ಇಂಗ್ಲೆಂಡ್ ಎದುರಿನ ಸರಣಿಯಿಂದಲೂ ಹೊರಬಿದ್ದ ಹಾರ್ದಿಕ್ ಪಾಂಡ್ಯ; ಕೊಹ್ಲಿ ಬಗ್ಗೆಯೂ ಸಿಕ್ತು ಮಹತ್ವದ ಅಪ್‌ಡೇಟ್

Published : Jun 20, 2026, 05:57 PM IST

ಬೆಂಗಳೂರು: ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿ ಮುಕ್ತಾಯದ ಬಳಿಕ ಟೀಂ ಇಂಡಿಯಾ, ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಗೂ ಮುನ್ನ ಭಾರತಕ್ಕೆ ದೊಡ್ಡ ಹಿನ್ನಡೆ ಎದುರಾಗಿದ್ದು, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಸಮಸ್ಯೆಯಿಂದ ಇಂಗ್ಲೆಂಡ್ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. 

PREV
16
ಇಂಗ್ಲೆಂಡ್ ಎದುರಿನ ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್

ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಈಗಾಗಲೇ ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಇದೀಗ ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಿಂದಲೂ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹೊರಬಿದ್ದಿದ್ದಾರೆ.

26
ತೊಡೆಸಂದು ನೋವಿನಿಂದ ಬಳಲುತ್ತಿರುವ ಪಾಂಡ್ಯ

ತೊಡೆ ಸಂದು ನೋವಿನಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ, ತಂಡಕ್ಕೆ ಅಗತ್ಯವಿರುವಷ್ಟು ಬೌಲಿಂಗ್ ಮಾಡುವ ಸಾಮರ್ಥ್ಯವನ್ನು ಗಳಿಸಿಕೊಂಡಿಲ್ಲ. ಹೀಗಾಗಿ ಏಕದಿನ ಕ್ರಿಕೆಟ್ ಆಡುವ ಸಾಮರ್ಥ್ಯ ಗಳಿಸಿಕೊಂಡ ಬಳಿಕವಷ್ಟಕ್ಕೇ ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆ ಮಾಡಲು ಬಿಸಿಸಿಐ ಮ್ಯಾನೇಜ್‌ಮೆಂಟ್ ನಿರ್ಧರಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

36
ಹಾರ್ದಿಕ್ ಪಾಂಡ್ಯ ಟಾರ್ಗೆಟ್ 2027ರ ಏಕದಿನ ವಿಶ್ವಕಪ್

2027ರಲ್ಲಿ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಹಾಗೂ ನಮೀಬಿಯಾದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಹಾರ್ದಿಕ್ ಪಾಂಡ್ಯ ಭಾರತ ತಂಡದ ಪ್ರಮುಖ ಆಟಗಾರರಾಗಿದ್ದಾರೆ. ಆ ಮಹತ್ವದ ಟೂರ್ನಿಗೆ ಸಂಪೂರ್ಣ ಫಿಟ್ ಆಗಿ ಹಾರ್ದಿಕ್ ಪಾಂಡ್ಯ ಅವರನ್ನು ಇಡುವುದು ಬಿಸಿಸಿಐ ಲೆಕ್ಕಾಚಾರವಾಗಿದೆ. ಇದೇ ಕಾರಣಕ್ಕಾಗಿ ಪಾಂಡ್ಯ ಕಮ್‌ಬ್ಯಾಕ್‌ಗೆ ಬಿಸಿಸಿಐ ಹೆಚ್ಚು ಆತುರ ಮಾಡುತ್ತಿಲ್ಲ.

46
2025ರಲ್ಲಿ ಕೊನೆಯ ಬಾರಿಗೆ ಏಕದಿನ ಮ್ಯಾಚ್ ಆಡಿರುವ ಪಾಂಡ್ಯ

32 ವರ್ಷದ ಹಾರ್ದಿಕ್ ಪಾಂಡ್ಯ 2025ರ ಮಾರ್ಚ್‌ 08ರಂದು ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ನಲ್ಲಿ ಕೊನೆಯ ಬಾರಿಗೆ ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದರು. ಇದಾದ ಬಳಿಕ ಪಾಂಡ್ಯ ಏಕದಿನ ಮಾದರಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿಲ್ಲ.

56
ಭಾರತ-ಇಂಗ್ಲೆಂಡ್ ಏಕದಿನ ಸರಣಿಯ ವೇಳಾಪಟ್ಟಿ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಮುಂಬರುವ ಜುಲೈ 14ರಿಂದ 19ರವರೆಗೆ ನಡೆಯಲಿದೆ. ಜುಲೈ 14ರಂದು ಬರ್ಮಿಂಗ್‌ಹ್ಯಾಮ್‌ನಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ಇದಾದ ಬಳಿಕ ಜುಲೈ 16ರಂದು ಕಾರ್ಡಿಫ್‌ನಲ್ಲಿ ಹಾಗೂ ಜುಲೈ 19ರಂದು ಲಾರ್ಡ್ಸ್‌ನಲ್ಲಿ ಮೂರನೇ ಏಕದಿನ ಪಂದ್ಯ ನಡೆಯಲಿದೆ.

66
ಜೂನ್ 22ರಂದು ವಿರಾಟ್ ಕೊಹ್ಲಿ ಫಿಟ್ನೆಸ್ ಟೆಸ್ಟ್‌ನಲ್ಲಿ ಭಾಗಿ

ಇನ್ನು 19ನೇ ಸೀಸನ್‌ ಐಪಿಎಲ್ ಟೂರ್ನಿಯ ವೇಳೆ ಬಲಗಾಲಿನ ಸ್ನಾಯು ಸೆಳೆತಕ್ಕೆ ಒಳಗಾಗಿರುವ ಅನುಭವಿ ಬ್ಯಾಟರ್‌ ವಿರಾಟ್ ಕೊಹ್ಲಿ, ಇದೀಗ ಸಂಪೂರ್ಣ ಚೇತರಿಸಿಕೊಳ್ಳುತ್ತಿದ್ದು, ಅವರ ಫಿಟ್ನೆಸ್ ಮೇಲೆ ಬಿಸಿಸಿಐ ವೈದ್ಯಕೀಯ ಸಿಬ್ಬಂದಿ ಲಂಡನ್‌ನಲ್ಲಿ ಕಣ್ಣಿಟ್ಟಿದ್ದಾರೆ. ಜೂನ್ 22ರಂದು ಕೊಹ್ಲಿ ಬೆಂಗಳೂರಿನಲ್ಲಿರುವ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಫಿಟ್ನೆಸ್ ಟೆಸ್ಟ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories