ಮೊದಲ ಟೆಸ್ಟ್ ಸೋಲಿನ ಬೆನ್ನಲ್ಲೇ ಫ್ಯಾನ್ಸ್‌ಗೆ ಮತ್ತೊಂದು ಶಾಕ್ ಕೊಟ್ಟ ಗಂಭೀರ್, ಕ್ಯಾಪ್ಟನ್‌ ಗಿಲ್‌ಗೂ ಟೆನ್ಶನ್ ಶುರು!

Published : Jun 25, 2025, 02:30 PM IST

ಬೆಂಗಳೂರು: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ ಅಂತರದ ಹೀನಾಯ ಸೋಲು ಅನುಭವಿಸಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಹೆಡ್‌ ಕೋಚ್ ಗೌತಮ್ ಗಂಭೀರ್ ಮತ್ತೊಂದು ಆಘಾತಕಾರಿ ಸುದ್ದಿ ಹೊರಹಾಕಿದ್ದಾರೆ.

PREV
18

ಹೆಡಿಂಗ್ಲೆ ಟೆಸ್ಟ್‌ ಪಂದ್ಯದಲ್ಲಿ ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ 371 ರನ್‌ಗಳ ಬೃಹತ್ ಮೊತ್ತ ರಕ್ಷಿಸಿಕೊಳ್ಳಲು ವಿಫಲವಾಗಿದೆ. ಈ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 0-1ರ ಹಿನ್ನಡೆ ಅನುಭವಿಸಿದೆ.

28

ನಾಲ್ಕನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ನಿಟ್ಟಿನಲ್ಲಿ ಇಂಗ್ಲೆಂಡ್ ಎದುರಿನ ಸರಣಿಯು ಟೀಂ ಇಂಡಿಯಾ ಪಾಲಿಗೆ ಸಾಕಷ್ಟು ಮಹತ್ವದ್ದೆನಿಸಿಕೊಂಡಿದೆ. ಹೀಗಿರುವಾಗಲೇ ಮೊದಲ ಟೆಸ್ಟ್ ಸೋಲಿನ ಬೆನ್ನಲ್ಲೇ ಫ್ಯಾನ್ಸ್‌ಗೆ ಗೌತಮ್ ಗಂಭೀರ್ ಮತ್ತೊಂದು ಶಾಕಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ.

38

ಮೊದಲ ಟೆಸ್ಟ್ ಪಂದ್ಯ ಮುಕ್ತಾಯದ ಬಳಿಕ ಪ್ರೆಸ್ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿ ಮಾತನಾಡಿದ ಗಂಭೀರ್, ಟೀಂ ಇಂಡಿಯಾ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಅವರ ಕುರಿತಂತೆ ಮಹತ್ವದ ಅಪ್‌ಡೇಟ್‌ ನೀಡಿದ್ದಾರೆ.

48

ಟೀಂ ಇಂಡಿಯಾ ಹೆಡ್‌ ಕೋಚ್ ಗೌತಮ್ ಗಂಭೀರ್ ನೀಡಿದ ಈ ಅಪ್‌ಡೇಟ್‌ ಭಾರತ ಟೆಸ್ಟ್ ತಂಡದ ನಾಯಕ ಶುಭ್‌ಮನ್ ಗಿಲ್ ಅವರ ಟೆನ್ಶನ್ ಮತ್ತಷ್ಟು ಹೆಚ್ಚುವಂತೆ ಮಾಡಿದೆ.

58

ಮೊದಲ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ಗೆ ಗೆಲ್ಲಲು ಭಾರತ 371 ರನ್ ಗುರಿ ನೀಡಿತ್ತು. ಹೀಗಿದ್ದೂ ಟೀಂ ಇಂಡಿಯಾ ಬೌಲರ್‌ಗಳು ಈ ಬೃಹತ್ ಮೊತ್ತ ರಕ್ಷಿಸಿಕೊಳ್ಳಲು ವಿಫಲವಾಗಿದ್ದರು. ನಾಲ್ಕನೇ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಬೌಲರ್ಸ್‌ ಇಂಗ್ಲೆಂಡ್ ವಿಕೆಟ್ ಕಬಳಿಸಲಿ ಪರದಾಡಿದ್ದು ಕಂಡು ಬಂತು.

68

ಇದೀಗ ಗಂಭೀರ್, ಜಸ್ಪ್ರೀತ್ ಬುಮ್ರಾ ಅವರ ವರ್ಕ್‌ಲೋಡ್ ಬಗ್ಗೆ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಬುಮ್ರಾ, ಇಂಗ್ಲೆಂಡ್ ಎದುರಿನ ಎಲ್ಲಾ 5 ಟೆಸ್ಟ್ ಪಂದ್ಯಗಳನ್ನು ಆಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

78

ಜಸ್ಪ್ರೀತ್ ಬುಮ್ರಾ, ಇಂಗ್ಲೆಂಡ್ ಎದುರು ಕೇವಲ ಮೂರು ಟೆಸ್ಟ್ ಪಂದ್ಯಗಳನ್ನಷ್ಟೇ ಆಡುತ್ತಾರೆ. ಎರಡು ಟೆಸ್ಟ್ ಪಂದ್ಯಗಳನ್ನು ಆಡುವುದಿಲ್ಲ ಎಂದು ಗಂಭೀರ್ ಖಚಿತಪಡಿಸಿದ್ದಾರೆ.

88

ಜಸ್ಪ್ರೀತ್ ಬುಮ್ರಾ, ಇಂಗ್ಲೆಂಡ್ ಎದುರಿನ ಮೊದಲ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಕಬಳಿಸಿದ್ದರು. ಇದೀಗ ಬುಮ್ರಾ ಇನ್ನುಳಿದ 4 ಪಂದ್ಯಗಳ ಪೈಕಿ ಯಾವ ಎರಡು ಟೆಸ್ಟ್‌ ಪಂದ್ಯದಲ್ಲಿ ಆಡುತ್ತಾರೆ ಎನ್ನುವುದನ್ನು ಗಂಭೀರ್ ಸ್ಪಷ್ಟಪಡಿಸಿಲ್ಲ.

Read more Photos on
click me!

Recommended Stories