ಮುಲ್ಲನ್‌ಪುರ್: 19ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಕ್ವಾಲಿಫೈಯರ್-2 ಪಂದ್ಯದಲ್ಲಿಂದು ರಾಜಸ್ಥಾನ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಕಾದಾಡಲಿವೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ ಎದುರು ಗುಜರಾತ್ ಟೈಟಾನ್ಸ್ ತಂಡವು ಎರಡು ಮಹತ್ವದ ಬದಲಾವಣೆಗಳೊಂದಿಗೆ ಕಣಕ್ಕಿಳಿಯಲು ರೆಡಿಯಾಗಿದೆ.
2026ರ ಐಪಿಎಲ್ ಟೂರ್ನಿಯ ಮಹತ್ವದ ಕ್ವಾಲಿಫೈಯರ್-2 ಪಂದ್ಯದ ಮೇಲೆ ಎಲ್ಲರ ಕಣ್ಣಿದೆ. ಮಾಜಿ ಚಾಂಪಿಯನ್ನರಾದ ರಾಜಸ್ಥಾನ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಫೈನಲ್ ಟಿಕೆಟ್‌ಗಾಗಿ ಸೆಣಸಾಟ ನಡೆಸಲಿವೆ. ಒಂದು ಕಡೆ ಕ್ವಾಲಿಫೈಯರ್-1 ಪಂದ್ಯದಲ್ಲಿ ಆರ್‌ಸಿಬಿ ಎದುರು ಸೋತಿರುವ ಗಿಲ್ ನೇತೃತ್ವದ ಗುಜರಾತ್ ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ. ಇನ್ನೊಂದೆಡೆ ರಾಜಸ್ಥಾನ ರಾಯಲ್ಸ್, ಬಲಿಷ್ಠ ಸನ್‌ರೈಸರ್ಸ್‌ಗೆ ಸೋಲುಣಿಸಿದ್ದು, ತಮ್ಮ ಗೆಲುವಿನ ಲಯ ಮುಂದುವರೆಸಿಕೊಂಡು ಹೋಗಲು ಕಾತರಿಸುತ್ತಿದೆ.
26
ಗುಜರಾತ್ ಟೈಟಾನ್ಸ್ ಇಂದು ಕೆಲವು ಬದಲಾವಣೆಗಳೊಂದಿಗೆ ಕಣಕ್ಕೆ
ಹೀಗಾಗಿ ಸನ್‌ರೈಸರ್ಸ್ ಹೈದರಾಬಾದ್‌ಗೆ ಸೋಲಿನ ಶಾಕ್ ನೀಡಲು ಗುಜರಾತ್ ಟೈಟಾನ್ಸ್ ರಣತಂತ್ರ ಹೆಣೆಯುತ್ತಿದೆ. ಇದೇ ಕಾರಣಕ್ಕಾಗಿ ಗಿಲ್ ಪಡೆ ಕ್ವಾಲಿಫೈಯರ್-2 ಪಂದ್ಯಕ್ಕೆ ಎರಡು ಮಹತ್ವದ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವುದು ಬಹುತೇಕ ಖಚಿತ ಎನಿಸಿದೆ. ಆರಂಭಿಕರಾಗಿ ಸಾಯಿ ಸುದರ್ಶನ್ ಹಾಗೂ ನಾಯಕ ಶುಭ್‌ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಈ ಐಪಿಎಲ್‌ನ ಅತ್ಯಂತ ಯಶಸ್ವಿ ಆರಂಭಿಕ ಜೋಡಿಯಾಗಿ ಗಿಲ್-ಸಾಯಿ ಗುರುತಿಸಿಕೊಂಡಿದ್ದಾರೆ.
36
ಮಧ್ಯಮ ಕ್ರಮಾಂಕದಲ್ಲಿ ಒಂದು ಬದಲಾವಣೆ?
ಕಳೆದ ಪಂದ್ಯದಲ್ಲಿ ನಿಶಾಂತ್ ಸಿಂಧು ಬ್ಯಾಟಿಂಗ್‌ನಲ್ಲಿ ನಿರಾಸೆ ಮೂಡಿಸಿದ್ದರು. ಹೀಗಾಗಿ ಇಂದಿನ ಪಂದ್ಯಕ್ಕೆ ಸಿಂಧು ಬದಲಿಗೆ ಶಾರುಕ್ ಖಾನ್‌ಗೆ ಗುಜರಾತ್ ಆಡುವ ಹನ್ನೊಂದರ ಬಳಗದಲ್ಲಿ ಮಣೆ ಹಾಕುವ ನಿರೀಕ್ಷೆಯಿದೆ. ಹೀಗಾದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಜೋಸ್ ಬಟ್ಲರ್, ವಾಷಿಂಗ್ಟನ್ ಸುಂದರ್, ಶಾರುಕ್ ಖಾನ್ ಹಾಗೂ ಜೇಸನ್ ಹೋಲ್ಡರ್ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಜವಾಬ್ದಾರಿ ಹೊರುವ ನಿರೀಕ್ಷೆಯಿದೆ. ಸುಂದರ್ ಹಾಗೂ ಹೋಲ್ಡರ್ ಬೌಲಿಂಗ್‌ನಲ್ಲೂ ಆಸರೆಯಾಗಬಲ್ಲರು.
ಕ್ವಾಲಿಫೈಯರ್-1 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ವೇಗಿ ಕುಲ್ವಂತ್ ಖೆಜ್ರೋಲಿಯಾ ಸಾಕಷ್ಟು ದುಬಾರಿಯಾಗಿದ್ದರು. ಹೀಗಾಗಿ ಖೆಜ್ರೋಲಿಯಾ ಬದಲಿಗೆ ತಂಡದಲ್ಲಿ ಅಶೋಕ್ ಶರ್ಮಾಗೆ ಅವಕಾಶ ನೀಡುವ ನಿರೀಕ್ಷೆಯಿದೆ. ಹೀಗಾದಲ್ಲಿ ಪ್ರಸಿದ್ದ್ ಕೃಷ್ಣ, ಕಗಿಸೋ ರಬಾಡ, ರಶೀದ್ ಖಾನ್ ಹಾಗೂ ಮೊಹಮ್ಮದ್ ಸಿರಾಜ್ ಬೌಲಿಂಗ್ ವಿಭಾಗದ ಜವಾಬ್ದಾರಿ ಹೊರಲಿದ್ದಾರೆ.
56
ಇಂಪ್ಯಾಕ್ಟ್ ಆಟಗಾರ ಯಾರು?
ಆರ್‌ಸಿಬಿ ಎದುರು ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಪರ ಇಂಪ್ಯಾಕ್ಟ್ ಆಟಗಾರನಾಗಿ ಕಣಕ್ಕಿಳಿದ ರಾಹುಲ್ ತೆವಾಟಿಯಾ ಸ್ಪೋಟಕ 68 ರನ್ ಚಚ್ಚಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲೂ ತೆವಾಟಿಯಾ ಇಂಪ್ಯಾಕ್ಟ್ ಆಟಗಾರನಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಒಂದು ವೇಳೆ ಗುಜರಾತ್ ಟೈಟಾನ್ಸ್ ಮೊದಲು ಬ್ಯಾಟ್ ಮಾಡಿದರೆ, ತೆವಾಟಿಯಾ ಆಡುವ ಹನ್ನೊಂದರ ಬಳಗದಲ್ಲಿರಲಿದ್ದು, ಪ್ರಸಿದ್ದ್ ಕೃಷ್ಣ ಇಂಪ್ಯಾಕ್ಟ್ ಆಟಗಾರನಾಗುವ ಸಾಧ್ಯತೆಯಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.