ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯ ಐದು ಪಂದ್ಯಗಳಲ್ಲಿ ನಾಲ್ಕು ಶತಕ ಸೇರಿದಂತೆ 754 ರನ್ ಗಳಿಸಿ ಗಿಲ್ ಮೊದಲ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದರು.
537 ರನ್‌ಗಳೊಂದಿಗೆ ಇಂಗ್ಲೆಂಡ್ ಮಾಜಿ ನಾಯಕ ಜೋ ರೂಟ್, ಕನ್ನಡಿಗ ರಾಹುಲ್‌ರನ್ನು ಹಿಂದಿಕ್ಕಿ ಎರಡನೇ ಸ್ಥಾನ ಪಡೆದರು.
ಐದು ಟೆಸ್ಟ್‌ಗಳಲ್ಲಿ 185.3 ಓವರ್‌ಗಳನ್ನು ಎಸೆದ ಸಿರಾಜ್ 23 ವಿಕೆಟ್‌ಗಳನ್ನು ಪಡೆದು ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದರು.
5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 4 ಶತಕ ಸಿಡಿಸುವ ಮೂಲಕ ಶುಭ್‌ಮನ್ ಗಿಲ್, ಈ ಟೆಸ್ಟ್ ಸರಣಿಯಲ್ಲಿ ಗರಿಷ್ಠ ಶತಕ ಸಿಡಿಸಿದ ಬ್ಯಾಟರ್ ಎನ್ನುವ ಕೀರ್ತಿಗೆ ಪಾತ್ರರಾದರು.
Naveen Kodase