T20 World Cup: Aus vs NZ ಆಸೀಸ್ ಎದುರಿನ ಫೈನಲ್‌ಗೂ ಮುನ್ನ ನ್ಯೂಜಿಲೆಂಡ್ ತಂಡಕ್ಕೆ ಬಿಗ್ ಶಾಕ್‌..!

Suvarna News   | Asianet News
Published : Nov 12, 2021, 04:40 PM IST

ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ನವೆಂಬರ್ 14ರಂದು ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ (Dubai International Stadium) 2021ನೇ ಸಾಲಿನ ಐಸಿಸಿ ಟಿ20 ವಿಶ್ವಕಪ್ ಫೈನಲ್‌ ಪಂದ್ಯವು ಜರುಗಲಿದ್ದು, ಪ್ರಶಸ್ತಿಗಾಗಿ ನ್ಯೂಜಿಲೆಂಡ್ (New Zealand Cricket Team) ಹಾಗೂ ಆಸ್ಟ್ರೇಲಿಯಾ ತಂಡಗಳು (Australia Cricket Team) ಸೆಣಸಾಟ ನಡೆಸಲಿವೆ. ಫೈನಲ್ ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ ನ್ಯೂಜಿಲೆಂಡ್ ಪಾಳಯದಿಂದ ಆಘಾತಕಾರಿಯಾದ ಸುದ್ದಿಯೊಂದು ಹೊರಬಿದ್ದಿದೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.  

PREV
17
T20 World Cup: Aus vs NZ ಆಸೀಸ್ ಎದುರಿನ ಫೈನಲ್‌ಗೂ ಮುನ್ನ ನ್ಯೂಜಿಲೆಂಡ್ ತಂಡಕ್ಕೆ ಬಿಗ್ ಶಾಕ್‌..!

ಯುಎಇನಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಸೆಮಿಫೈನಲ್‌ನಲ್ಲಿ ಮಣಿಸಿದ ನ್ಯೂಜಿಲೆಂಡ್ ತಂಡವು ಮೊದಲ ಬಾರಿಗೆ ಚುಟುಕು ಕ್ರಿಕೆಟ್ ವಿಶ್ವಕಪ್‌ನಲ್ಲಿ ಫೈನಲ್‌ಗೆ ಲಗ್ಗೆಯಿಟ್ಟಿದೆ.

27

ಇಂಗ್ಲೆಂಡ್ ವಿರುದ್ದದ ಸೆಮಿಫೈನಲ್‌ ಪಂದ್ಯದಲ್ಲಿ ಕಿವೀಸ್ ವಿಕೆಟ್ ಕೀಪರ್ ಬ್ಯಾಟರ್‌ ಡೆವೊನ್ ಕಾನ್‌ವೇ ಅಮೂಲ್ಯ 46 ರನ್‌ ಬಾರಿಸುವ ಮೂಲಕ ನ್ಯೂಜಿಲೆಂಡ್ ತಂಡ ಫೈನಲ್‌ಗೇರುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

37

ಅಬುಧಾಬಿಯಲ್ಲಿ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಡೆವೊನ್ ಕಾನ್‌ವೇ ಅಂಗೈಗೆ ಬಲವಾದ ಪೆಟ್ಟು ಬಿದ್ದಿದ್ದು, ಎಕ್ಸ್‌-ರೇ ನಡೆಸಿದಾಗ ಕಾನ್‌ವೇ ಅವರ ಬಲುಗೈ ಹಸ್ತದಲ್ಲಿ ಬಿರುಕುಬಿಟ್ಟಿರುವುದು ಖಚಿತವಾಗಿದೆ. ಹೀಗಾಗಿ ಟಿ20 ವಿಶ್ವಕಪ್ ಫೈನಲ್ ಹಾಗೂ ಭಾರತ ವಿರುದ್ದದ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ.

47

ಇದೀಗ ಡೆವೊನ್ ಕಾನ್‌ವೇ ಅನುಪಸ್ಥಿತಿ ನ್ಯೂಜಿಲೆಂಡ್ ತಂಡದ ತಲೆನೋವು ಹೆಚ್ಚುವಂತೆ ಮಾಡಿದೆ. ಕಾನ್‌ವೇ ಬದಲಿಗೆ ಟಿಮ್‌ ಸೈಫರ್ಟ್‌ ಫೈನಲ್‌ ಪಂದ್ಯದಲ್ಲಿ ವಿಕೆಟ್‌ ಕೀಪರ್ ಆಗಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವೆನಿಸಿದೆ.

57
Tim Seifert

ಟಿಮ್ ಸೈಫರ್ಟ್‌ ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ ಕಿವೀಸ್ ಪರ ಕಣಕ್ಕಿಳಿದಿದ್ದರು. ಇದಾದ ಬಳಿಕ ಉಳಿದೆಲ್ಲಾ ಪಂದ್ಯಗಳಲ್ಲೂ ಸೈಫರ್ಟ್ ಬೆಂಚ್ ಕಾಯಿಸಿದ್ದರು. ಇದೀಗ ಮಹತ್ವದ ಪಂದ್ಯದಲ್ಲಿ ಸೈಫರ್ಟ್ ತಮ್ಮ ಸಾಮರ್ಥ್ಯ ಸಾಬೀತುಪಡಿಸುವ ಒತ್ತಡಕ್ಕೆ ಸಿಲುಕಿದ್ದಾರೆ.

67

ನ್ಯೂಜಿಲೆಂಡ್ ತಂಡವು ಇದುವರೆಗೂ ವಿಶ್ವಕಪ್ ಜಯಿಸಿಲ್ಲ. 2015 ಹಾಗೂ 2019ರ ಏಕದಿನ ವಿಶ್ವಕಪ್‌ನಲ್ಲಿ ಕಿವೀಸ್ ತಂಡವು ಫೈನಲ್‌ ಪ್ರವೇಶಿಸಿತ್ತಾದರೂ, ಪ್ರಶಸ್ತಿ ಸುತ್ತಿನಲ್ಲಿ ಮುಗ್ಗರಿಸಿ ನಿರಾಸೆ ಅನುಭವಿಸಿತ್ತು.

77

ಇದೀಗ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿ ಚೊಚ್ಚಲ ಬಾರಿಗೆ ಕಿವೀಸ್ ವಿಶ್ವಕಪ್ ಎತ್ತಿಹಿಡಿಯುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

Read more Photos on
click me!

Recommended Stories