ಬೆಂಗಳೂರು: ಭಾರತ ಕ್ರಿಕೆಟ್ ತಂಡವು ಸದ್ಯ ಆಫ್ಘಾನಿಸ್ತಾನ ಎದುರಿನ ಮೂರು ಪಂದ್ಯಗಳ ಟಿ20 ಸರಣಿಗೆ ಸಜ್ಜಾಗುತ್ತಿದೆ. ಈ ಸರಣಿ ಮುಕ್ತಾಯವಾಗುತ್ತಿದ್ದಂತೆಯೇ ಟೀಂ ಇಂಡಿಯಾ, ಏಷ್ಯನ್ ಗೇಮ್ಸ್‌ನಲ್ಲಿ ಪಾಲ್ಗೊಳ್ಳಲಿದೆ. ಈ ಟೂರ್ನಿಗೆ ಹೆಡ್ ಕೋಚ್ ಆಗಿ ಗಂಭೀರ್ ಇರುವುದಿಲ್ಲ..!
2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಜಪಾನ್ ಆತಿಥ್ಯ ವಹಿಸಿದೆ. ಈ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲಲು ಭಾರತ ಕ್ರಿಕೆಟ್ ತಂಡವು ಎದುರು ನೋಡುತ್ತಿದೆ. ಸೆಪ್ಟೆಂಬರ್ 24ರಿಂದ ಆರಂಭವಾಗಲಿರುವ ಪುರುಷರ ಏಷ್ಯನ್ ಗೇಮ್ಸ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ನಾಯಕನಾಗಿ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.
26
ಗಂಭೀರ್, ಜಪಾನ್ ಪ್ರವಾಸ ಮಾಡುತ್ತಿಲ್ಲ
ಆದರೆ ಟೀಂ ಇಂಡಿಯಾ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್, ಜಪಾನ್‌ಗೆ ಪ್ರಯಾಣ ಬೆಳೆಸುತ್ತಿಲ್ಲ. ಏಷ್ಯನ್ ಗೇಮ್ಸ್ ಹಾಗೂ ವೆಸ್ಟ್ ಇಂಡೀಸ್ ಎದುರಿನ ಮಲ್ಟಿ ಫಾರ್ಮ್ಯಾಟ್ ಸರಣಿ ವೇಳಾಪಟ್ಟಿ ಹೆಚ್ಚುಕಡಿಮೆ ಒಂದೇ ಸಮಯದಲ್ಲಿ ನಡೆಯುತ್ತಿರುವುದರಿಂದ ಏಕಕಾಲದಲ್ಲಿ ಎರಡೆರಡು ತಂಡಗಳು ಮೈದಾನಕ್ಕಿಳಿಯಲಿವೆ.
36
ವಿವಿಎಸ್ ಲಕ್ಷ್ಮಣ್‌ಗೆ ಮಹತ್ವದ ಜವಾಬ್ದಾರಿ
ಹೌದು, ಇದೇ ಕಾರಣಕ್ಕೆ ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಭಾರತ ತಂಡದ ಹೆಡ್‌ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಕಾರ್ಯ ನಿರ್ವಹಿಸಲಿದ್ದಾರೆ. ಇನ್ನು ವೆಸ್ಟ್ ಇಂಡೀಸ್ ಎದುರಿನ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಗೆ ಭಾರತ ತಂಡದ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ಕಾರ್ಯ ನಿರ್ವಹಿಸಲಿದ್ದಾರೆ. ಪಿಟಿಐ ವರದಿಯ ಪ್ರಕಾರ, ಲಕ್ಷ್ಮಣ್ ಜತೆಗೆ ಸಹಾಯಕ ಕೋಚ್‌ಗಳಾಗಿ ಕನ್ನಡಿಗ ಸುನಿಲ್ ಜೋಶಿ, ಹೃಷಿಕೇಶ್ ಕಾನಿಟ್ಕರ್, ಸುಭ್‌ದೀಪ್ ಘೋಷ್ ಕೂಡಾ ಜಪಾನ್ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಇನ್ನು ಇತ್ತೀಚೆಗಷ್ಟೇ ಭಾರತ ಕ್ರಿಕೆಟ್ ತಂಡವು ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ ಜಿಂಬಾಬ್ವೆ ಪ್ರವಾಸ ಕೈಗೊಂಡಿದ್ದಾಗ ವಿವಿಎಸ್ ಲಕ್ಷ್ಮಣ್ ಹಂಗಾಮಿ ಹೆಡ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. ಜಿಂಬಾಬ್ವೆ ಎದುರಿನ ಸೀಮಿತ ಓವರ್‌ಗಳ ಸರಣಿ ಗೆಲುವಿನ ಬೆನ್ನಲ್ಲೇ ಮಾತನಾಡಿದ್ದ ಶ್ರೇಯಸ್ ಅಯ್ಯರ್, ಹಂಗಾಮಿ ಹೆಡ್ ಕೋಚ್ ಲಕ್ಷ್ಮಣ್ ಅವರನ್ನು ಕೊಂಡಾಡಿದ್ದರು. ಇದೀಗ ಮತ್ತೆ ಲಕ್ಷ್ಮಣ್‌ಗೆ ಮಣೆ ಹಾಕಿರುವುದು ಮುಂಬರುವ ದಿನಗಳಲ್ಲಿ ಸೀಮಿತ ಓವರ್‌ಗಳ ಕ್ರಿಕೆಟ್‌ನಿಂದ ಗಂಭೀರ್ ಅವರನ್ನು ಬದಿಗೆ ಸರಿಸಿ ಲಕ್ಷ್ಮಣ್‌ಗೆ ಹೆಡ್ ಕೋಚ್ ಜವಾಬ್ದಾರಿ ನೀಡುವ ಸಾಧ್ಯತೆಯಿದೆ ಎನ್ನುವ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿದೆ.
56
ಭಾರತ ತಂಡ ನೇರವಾಗಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಟೀಂ ಇಂಡಿಯಾ ನೇರವಾಗಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಇದಕ್ಕೂ ಮೊದಲು ಮೊದಲ ಕ್ವಾರ್ಟರ್ ಫೈನಲ್‌ನಲ್ಲಿ ಪಾಕಿಸ್ತಾನ ಮೈದಾನಕ್ಕಿಳಿಯಲಿದೆ. ಭಾರತ ಮತ್ತು ಪಾಕಿಸ್ತಾನ ಮಾತ್ರವಲ್ಲದೇ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ತಂಡಗಳು ಕೂಡಾ ನೇರವಾಗಿ ಕ್ವಾರ್ಟರ್ ಫೈನಲ್ ಪಂದ್ಯವನ್ನಾಡಲಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.