SA vs IND: ಭಾರತ ಎದುರಿನ ಟೆಸ್ಟ್‌ ಸರಣಿಗೂ ದಕ್ಷಿಣ ಆಫ್ರಿಕಾ ತಂಡಕ್ಕೆ ಬಿಗ್‌ ಶಾಕ್..!

Suvarna News   | Asianet News
Published : Dec 21, 2021, 04:16 PM IST

ಜೊಹಾನ್ಸ್‌ಬರ್ಗ್‌: ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ತಂಡಗಳ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ನಡುವಿನ ಫ್ರೀಡಂ ಟ್ರೋಫಿ  ಸರಣಿಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ದಕ್ಷಿಣ ಆಫ್ರಿಕಾ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ಮಾರಕ ವೇಗಿ ಟೆಸ್ಟ್ ಸರಣಿಯಿಂದಲೇ (Test Cricket Series) ಹೊರಬಿದ್ದಿದ್ದಾರೆ. ಅಷ್ಟಕ್ಕೂ ಯಾರು ಆ ಬೌಲರ್ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ

PREV
17
SA vs IND: ಭಾರತ ಎದುರಿನ ಟೆಸ್ಟ್‌ ಸರಣಿಗೂ ದಕ್ಷಿಣ ಆಫ್ರಿಕಾ ತಂಡಕ್ಕೆ ಬಿಗ್‌ ಶಾಕ್..!

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವು ಡಿಸೆಂಬರ್ 26ರಿಂದ ಸೆಂಚುರಿಯನ್‌ನಲ್ಲಿ ಆರಂಭವಾಗಲಿದ್ದು, ಗೆಲುವಿನೊಂದಿಗೆ ಶುಭಾರಂಭ ಮಾಡಲು ಉಭಯ ತಂಡಗಳು ತುದಿಗಾಲಿನಲ್ಲಿ ನಿಂತಿವೆ.

27

ಫ್ರೀಡಂ ಟ್ರೋಫಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ ದಕ್ಷಿಣ ಆಫ್ರಿಕಾ ತಂಡಕ್ಕೆ ದೊಡ್ಡ ಶಾಕ್ ಎದುರಾಗಿದ್ದು, ತಂಡದ ಮಾರಕ ವೇಗಿ ಏನ್ರಿಚ್ ನೊಕಿಯ ಮೊಣಕಾಲು ಗಾಯದ ಸಮಸ್ಯೆಯಿಂದಾಗಿ ಟೆಸ್ಟ್ ಸರಣಿಯಿಂದಲೇ ಹೊರಬಿದ್ದಿದ್ದಾರೆ. 

37

ಎರಡನೇ ಆವೃತ್ತಿಯ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಕೆಲವು ಅಂಕಗಳನ್ನು ಕಲೆಹಾಕುವ ಲೆಕ್ಕಾಚಾರದಲ್ಲಿದ್ದ ಹರಿಣಗಳ ಪಡೆಗೆ ನೊಕಿಯೆ ಅನುಪಸ್ಥಿತಿ ತಂಡವನ್ನು ಕಾಡುವ ಸಾಧ್ಯತೆಯಿದೆ. 

47

ಹರಿಣಗಳ ಬೌಲರ್‌ ಏನ್ರಿಚ್ ನೊಕಿಯೆ ಭಾರತ ವಿರುದ್ದದ ಮೂರು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿರುವ ನೊಕಿಯೆ, ನಿರೀಕ್ಷಿತ ಗುಣಮುಖರಾಗಿಲ್ಲ. ತಜ್ಞರು ನೊಕಿಯೆಗೆ ಸೂಕ್ತ ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

57

ಭಾರತ ತಂಡ ಕೂಡಾ ಗಾಯದ ಸಮಸ್ಯೆಯನ್ನು ಎದುರಿಸುತ್ತಿದ್ದು, ತಂಡದ ಆರಂಭಿಕ ಬ್ಯಾಟರ್‌ ರೋಹಿತ್ ಶರ್ಮಾ ಹಾಗೂ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. 

67

ಇದಷ್ಟೇ ಅಲ್ಲದೇ ಮತ್ತೋರ್ವ ಆರಂಭಿಕ ಬ್ಯಾಟರ್‌ ಶುಭ್‌ಮನ್‌ ಗಿಲ್ ಹಾಗೂ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಕೂಡಾ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಫಿಟ್ನೆಸ್ ಕಾರಣದಿಂದ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಆಯ್ಕೆಯಾಗಲು ವಿಫಲರಾಗಿದ್ದಾರೆ. 

77

ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿ ವೇಳೆಗೆ ಸಂಪೂರ್ಣ ಫಿಟ್ ಆಗುವ ನಿರೀಕ್ಷೆಯಿದ್ದು, ತಂಡವನ್ನು ನಾಯಕನಾಗಿ ಮುನ್ನಡೆಸುವ ಸಾಧ್ಯತೆಯಿದೆ. ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಯು ಜನವರಿ 19ರಿಂದ ಆರಂಭವಾಗಲಿದೆ.

Read more Photos on
click me!

Recommended Stories