ಕೆಲಸ ಹುಡುಕುತ್ತಿರೋರಿಗೆ ಭರ್ಜರಿ ಗುಡ್‌ನ್ಯೂಸ್.. ಕನಸು ನನಸು ಮಾಡಿಕೊಳ್ಳಲು ಇಲ್ಲಿದೆ ಸುವರ್ಣ ಅವಕಾಶ

Published : Jul 12, 2026, 10:49 AM IST

ಉದ್ಯೋಗ ಹುಡುಕುತ್ತಿರೋರಿಗೆ ಭಾರತೀಯ ನೌಕಾಸೇನೆ ಗುಡ್‌ನ್ಯೂಸ್ ನೀಡಿದೆ. ಸೇನೆಯಲ್ಲಿ ಕೆಲಸ ಮಾಡಬೇಕು ಎಂದು ಕನಸು ಕಂಡೋರಿಗೆ ಒಳ್ಳೆಯ ಅವಕಾಶ ಇದಾಗಿದ್ದು, ಮಿಸ್ ಮಾಡ್ಕೋಬೇಡಿ. ಈ ಕುರಿತ ಮಾಹಿತಿ ಇಲ್ಲಿದೆ.

PREV
15
ಅರ್ಜಿ ಸಲ್ಲಿಸಲು ಜುಲೈ 27 ಲಾಸ್ಟ್ ಡೇಟ್

ನವದೆಹಲಿ: ಭಾರತೀಯ ನೌಕಾಸಡೆಯಲ್ಲಿ (Indian Navy) ಅಧಿಕಾರಿಯಾಗಿ ಸೇವೆ ಸಲ್ಲಿಸಲು ಬಯಸುವ ಯುವಕ-ಯುವತಿಯರಿಗೆ ಸುವರ್ಣಾವಕಾಶ ಒದಗಿ ಬಂದಿದೆ. ಇಂಡಿಯನ್ ನೇವಿಯು ಶಾರ್ಟ್ ಸರ್ವಿಸ್ ಕಮಿಷನ್ (SSC) ಆಫೀಸರ್ ನೇಮಕಾತಿ 2026ರ ಅಧಿಕೃತ ಅಧಿಸೂಚನೆಯಾಗಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 275 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು 2026ರ ಜುಲೈ 27 ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಎಂಜಿನಿಯರಿಂಗ್ ಪದವೀಧರರಿಗೆ ರಕ್ಷಣಾ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಇದು ಉತ್ತಮ ವೇದಿಕೆ.

25
ಯಾರು ಅರ್ಜಿ ಸಲ್ಲಿಸಬಹುದು?

ಎಸ್‌ಎಸ್‌ಸಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕನಿಷ್ಠ 60 ಪ್ರತಿಶತ ಅಂಕಗಳೊಂದಿಗೆ ಬಿಇ/ಬಿಟೆಕ್ (BE/BTech) ಪದವಿ ಪಡೆದಿರಬೇಕು. ವಿವಿಧ ಶಾಖೆಗಳಿಗೆ ಅನುಗುಣವಾಗಿ ಹೆಚ್ಚುವರಿ ಶೈಕ್ಷಣಿಕ ಅರ್ಹತೆಗಳ ಬಗ್ಗೆ ತಿಳಿಯಲು ಅಧಿಕೃತ ಅಧಿಸೂಚನೆಯನ್ನು ಗಮನಿಸಬಹುದು.

35
ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜುಲೈ 2, 2002 ರಿಂದ ಜುಲೈ 1, 2008ರ ನಡುವೆ ಜನಿಸಿರಬೇಕು. ವಿವಿಧ ವಿಭಾಗಗಳಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಣ್ಣಪುಟ್ಟ ಬದಲಾವಣೆಗಳಿರಬಹುದು.

45
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯಲಿದೆ?
  • ಅಭ್ಯರ್ಥಿಗಳ ಆಯ್ಕೆಯನ್ನು ಹಲವು ಹಂತಗಳಲ್ಲಿ ನಡೆಸಲಾಗುತ್ತದೆ
  • ಶಾರ್ಟ್‌ಲಿಸ್ಟಿಂಗ್: ಅಭ್ಯರ್ಥಿಗಳು ತಮ್ಮ ಪದವಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.
  • SSB ಸಂದರ್ಶನ: ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳಿಗೆ ಇಮೇಲ್ ಅಥವಾ ಎಸ್‌ಎಂಎಸ್ ಮೂಲಕ ಎಸ್‌ಎಸ್‌ಬಿ (SSB) ಸಂದರ್ಶನಕ್ಕೆ ಕರೆಯಲಾಗುತ್ತದೆ. ಇದರಲ್ಲಿ ಮಾನಸಿಕ ಪರೀಕ್ಷೆ, ಗುಂಪು ಚಟುವಟಿಕೆಗಳು ಮತ್ತು ವೈಯಕ್ತಿಕ ಸಂದರ್ಶನ ಇರುತ್ತದೆ.
  • ವೈದ್ಯಕೀಯ ಪರೀಕ್ಷೆ: ಸಂದರ್ಶನದಲ್ಲಿ ಯಶಸ್ವಿಯಾದ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ.
  • ಮೆರಿಟ್ ಲಿಸ್ಟ್: ಎಲ್ಲಾ ಹಂತಗಳನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳ ಅಂತಿಮ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
55
ಅರ್ಜಿ ಸಲ್ಲಿಸುವ ವಿಧಾನ:
  • ಮೊದಲಿಗೆ ಭಾರತೀಯ ನೌಕಾಸಡೆಯ ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡಿ
  • ಹೋಮ್‌ಪೇಜ್‌ನಲ್ಲಿರುವ 'SSC Officer Recruitment' ಲಿಂಕ್ ಮೇಲೆ ಕ್ಲಿಕ್ ಮಾಡಿ
  • 'New Registration' ಮೂಲಕ ನಿಮ್ಮ ವಿವರಗಳನ್ನು ನಮೂದಿಸಿ ನೋಂದಣಿ ಮಾಡಿಕೊಳ್ಳಿ
  • ಶೈಕ್ಷಣಿಕ ಮತ್ತು ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ
  • ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪ್‌ಲೋಡ್ ಮಾಡಿ
  • ಎಲ್ಲಾ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ 'Submit' ಬಟನ್ ಒತ್ತಿರಿ
  • ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಪ್ರಿಂಟ್‌ಔಟ್ ಅನ್ನು ಪಡೆದಿಟ್ಟುಕೊಳ್ಳಿ.

ದೇಶಸೇವೆ ಮಾಡುವ ಹಂಬಲವಿರುವ ಎಂಜಿನಿಯರಿಂಗ್ ಪದವೀಧರರು ಈ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ..

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories