ಗಿಲ್ ಮತ್ತು ರಾಹುಲ್ ದಾಖಲೆಯ ಜೊಡಿ: ಮ್ಯಾಂಚೆಸ್ಟರ್ ಟೆಸ್ಟ್‌ನಲ್ಲಿ ಕೆ ಎಲ್ ರಾಹುಲ್ ಮತ್ತು ಶುಭ್‌ಮನ್ ಗಿಲ್ ಅದ್ಭುತ ಆಟ ಪ್ರದರ್ಶಿಸಿದರು. ಮೂರನೇ ವಿಕೆಟ್‌ಗೆ ಶತಕದ ಜೊತೆಯಾಟದೊಂದಿಗೆ 48 ವರ್ಷಗಳ ದಾಖಲೆಯನ್ನು ಮುರಿದರು.
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ ಭಾರತಕ್ಕೆ ಆರಂಭಿಕ ಆಘಾತ. ಎರಡನೇ ಇನ್ನಿಂಗ್ಸ್‌ನಲ್ಲಿ ಮೊದಲ ಎರಡು ವಿಕೆಟ್‌ಗಳನ್ನು ಶೂನ್ಯಕ್ಕೆ ಕಳೆದುಕೊಂಡ ಭಾರತ.
25
ಶುಭ್‌ಮನ್ ಗಿಲ್, ಕೆ ಎಲ್ ರಾಹುಲ್ ಅಪರೂಪದ ಸಾಧನೆ
ನಾಯಕ ಶುಭ್‌ಮನ್ ಗಿಲ್ ಮತ್ತು ಕೆ ಎಲ್ ರಾಹುಲ್ ಅದ್ಭುತ ಜೊತೆಯಾಟ. 1977ರ ಬಳಿಕ ಭಾರತ ತಂಡ 0/2 ವಿಕೆಟ್ ಕಳೆದುಕೊಂಡ ಬಳಿಕ ಮೂರನೇ ವಿಕೆಟ್‌ಗೆ 100+ ರನ್ ಜತೆಯಾಟವಾಡುವ ಮೂಲಕ ಅಪರೂಪದ ದಾಖಲೆ ನಿರ್ಮಿಸಿದೆ.
35
ಕೆ ಎಲ್ ರಾಹುಲ್ ಮತ್ತೊಂದು ಸಾಧನೆ
ಕೆ ಎಲ್ ರಾಹುಲ್ 9000 ಅಂತಾರಾಷ್ಟ್ರೀಯ ರನ್‌ಗಳನ್ನು ಪೂರ್ಣಗೊಳಿಸಿದ 16ನೇ ಭಾರತೀಯ ಆಟಗಾರ ಎನಿಸಿಕೊಂಡರು.
ಇಂಗ್ಲೆಂಡ್ ವಿರುದ್ಧ ಒಂದೇ ಟೆಸ್ಟ್ ಸರಣಿಯಲ್ಲಿ ನಾಯಕನಾಗಿ ಆಗಿ ಗಿಲ್ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ.
55
ಮ್ಯಾಂಚೆಸ್ಟರ್‌ನಲ್ಲಿ ಇನ್ನೂ ಹೋರಾಟ ಬಾಕಿ
ನಾಲ್ಕನೇ ದಿನದಾಟದ ಅಂತ್ಯಕ್ಕೆ ಭಾರತ 174/2. ಇನ್ನೂ 137 ರನ್‌ಗಳ ಅಗತ್ಯವಿದೆ. ರಾಹುಲ್ (87*) ಮತ್ತು ಗಿಲ್ (78*) ಕ್ರೀಸ್‌ನಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.