Mohammed Shami Birthday: ಮೊಹಮ್ಮದ್ ಶಮಿ ಕುರಿತು ನಿಮಗೆ ಗೊತ್ತಿರದ 8 ಇಂಟ್ರೆಸ್ಟಿಂಗ್ ಸಂಗತಿಗಳಿವು..!

Published : Sep 03, 2022, 02:29 PM IST

ಬೆಂಗಳೂರು: ಟೀಂ ಇಂಡಿಯಾ ವೇಗದ ಬೌಲರ್ ಮೊಹಮ್ಮದ್ ಶಮಿ ಶನಿವಾರ(ಸೆ.03)ವಾದ ಇಂದು 32ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಸೆಪ್ಟೆಂಬರ್ 03, 1990ರಲ್ಲಿ ಉತ್ತರ ಪ್ರದೇಶದಲ್ಲಿ ಜನಿಸಿದ್ದ ಮೊಹಮ್ಮದ್ ಶಮಿ, ಇದೀಗ ಭಾರತ ಕ್ರಿಕೆಟ್ ಕಂಡ ಮಾರಕ ವೇಗಿಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಮೊಹಮ್ಮದ್ ಶಮಿ ಹುಟ್ಟುಹಬ್ಬದ ಸಂದರ್ಭದಲ್ಲಿ ಶಮಿ ಕುರಿತಾದ ಇಂಟ್ರೆಸ್ಟಿಂಗ್ ಸಂಗತಿಗಳು ಇಲ್ಲಿವೆ ನೋಡಿ.  

PREV
18
Mohammed Shami Birthday: ಮೊಹಮ್ಮದ್ ಶಮಿ ಕುರಿತು ನಿಮಗೆ ಗೊತ್ತಿರದ 8 ಇಂಟ್ರೆಸ್ಟಿಂಗ್ ಸಂಗತಿಗಳಿವು..!

ಮೊಹಮ್ಮದ್ ಶಮಿ ಉತ್ತರ ಪ್ರದೇಶದಲ್ಲಿ ಜನಿಸಿದರೂ ಸಹಾ ಕ್ರಿಕೆಟ್ ಬದುಕು ಕಟ್ಟಿಕೊಂಡಿದ್ದು ಬೆಂಗಾಲ್ ತಂಡದ ಪರ. ದೇಶಿ ಕ್ರಿಕೆಟ್‌ನಲ್ಲಿ ಶಮಿ ಬೆಂಗಾಲ್ ಕ್ರಿಕೆಟ್ ತಂಡವನ್ನು ಪ್ರತಿನಿಧಿಸುತ್ತಾ ಬಂದಿದ್ದಾರೆ.

28

ಮೊಹಮ್ಮದ್ ಶಮಿ, ನವೆಂಬರ್ 17, 2010ರಲ್ಲಿ ಅಸ್ಸಾಂ ಎದುರು ಕಣಕ್ಕಿಳಿಯುವ ಮೂಲಕ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಶಮಿ 84 ಪಂದ್ಯಗಳನ್ನಾಡಿ 319 ವಿಕೆಟ್ ಕಬಳಿಸಿದ್ದಾರೆ.

38

ದೇಶಿ ಕ್ರಿಕೆಟ್‌ನಲ್ಲಿ ಶಮಿ ಅದ್ಭುತ ಪ್ರದರ್ಶನ ತೋರುವ ಮೂಲಕ ಬಿಸಿಸಿಐ ಆಯ್ಕೆ ಸಮಿತಿ ಗಮನ ಸೆಳೆಯುವಲ್ಲಿ ಯಶಸ್ವಿಯಾದರು. ಪರಿಣಾಮ ನವೆಂಬರ್ 06, 2013ರಲ್ಲಿ ವೆಸ್ಟ್ ಇಂಡೀಸ್‌ ವಿರುದ್ದ ಮೊದಲ ಟೆಸ್ಟ್ ಪಂದ್ಯವನ್ನಾಡುವ ಮೂಲಕ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದರು.

48

ಮೊಹಮ್ಮದ್ ಶಮಿ, 2019ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಫ್ಘಾನಿಸ್ತಾನ ವಿರುದ್ದ ಹ್ಯಾಟ್ರಿಕ್ ವಿಕೆಟ್ ಕಬಳಿಸುವ ಮೂಲಕ, ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಚೇತನ್ ಶರ್ಮಾ ಬಳಿಕ ಹ್ಯಾಟ್ರಿಕ್ ವಿಕೆಟ್‌ ಕಬಳಿಸಿದ ಭಾರತದ ಎರಡನೇ ಬೌಲರ್‌ ಎನ್ನುವ ಕೀರ್ತಿಗೆ ಶಮಿ ಪಾತ್ರರಾಗಿದ್ದರು. 

58

ಮೊಹಮ್ಮದ್ ಶಮಿ, ಇಂಗ್ಲೆಂಡ್ ಎದುರು ಲಾರ್ಡ್ಸ್‌ ಮೈದಾನದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. 
 

68

ಅನುಭವಿ ವೇಗಿ ಮೊಹಮ್ಮದ್ ಶಮಿ, ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ 4 ತಂಡಗಳನ್ನು ಪ್ರತಿನಿಧಿಸಿದ್ದಾರೆ. ಶಮಿ ಐಪಿಎಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್‌, ಕೋಲ್ಕತಾ ನೈಟ್ ರೈಡರ್ಸ್‌, ಪಂಜಾಬ್ ಕಿಂಗ್ಸ್‌ ಹಾಗೂ ಗುಜರಾತ್ ಟೈಟಾನ್ಸ್ ತಂಡವನ್ನು ಪ್ರತಿನಿಧಿಸಿದ್ದಾರೆ. ಗುಜರಾತ್ ಟೈಟಾನ್ಸ್ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಶಮಿ ತನ್ನದೇ ಆದ ಪಾತ್ರವನ್ನು ವಹಿಸಿದಿದ್ದಾರೆ.
 

78

ಮೊಹಮ್ಮದ್ ಶಮಿ ಭಾರತ ಕ್ರಿಕೆಟ್ ತಂಡದ ಪರ 60 ಟೆಸ್ಟ್, 82 ಏಕದಿನ ಹಾಗೂ 17 ಟಿ20 ಪಂದ್ಯಗಳನ್ನಾಡಿ ಕ್ರಮವಾಗಿ 216, 152 ಹಾಗೂ 18 ವಿಕೆಟ್ ಕಬಳಿಸಿದ್ದಾರೆ. ಇನ್ನು ಒಟ್ಟು 93 ಐಪಿಎಲ್‌ ಪಂದ್ಯಗಳನ್ನಾಡಿ 99 ಬಲಿ ಪಡೆದಿದ್ದಾರೆ.
 

88

ಮೊಹಮ್ಮದ್ ಶಮಿ ಅತಿವೇಗವಾಗಿ 100 ಏಕದಿನ ವಿಕೆಟ್‌ ಕಬಳಿಸಿದ ಭಾರತೀಯ ಬೌಲರ್ ಎನಿಸಿದ್ದಾರೆ. ಇದಷ್ಟೇ ಅಲ್ಲದೇ ಅತಿ ಕಡಿಮೆ ಎಸೆತಗಳಲ್ಲಿ 200 ಟೆಸ್ಟ್‌ ವಿಕೆಟ್ ಕಬಳಿಸಿದ ಭಾರತದ ಮೂರನೇ ಬೌಲರ್ ಎನ್ನುವ ಶ್ರೇಯ ಕೂಡಾ ಶಮಿ ಹೆಸರಿನಲ್ಲಿದೆ.
 

Read more Photos on
click me!

Recommended Stories