ಬೆಂಗಳೂರು(ಅ.20): ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಮುಲ್ತಾನಿನ ಸುಲ್ತಾನ ಖ್ಯಾತಿಯ ವಿರೇಂದ್ರ ಸೆಹ್ವಾಗ್ ಗುರುವಾರ(ಅ.20)ವಾದ ಇಂದು 44ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ತಮ್ಮ ವಿಸ್ಪೋಟಕ ಬ್ಯಾಟಿಂಗ್ ಮೂಲಕ ಜಗತ್ತಿನಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ವೀರೂಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿವೆ. ಸೆಹ್ವಾಗ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಹೆಸರಿನಲ್ಲಿರುವ ಅಪರೂಪದ ದಾಖಲೆಗಳನ್ನು ನಿಮ್ಮ ಮುಂದಿಡುತ್ತಿದ್ದೇವೆ ನೋಡಿ.
ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಪರ ತ್ರಿಶತಕ ಬಾರಿಸಿದ ಮೊದಲ ಬ್ಯಾಟರ್ ಸೆಹ್ವಾಗ್
2004ರಲ್ಲಿ ಸೆಹ್ವಾಗ್, ಪಾಕಿಸ್ತಾನ ವಿರುದ್ದ ಮುಲ್ತಾನಿನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 309 ರನ್ ಸಿಡಿಸುವ ಮೂಲಕ, ಟೆಸ್ಟ್ ಕ್ರಿಕೆಟ್‌ನಲ್ಲಿ ತ್ರಿಶತಕ ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ.
25
ಟೆಸ್ಟ್ ಕ್ರಿಕೆಟ್‌ನಲ್ಲಿ ಎರಡು ತ್ರಿಶತಕ ಬಾರಿಸಿದ ಏಕೈಕ ಭಾರತೀಯ ಬ್ಯಾಟರ್ ವೀರೂ
ಟೆಸ್ಟ್ ಕ್ರಿಕೆಟ್‌ನಲ್ಲಿ ಎರಡು ತ್ರಿಶತಕ ಬಾರಿಸಿದ ಟೀಂ ಇಂಡಿಯಾದ ಏಕೈಕ ಬ್ಯಾಟರ್ ಎನ್ನುವ ಹೆಗ್ಗಳಿಕೆ ಮುಲ್ತಾನಿನ ಸುಲ್ತಾನ ಖ್ಯಾತಿಯ ಸೆಹ್ವಾಗ್ ಹೆಸರಿನಲ್ಲಿದೆ. ಪಾಕಿಸ್ತಾನ ವಿರುದ್ದ 309 ಹಾಗೂ ದಕ್ಷಿಣ ಆಫ್ರಿಕಾ ವಿರುದ್ದ 319 ರನ್ ಚಚ್ಚಿದ್ದಾರೆ.
35
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿವೇಗದ ತ್ರಿಶತಕ ಬಾರಿಸಿದ ಬ್ಯಾಟರ್ ಸೆಹ್ವಾಗ್:
ಸ್ಪೋಟಕ ಬ್ಯಾಟರ್ ವಿರೇಂದ್ರ ಸೆಹ್ವಾಗ್ 2008ರಲ್ಲಿ ಚೆನ್ನೈನ ಚೆಪಾಕ್ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ನಡೆದ ಟೆಸ್ಟ್ ಪಂದ್ಯದಲ್ಲಿ ಕೇವಲ 278 ಎಸೆತಗಳಲ್ಲಿ ತ್ರಿಶತಕ ಬಾರಿಸುವ ಮೂಲಕ, ಅತಿವೇಗವಾಗಿ 300 ರನ್ ಬಾರಿಸಿದ ಬ್ಯಾಟರ್ ಎನ್ನುವ ದಾಖಲೆಯನ್ನು ಸೆಹ್ವಾಗ್ ನಿರ್ಮಿಸಿದ್ದಾರೆ.
45
ಏಕದಿನ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ನಾಯಕನಾಗಿ ಗರಿಷ್ಠ ವೈಯುಕ್ತಿಕ ಸ್ಕೋರ್ ದಾಖಲೆಯ ಒಡೆಯ ಸೆಹ್ವಾಗ್
2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಇಂದೋರ್‌ನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ವಿರೇಂದ್ರ ಸೆಹ್ವಾಗ್ ನಾಯಕನಾಗಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದರು. ಇದೇ ಪಂದ್ಯದಲ್ಲಿ ವೀರೂ 219 ರನ್ ಚಚ್ಚಿ ನಾಯಕನಾಗಿ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ದಾಖಲೆ ಇಂದಿಗೂ ಸೆಹ್ವಾಗ್ ಹೆಸರಿನಲ್ಲಿದೆ.
55
ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಪರ ಗರಿಷ್ಠ ಸಿಕ್ಸರ್ ಬಾರಿಸಿದ್ದೂ ಸೆಹ್ವಾಗ್
ಟೆಸ್ಟ್ ಕ್ರಿಕೆಟ್ ಅನ್ನೂ ಏಕದಿನ ಕ್ರಿಕೆಟ್‌ನಂತೆ ಆಡುವ ಮೂಲಕ ಗಮನ ಸೆಳೆದಿದ್ದ ಸೆಹ್ವಾಗ್, ಭಾರತ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಬಾರಿಸಿದ ಬ್ಯಾಟರ್ ಎನ್ನುವ ದಾಖಲೆ ನಿರ್ಮಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಸೆಹ್ವಾಗ್ ಭಾರತ ಪರ 90 ಸಿಕ್ಸರ್ ಸಿಡಿಸಿದ್ದು, 78 ಸಿಕ್ಸರ್ ಬಾರಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ಎಂ ಎಸ್ ಧೋನಿ ಎರಡನೇ ಸ್ಥಾನದಲ್ಲಿದ್ದಾರೆ.