಗ ಶಾರ್ದೂಲ್ ಠಾಕೂರ್ ಕಮೆಂಟ್ರಿ ಮಾಡುತ್ತಿದ್ದು, ಸದ್ಯದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದರೆ ಅಚ್ಚರಿಯೇನಿಲ್ಲ.

46
3. ಇಶಾಂತ್ ಶರ್ಮಾ:

ಇಶಾಂತ್ ಶರ್ಮಾ ಭಾರತ ಟೆಸ್ಟ್ ತಂಡವು ಕಂಡ ಅತ್ಯಂತ ಯಶಸ್ವಿ ವೇಗದ ಬೌಲರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಆದರೆ ಇಶಾಂತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಬದುಕಿನ ಸಂಧ್ಯಾಕಾಲದಲ್ಲಿದ್ದಾರೆ. 37 ವರ್ಷದ ಇಶಾಂತ್ ಶರ್ಮಾ ಮತ್ತೆ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡುವುದು ಕಷ್ಟಸಾಧ್ಯವಾದ ಮಾತು. ಹೀಗಾಗಿ ಸದ್ಯದಲ್ಲೇ ಇಶಾಂತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವ ಸಾಧ್ಯತೆಯಿದೆ.

56
4. ಕರುಣ್ ನಾಯರ್:

ಟೆಸ್ಟ್‌ ಕ್ರಿಕೆಟ್‌ನಲ್ಲಿ ತ್ರಿಶತಕ ಬಾರಿಸಿದ ಎರಡನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದ ಕನ್ನಡಿಗ ಕರುಣ್ ನಾಯರ್, ಇತ್ತೀಚೆಗಷ್ಟೇ ಟೀಂ ಇಂಡಿಯಾಗೆ ಏಳು ವರ್ಷಗಳ ಬಳಿಕ ಕಮ್‌ಬ್ಯಾಕ್ ಮಾಡಿದ್ದರು. ಆದರೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕರುಣ್ ನಾಯರ್ ವಿಫಲರಾಗಿದ್ದರು. ಸಿಕ್ಕ ನಾಲ್ಕು ಅವಕಾಶ ಕೈಚೆಲ್ಲಿರುವ ಕರುಣ್‌ ನಾಯರ್ ಮತ್ತೆ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡೋದು ಅನುಮಾನ. ಹೀಗಾಗಿ ಕರುಣ್ ನಾಯರ್ ಕೂಡಾ ನಿವೃತ್ತಿ ಹೊಸ್ತಿಲಲ್ಲಿದ್ದಾರೆ.

66
5. ಮೊಹಮ್ಮದ್ ಶಮಿ:

ಮೊಹಮ್ಮದ್ ಶಮಿ ದೇಶಿ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನದ ಹೊರತಾಗಿಯೂ ಬಿಸಿಸಿಐ ಆಯ್ಕೆ ಸಮಿತಿ ಪದೇ ಪದೇ ಅವರನ್ನು ಕಡೆಗಣಿಸುತ್ತಿದೆ. ಇದೇ ಕಾರಣಕ್ಕೆ ಮುಂಬರುವ ದಿನಗಳಲ್ಲಿ ಶಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸುವ ಸಾಧ್ಯತೆಯಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories