ಇಂದೋರ್‌ನಲ್ಲಿ ಸೋತ ಟೀಂ ಇಂಡಿಯಾ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ಗೇರುತ್ತಾ..? ಹೇಗಿದೆ ಲೆಕ್ಕಾಚಾರ?

Published : Mar 03, 2023, 02:31 PM IST

ಬೆಂಗಳೂರು(ಮಾ.03): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 4 ಪಂದ್ಯಗಳ ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ನೇತೃತ್ವದ ಆಸ್ಟ್ರೇಲಿಯಾ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನಿಂದ ಟೀಂ ಇಂಡಿಯಾದ ವಿಶ್ವ ಟೆಸ್ಟ್‌ ಚಾಂಪಿಯನ್‌ ಫೈನಲ್‌ ಹಾದಿ ಕೊಂಚ ದುರ್ಗಮವಾಗಿದೆ. ಟೀಂ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಲೆಕ್ಕಾಚಾರ ಹೇಗಿದೆ ಎನ್ನುವುದರ ಕಂಪ್ಲೀಟ್‌ ಡೀಟೈಲ್ಸ್‌ ಇಲ್ಲಿದೆ ನೋಡಿ.  

PREV
16
ಇಂದೋರ್‌ನಲ್ಲಿ ಸೋತ ಟೀಂ ಇಂಡಿಯಾ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ಗೇರುತ್ತಾ..? ಹೇಗಿದೆ ಲೆಕ್ಕಾಚಾರ?

ಇಂದೋರ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಸ್ಟೀವ್ ಸ್ಮಿತ್ ನೇತೃತ್ವದ ಆಸ್ಟ್ರೇಲಿಯಾ ತಂಡವು 9 ವಿಕೆಟ್‌ಗಳ ಜಯ ಸಾಧಿಸಿದೆ. ಇದರ ಜತೆಗೆ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ಲಗ್ಗೆಯಿಟ್ಟಿದೆ.

26

ಮೂರನೇ ಟೆಸ್ಟ್‌ ಪಂದ್ಯ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾ ತಂಡವು 66.67 ಪ್ರತಿಶತ ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿತ್ತು. ಇದೀಗ ಇಂದೋರ್ ಟೆಸ್ಟ್ ಗೆಲುವಿನೊಂದಿಗೆ 68.52 ಪ್ರತಿಶತ ಅಂಕಗಳಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ಲಗ್ಗೆಯಿಟ್ಟಿದೆ.
 

36

ಇನ್ನು ಇಂದೋರ್ ಟೆಸ್ಟ್‌ ಪಂದ್ಯಕ್ಕೂ ಮುನ್ನ  ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, 64.04 ಪ್ರತಿಶತ ಅಂಕದೊಂದಿಗೆ ಎರಡನೇ ಸ್ಥಾನದಲ್ಲಿತ್ತು. ಇದೀಗ ಮೂರನೇ ಟೆಸ್ಟ್ ಪಂದ್ಯದಲ್ಲಿ 9 ವಿಕೆಟ್ ಅಂತರದ ಸೋಲಿನ ಬಳಿಕ 60.29 ಪ್ರತಿಶತ ಅಂಕಕ್ಕೆ ಕುಸಿದಿದ್ದರೂ, ಎರಡನೇ ಸ್ಥಾನದಲ್ಲಿಯೇ ಮುಂದುವರೆದಿದೆ.
 

46

ಇದೀಗ ಮಾರ್ಚ್ 09ರಿಂದ ಅಹಮದಾಬಾದ್‌ನಲ್ಲಿ ಆರಂಭವಾಗಲಿರುವ ನಾಲ್ಕನೇ ಹಾಗೂ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದರೇ, ಅನಾಯಾಸವಾಗಿ ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೇರಲಿದೆ. ಇಲ್ಲದಿದ್ದರೇ, ಬೇರೆ ತಂಡಗಳ ಫಲಿತಾಂಶದ ಮೇಲೆ ಟೀಂ ಇಂಡಿಯಾ ಭವಿಷ್ಯ ನಿರ್ಧಾರವಾಗಲಿದೆ.

56

ಸದ್ಯ ಶ್ರೀಲಂಕಾ ತಂಡವು 53.33 ಪ್ರತಿಶತ ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇದೇ ತಿಂಗಳಾಂತ್ಯದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ಎದುರಿನ ಎರಡು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಲಂಕಾ ತಂಡವು 2-0 ಅಂತರದಲ್ಲಿ ಗೆಲುವು ಸಾಧಿಸಿದರೆ, ಇತ್ತ ಕೊನೆಯ ಟೆಸ್ಟ್‌ ಪಂದ್ಯವನ್ನು ಟೀಂ ಇಂಡಿಯಾ ಸೋತರೇ, ಭಾರತ ತಂಡವು ಫೈನಲ್‌ ರೇಸ್‌ನಿಂದ ಹೊರಬೀಳಲಿದೆ.
 

66

ಒಂದು ವೇಳೆ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ಪ್ರವಾಸದಲ್ಲಿ ಒಂದು ಸೋಲು  ಅಥವಾ ಡ್ರಾ ಮಾಡಿಕೊಂಡರೂ ಸಹಾ ಟೀಂ ಇಂಡಿಯಾ, ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಲಗ್ಗೆಯಿಡಲಿದೆ.
 

Read more Photos on
click me!

Recommended Stories