ಜಾವಗಲ್ ಶ್ರೀನಾಥ್ 1989ರಲ್ಲಿ ನಡೆದ ರಣಜಿ ಟ್ರೋಫಿಯಲ್ಲಿ ಕರ್ನಾಟಕ ತಂಡದ ಪರ ಹೈದರಾಬಾದ್ ವಿರುದ್ಧ ಕಣಕ್ಕಿಳಿಯುವ ಮೂಲಕ ಕ್ರಿಕೆಟ್ ವೃತ್ತಿಜೀವನ ಆರಂಭಿಸಿದರು.
ಮೊದಲ ಇನಿಂಗ್ಸ್‌ನಲ್ಲೇ ಸತತ ಮೂರು ಎಸೆತಗಳಲ್ಲಿ ಎಚ್ ಅಲಿ ಖಾನ್, ಎಸ್.ವಿ. ರಮಣಮೂರ್ತಿ ಹಾಗೂ ರಾಜೇಶ್ ಯಾದವ್ ಅವರನ್ನು ಪೆವಿಲಿಯನ್ನಿಗೆ ಅಟ್ಟುವ ಮೂಲಕ ಹ್ಯಾಟ್ರಿಕ್ ವಿಕೆಟ್ ಕಬಳಿಸಿದರು. ಮೊದಲ ಪಂದ್ಯದಲ್ಲಿ ಶ್ರೀನಾಥ್ 85 ರನ್ ನೀಡಿ 7 ವಿಕೆಟ್ ಕಬಳಿಸಿದ್ದರು.
ಇನ್ನು ಶ್ರೀನಾಥ್ ಅವರ ಖಾಸಗಿ ಬದುಕಿನ ಬಗ್ಗೆ ನೋಡುವುದಾದರೆ, ಮೊದಲ ಪತ್ನಿಗೆ ಪರಸ್ಪರ ಸಮ್ಮತಿಯ ಮೇರೆಗೆ ವಿಚ್ಚೇದನ ನೀಡಿ 2007ರಲ್ಲಿ ಮಾಧವಿ ಪತ್ರಾವಲಿ ಎಂಬ ಪತ್ರಕರ್ತೆಯನ್ನು ವಿವಾಹವಾಗಿದ್ದರು.
1991ರಲ್ಲಿ ಶ್ರೀನಾಥ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಅವರ ಪ್ರದರ್ಶನ ಯಾವ ಮಟ್ಟಿಗೆ ಇತ್ತು ಅಂದರೆ 1992ರಲ್ಲಿ ವರ್ಷದ ಭಾರತೀಯ ಕ್ರಿಕೆಟಿಗ ಎನ್ನುವ ಗೌರವಕ್ಕೆ ಶ್ರೀನಾಥ್ ಭಾಜನರಾದರು.
ಶ್ರೀನಾಥ್ ಅವರಿಗೆ 1996ರಲ್ಲಿ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ಅರ್ಜುನ ಪ್ರಶಸ್ತಿ ಅರಸಿ ಬಂದಿತು.
ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯವೊಂದರಲ್ಲಿ ಶ್ರೀನಾಥ್ ಅಮೋಘ ಪ್ರದರ್ಶನ ತೋರಿದ್ದರು. ಈಡನ್ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಶ್ರೀನಾಥ್ 86 ರನ್ ನೀಡಿ 8 ವಿಕೆಟ್ ಕಬಳಿಸಿದ್ದರು
1996-97ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅಹಮದಾಬಾದ್‌ನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಶ್ರೀನಾಥ್ ಕೇವಲ 21 ರನ್ ನೀಡಿ 6 ವಿಕೆಟ್ ಕಬಳಿಸಿದ್ದರು.
ಏಕದಿನ ಕ್ರಿಕೆಟ್‌ನಲ್ಲಿ 229 ಪಂದ್ಯಗಳನ್ನಾಡಿ ಶ್ರೀನಾಥ್ 315 ವಿಕೆಟ್ ಕಬಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಭಾರತ ಗರಿಷ್ಠ ವಿಕೆಟ್ ಕಬಳಿಸಿದ ಭಾರತದ ಎರಡನೇ ಆಟಗಾರ ಎನಿಸಿದ್ದಾರೆ.
ಇನ್ನು 67 ಟೆಸ್ಟ್ ಪಂದ್ಯಗಳನ್ನಾಡಿ ಶ್ರೀನಾಥ್ 236 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ ನಿವೃತ್ತಿ ಪಡೆದಾಗ ಕಪಿಲ್ ದೇವ್ ಬಳಿಕ ಭಾರತ ಪರಿ ಗರಿಷ್ಠ ವಿಕೆಟ್ ಕಬಳಿಸಿದ ಎರಡನೇ ವೇಗದ ಬೌಲರ್ ಎನಿಸಿದ್ದರು. ಆ ಬಳಿಕ ಶ್ರೀನಾಥ್ ದಾಖಲೆಯನ್ನು ಜಹೀರ್ ಖಾನ್ ಹಿಂದಿಕ್ಕಿದ್ದರು.
ಜಾವಗಲ್ ಶ್ರೀನಾಥ್ ಭಾರತ ಪರ 4 ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದಾರೆ. 1992, 1996, 1999 ಹಾಗೂ 2003ರ ವಿಶ್ವಕಪ್ ಟೂರ್ನಿಯಲ್ಲಿ ಶ್ರೀನಾಥ್ ಟೀಂ ಇಂಡಿಯಾವನ್ನು ಪ್ರತಿನಿಧಿಸಿ 44 ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ವಿಕೆಟ್ ಪಡೆದ ದಾಖಲೆ ಶ್ರೀನಾಥ್ ಹೆಸರಿನಲ್ಲಿದೆ.
2003ರ ವಿಶ್ವಕಪ್ ಫೈನಲ್ ಸೋಲಿನ ಬಳಿಕ ಶ್ರೀನಾಥ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. 2006ರಿಂದ ಹೊಸ ಇನಿಂಗ್ಸ್ ಆರಂಭಿಸಿರುವ ಶ್ರೀನಾಥ್ ಐಸಿಸಿ ರೆಫ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
2003ರ ವಿಶ್ವಕಪ್ ಫೈನಲ್ ಸೋಲಿನ ಬಳಿಕ ಶ್ರೀನಾಥ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. 2006ರಿಂದ ಹೊಸ ಇನಿಂಗ್ಸ್ ಆರಂಭಿಸಿರುವ ಶ್ರೀನಾಥ್ ಐಸಿಸಿ ರೆಫ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.