ವಿಶ್ವಕಪ್ ಬೆನ್ನಲ್ಲೇ ಐಸಿಸಿ ರ‍್ಯಾಂಕಿಂಗ್‌ ಪ್ರಕಟ, ವಿರಾಟ್ ಕೊಹ್ಲಿಗೆ ಭಡ್ತಿ, ಮೊದಲ ಸ್ಥಾನದಲ್ಲಿ ಗಿಲ್!

Published : Nov 22, 2023, 06:19 PM IST

ವಿಶ್ವಕಪ್ ಮುಗಿದ ಬೆನ್ನಲ್ಲೇ ಏಕದಿನ ರ‍್ಯಾಂಕಿಂಗ್‌ ಪಟ್ಟಿ ಪ್ರಕಟಗೊಂಡಿದೆ. ಆಟಗಾರರ ರ‍್ಯಾಂಕಿಂಗ್‌ನಲ್ಲಿ ವಿರಾಟ್ ಕೊಹ್ಲಿ ಭಡ್ತಿ ಪಡೆದಿದ್ದಾರೆ. ಇಷ್ಟೇ ಅಲ್ಲ ಟಾಪ್ 5ನಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರೇ ಮೇಲುಗೈ ಸಾಧಿಸಿದ್ದಾರೆ. ಹೊಸ ಪಟ್ಟಿ ಇಲ್ಲಿದೆ.

PREV
18
ವಿಶ್ವಕಪ್ ಬೆನ್ನಲ್ಲೇ ಐಸಿಸಿ ರ‍್ಯಾಂಕಿಂಗ್‌ ಪ್ರಕಟ, ವಿರಾಟ್ ಕೊಹ್ಲಿಗೆ ಭಡ್ತಿ, ಮೊದಲ ಸ್ಥಾನದಲ್ಲಿ ಗಿಲ್!

ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರೂ ಅತ್ಯುತ್ತಮ ಪ್ರದರ್ಶನ ನೀಡಿದೆ. ಬ್ಯಾಟಿಂಗ್, ಬೌಲಿಂಗ್‌ನಲ್ಲಿ ಭಾರತ ದಾಖಲೆ ಪರ್ಫಾಮೆನ್ಸ್ ನೀಡಿದೆ. ವಿಶ್ವಕಪ್ ಬೆನ್ನಲ್ಲೇ ಐಸಿಸಿ ರ‍್ಯಾಂಕಿಂಗ್‌ ಪ್ರಕಟಗೊಂಡಿದೆ.
 

28

ವಿಶ್ವಕಪ್ ಟೂರ್ನಿ ಪ್ರದರ್ಶನದಿಂದ ಏಕದಿನ ಆಟಗಾರರ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಕೆಲ ಬದಲಾವಣೆಗಳಾಗಿದೆ. ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ 3ನೇ ಸ್ಥಾನಕ್ಕೆ ಜಿಗಿದಿದ್ದಾರೆ.

38

ಫೈನಲ್ ಪಂದ್ಯದಲ್ಲಿ ಶುಭಮನ್ ಗಿಲ್ ನಿರೀಕ್ಷಿತ ಪ್ರದರ್ಶನ ನೀಡದಿದ್ದರೂ ಬ್ಯಾಟಿಂಗ್ ವಿಭಾಗದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಗಿಲ್ 826 ರೇಟಿಂಗ್ ಪಾಯಿಂಟ್ಸ್ ಪಡೆದಿದ್ದಾರೆ. ಇನ್ನು ಎರಡನೇ ಸ್ಥಾನದಲ್ಲಿರುವ ಪಾಕಿಸ್ದಾನದ ಬಾಬರ್ ಅಜಮ್ 824 ಅಂಕ ಸಂಪಾದಿಸಿದ್ದಾರೆ.
 

48

ಬ್ಯಾಟಿಂಗ್ ವಿಭಾಗದ ಟಾಪ್ 5ನಲ್ಲಿ ಮೂವರು ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಕಾಣಿಸಿಕೊಂಡಿದ್ದಾರೆ. ನಾಲ್ಕನೇ ಸ್ಥಾನವನ್ನು ರೋಹಿತ್ ಶರ್ಮಾ ಅಲಂಕರಿಸಿದ್ದರೆ. ರೋಹಿತ್ ಶರ್ಮಾ769 ರೇಟಿಂಗ್ ಪಾಯಿಂಟ್ಸ್ ಪಡೆದಿದ್ದಾರೆ. 5ನೇ ಸ್ಥಾನ ಸೌತ್ ಆಫ್ರಿಕಾದ ಕ್ವಿಂಟನ್ ಡಿಕಾಕ್ ಪಾಲಾಗಿದೆ.

58
Keshav Maharaj

ಏಕದಿನ ಬೌಲಿಂಗ್ ವಿಭಾಗದಲ್ಲಿ ಮೊದಲ ಸ್ಥಾನ ಸೌತ್ ಆಫ್ರಿಕಾದ ಕೇಶವ್ ಮಹಾರಾಜ್ ಪಾಲಾಗಿದ್ದರೆ, ಎರಡನೇ ಸ್ಥಾನ ಆಸ್ಟ್ರೇಲಿಯಾದ ಜೋಶ್ ಹೇಜಲ್‌ವುಡ್ ಅಲಂಕರಿಸಿದ್ದಾರೆ.

68
Mohammed Siraj

ಬೌಲಿಂಗ್ ವಿಭಾಗದ ಟಾಪ್ 5 ಪಟ್ಟಿಯಲ್ಲಿ ಇಬ್ಬರು ಟೀಂ ಇಂಡಿಯಾ ವೇಗಿಗಳು ಕಾಣಿಸಿಕೊಂಡಿದ್ದಾರೆ. 699 ರೇಟಿಂಗ್ ಪಾಯಿಂಟ್ಸ್ ಪಡೆದಿರುವ ಮೊಹಮ್ಮದ್ ಸಿರಾಜ್ 3ನೇ ಸ್ಥಾನದಲ್ಲಿದ್ದಾರೆ. 

78

4ನೇ ಸ್ಥಾನದಲ್ಲಿ 685 ರೇಟಿಂಗ್ ಪಾಯಿಂಟ್ಸ್ ಪಡೆದಿರುವ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಂಡಿದ್ದಾರೆ. 5ನೇ ಸ್ಥಾನ ಆಸ್ಟ್ರೇಲಿಯಾದ ಸ್ಪಿನ್ನರ್ ಆ್ಯಡಮ್ ಜಂಪಾ ಪಾಲಾಗಿದೆ.

88

ಏಕದಿನ ಆಲ್ರೌಂಡರ್ ವಿಭಾಗದಲ್ಲಿ ಮೊದಲ ಸ್ಥಾನ ಬಾಂಗ್ಲಾದೇಶದ  ಶಕೀಬ್ ಅಲ್ ಹಸನ್ ಅಲಂಕರಿಸಿದ್ದಾರೆ. ಟೀಂ ಇಂಡಿಯಾದ ರವೀಂದ್ರ ಜಡೇಜಾ 10ನೇ ಸ್ಥಾನದಲ್ಲಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories