2026ನೇ ಸೀಸನ್ ಐಪಿಎಲ್ ಟೂರ್ನಿ ಯಶಸ್ವಿಯಾಗಿ ಮುಕ್ತಾಯವಾಗಿದೆ. ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ್ದ ಗುಜರಾತ್ ಟೈಟಾನ್ಸ್ ತಂಡವು ಫೈನಲ್‌ನಲ್ಲಿ ಆರ್‌ಸಿಬಿ ಎದುರು ಸೋತು ನಿರಾಸೆ ಅನುಭವಿಸಿದೆ. ಇದರ ಬೆನ್ನಲ್ಲೇ ಮೂವರಿಗೆ ಗೇಟ್‌ಪಾಸ್ ನೀಡಲು ಗುಜರಾತ್ ಫ್ರಾಂಚೈಸಿ ರೆಡಿಯಾಗಿದೆ.
19ನೇ ಸೀಸನ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ನಿರೀಕ್ಷೆಗೂ ಮೀರಿದ ಪ್ರದರ್ಶನ ತೋರುವ ಮೂಲಕ ಫೈನಲ್ ಪ್ರವೇಶಿಸಿತ್ತು. ಆದರೆ ಫೈನಲ್‌ನಲ್ಲಿ ಆರ್‌ಸಿಬಿ ಎದುರು ಹೀನಾಯವಾಗಿ ಸೋಲುವ ಮೂಲಕ ಎರಡನೇ ಐಪಿಎಲ್ ಟ್ರೋಫಿ ಗೆಲ್ಲುವ ಅವಕಾಶವನ್ನು ಗುಜರಾತ್ ಟೈಟಾನ್ಸ್ ಕೈಚೆಲ್ಲಿತು.
26
ಗುಜರಾತ್ ಟೈಟಾನ್ಸ್ ಸೋಲಿನ ಪರಾಮರ್ಶೆ
ಇದೀಗ ಗುಜರಾತ್ ಟೈಟಾನ್ಸ್ ತಂಡವು ಟೂರ್ನಿಯುದ್ದಕ್ಕೂ ಅಷ್ಟು ಅದ್ಭುತ ಪ್ರದರ್ಶನ ತೋರಿದ ಹೊರತಾಗಿಯೂ, ಫೈನಲ್‌ನಲ್ಲಿ ಅಷ್ಟು ಹೀನಾಯವಾಗಿ ಸೋತಿದ್ದು ಏಕೆ ಎನ್ನುವ ಬಗ್ಗೆ ತನಿಖೆ ಶುರು ಮಾಡಿದೆ. ಆಗ ಗುಜರಾತ್‌ಗೆ ಹಲವು ಅಂಶಗಳು ಪತ್ತೆಯಾಗಿವೆ.
36
ಈ ಮೂವರಿಗೆ ಗುಜರಾತ್ ಟೈಟಾನ್ಸ್ ಗೇಟ್‌ಪಾಸ್
ಗುಜರಾತ್ ಟೈಟಾನ್ಸ್ ತಂಡವು ಬ್ಯಾಟಿಂಗ್‌ನಲ್ಲಿ ಅಗ್ರಕ್ರಮಾಂಕದ ಮೂವರು ಬ್ಯಾಟರ್‌ಗಳಾದ ಗಿಲ್, ಸಾಯಿ ಸುದರ್ಶನ್ ಹಾಗೂ ಜೋಶ್ ಬಟ್ಲರ್ ಅವರನ್ನೇ ಹೆಚ್ಚಾಗಿ ನೆಚ್ಚಿಕೊಂಡಿತ್ತು. ಹೀಗಾಗಿ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯ ಗುಜರಾತ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸಿತು. ಹೀಗಾಗಿ ಗುಜರಾತ್ ಟೈಟಾನ್ಸ್ ಮುಂಬರುವ ಐಪಿಎಲ್ ಟೂರ್ನಿಗೂ ಮುನ್ನ ಈ ಮೂವರಿಗೆ ಗೇಟ್‌ಪಾಸ್ ನೀಡಲು ರೆಡಿಯಾಗಿದೆ. ಯಾರು ಆ ಮೂವರು ನೋಡೋಣ ಬನ್ನಿ
ಈ ಸೀಸನ್ ಐಪಿಎಲ್ ಟೂರ್ನಿಯಲ್ಲಿ ಜಯಂತ್ ಯಾದವ್ ಗುಜರಾತ್ ಟೈಟಾನ್ಸ್ ತಂಡದಲ್ಲಿ ಇದ್ರಾ ಎನ್ನುವುದೇ ಬಹುತೇಕ ಮಂದಿಗೆ ಗೊತ್ತಿಲ್ಲ. ವಾಷಿಂಗ್ಟನ್ ಸುಂದರ್ ಬೌಲಿಂಗ್ ಆಲ್ರೌಂಡರ್ ಆಗಿ ತಮ್ಮ ಸ್ಥಾನ ಭದ್ರಪಡಿಸಿಕೊಂಡ ಹಿನ್ನೆಲೆಯಲ್ಲಿ ಜಯಂತ್ ಯಾದವ್‌ಗೆ ಮುಂದಿನ ಸೀಸನ್ ಐಪಿಎಲ್ ಹರಾಜಿಗೂ ಮುನ್ನ ತಂಡದಿಂದ ಕೈಬಿಡುವ ಸಾಧ್ಯತೆ ದಟ್ಟವಾಗಿದೆ.
56
1. ಶಾರುಕ್ ಖಾನ್:
ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಸಾಕಷ್ಟು ವಿಶ್ವಾಸವಿಟ್ಟು 4 ಕೋಟಿ ರುಪಾಯಿ ನೀಡಿ ಶಾರುಕ್ ಖಾನ್ ಅವರನ್ನು ಖರೀದಿಸಿತ್ತು. ಆದರೆ ಶಾರುಕ್ ಖಾನ್ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ನಂಬಿಕೆ ಉಳಿಸಿಕೊಳ್ಳುವಲ್ಲಿ ವಿಫಲವಾಗಿದ್ದಾರೆ. ಹೀಗಾಗಿ ಶಾರುಕ್ ಅವರನ್ನು ಗುಜರಾತ್ ಫ್ರಾಂಚೈಸಿಯು ಮುಂಬರುವ ಹರಾಜಿಗೂ ಮುನ್ನ ಗೇಟ್‌ಪಾಸ್ ನೀಡುವ ಸಾಧ್ಯತೆ ಹೆಚ್ಚಿದೆ.
66
3. ಇಶಾಂತ್ ಶರ್ಮಾ:
ಟೀಂ ಇಂಡಿಯಾ ಅನುಭವಿ ವೇಗಿ 37 ವರ್ಷದ ಇಶಾಂತ್ ಶರ್ಮಾ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ರೂ ಆಡುವ ಹನ್ನೊಂದರ ಬಳಗದಲ್ಲಿ ಈ ಬಾರಿ ಸ್ಥಾನ ಸಿಗಲಿಲ್ಲ. ಈಗಾಗಲೇ ತಂಡದಲ್ಲಿ ಮೊಹಮ್ಮದ್ ಸಿರಾಜ್, ಕಗಿಸೋ ರಬಾಡ, ಪ್ರಸಿದ್ದ್ ಕೃಷ್ಣ ಅವರಂತಹ ಆಟಗಾರರಿರುವುದರಿಂದ ಇಶಾಂತ್ ಶರ್ಮಾ ಅವರನ್ನು ಗುಜರಾತ್ ಫ್ರಾಂಚೈಸಿ ತಂಡದಿಂದ ಕೈಬಿಡುವ ಸಾಧ್ಯತೆ ದಟ್ಟವಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.