ಟಿ20 ವಿಶ್ವಕಪ್ ತಂಡದ ಪ್ಲಾನ್‌ನಲ್ಲೇ ಇರದ ಇಶಾನ್ ಕಿಶನ್ ಟೀಂ ಇಂಡಿಯಾಗೆ ಸೆಲೆಕ್ಟ್ ಆಗಿದ್ದು ಹೇಗೆ? ಇದಕ್ಕೆ ಯಾರು ಕಾರಣ ಗೊತ್ತಾ?

Published : Feb 16, 2026, 01:37 PM IST

ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ, ಪಾಕಿಸ್ತಾನ ಎದುರು ಗೆದ್ದು ಬೀಗಿದೆ. ಈ ಗೆಲುವಿನ ರೂವಾರಿ ಇಶಾನ್ ಕಿಶನ್. ಎರಡೂವರೆ ವರ್ಷದಿಂದ ತಂಡದಿಂದ ಹೊರಗುಳಿದಿದ್ದ ಇಶಾನ್ ಕಿಶನ್, ಡೈರೆಕ್ಟ್ ಟಿ20 ವಿಶ್ವಕಪ್ ಆಗಿದ್ದು ಹೇಗೆ? ಇದಕ್ಕೆ ಯಾರು ಕಾರಣ ಗೊತ್ತಾ? 

PREV
16
ಪಾಕಿಸ್ತಾನ ತಂಡವನ್ನು ಬಗ್ಗುಬಡಿದ ಭಾರತ

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಸೂಪರ್-08 ಹಂತಕ್ಕೆ ಅಧಿಕೃತವಾಗಿ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ. ಬದ್ದ ಎದುರಾಳಿ ಪಾಕಿಸ್ತಾನ ಎದುರು ಭಾರತ ತಂಡ ಗೆದ್ದು ಬೀಗಿದೆ.

26
ಸ್ಪೋಟಕ ಬ್ಯಾಟಿಂಗ್ ನಡೆಸಿದ ಇಶಾನ್ ಕಿಶನ್

ಪಾಕಿಸ್ತಾನ ಎದುರಿನ ಗೆಲುವಿನಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಇಶಾನ್ ಕಿಶನ್ ಪ್ರಮುಖ ಪಾತ್ರ ವಹಿಸಿದ್ದರು. ಮೊದಲ ಓವರ್‌ನಲ್ಲೇ ಅಭಿಷೇಕ್ ಶರ್ಮಾ ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಭಾರತ ತಂಡಕ್ಕೆ ಇಶಾನ್ ಕಿಶನ್ ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ಆಸರೆಯಾದರು.

36
ಪಾಕ್ ಎದುರು ಸ್ಪೋಟಕ ಅರ್ಧಶತಕ ಸಿಡಿಸಿದ ಇಶಾನ್ ಕಿಶನ್

ಆರಂಭದಿಂದಲೇ ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಇಶಾನ್ ಕಿಶನ್, ಕೇವಲ 27 ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸಿದರು. ಇದಾದ ಬಳಿಕವೂ ಮಿಂಚಿನ ಬ್ಯಾಟಿಂಗ್ ನಡೆಸಿದ ಇಶಾನ್ ಕಿಶನ್, ಕೇವಲ 40 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಆಕರ್ಷಕ 77 ರನ್ ಸಿಡಿಸಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

46
ಇಶಾನ್ ಕಿಶನ್‌ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿದ್ದೇ ಇಂಟ್ರೆಸ್ಟಿಂಗ್ ಸ್ಟೋರಿ

ಅಂದಹಾಗೆ 2023ರ ನವೆಂಬರ್ ಬಳಿಕ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಇಶಾನ್ ಕಿಶನ್ ಅವರ ಕ್ರಿಕೆಟ್ ಬದುಕು ಮುಗಿದೇ ಹೋಯಿತು ಎಂದು ಬಹುತೇಕ ಕ್ರಿಕೆಟ್ ಪಂಡಿತರು ಷರಾ ಬರೆದುಬಿಟ್ಟಿದ್ದರು. ಆದರೆ ದೇಶಿ ಕ್ರಿಕೆಟ್‌ನಿಂದ ಇಶಾನ್ ಕಿಶನ್ ನೇರವಾಗಿ ಭಾರತ ವಿಶ್ವಕಪ್ ತಂಡಕ್ಕೆ ಸೆಲೆಕ್ಟ್ ಆಗಿದ್ದೇ ಒಂದು ಇಂಟ್ರೆಸ್ಟಿಂಗ್ ಸ್ಟೋರಿ.

56
ಇಶಾನ್ ಕಿಶನ್‌ ಕಮ್‌ಬ್ಯಾಕ್ ಮಾಡಲು ಓಜಾ - ಆರ್‌ ಪಿ ಸಿಂಗ್ ಕಾರಣ

ಹೌದು, ಇಶಾನ್ ಕಿಶನ್, ಭಾರತ ತಂಡಕ್ಕೆ ಡೈರೆಕ್ಟ್ ಎಂಟ್ರಿಕೊಡಲು ನೇರ ಕಾರಣ ಟೀಂ ಇಂಡಿಯಾ ಆಯ್ಕೆ ಸಮಿತಿ ಸದಸ್ಯರಾದ ರುದ್ರಪ್ರತಾಪ್ ಸಿಂಗ್ ಹಾಗೂ ಪ್ರಗ್ಯಾನ್ ಓಜಾ ಎನ್ನುವುದು ಬಹುತೇಕ ಮಂದಿಗೆ ಗೊತ್ತಿಲ್ಲ. ಈ ಇಬ್ಬರು ಸೆಲೆಕ್ಟರ್ಸ್ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯ ಮೇಲೆ ಹದ್ದಿನ ಕಣ್ಣಿಟ್ಟಿದ್ದರು.

66
ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಂಡ ಇಶಾನ್ ಕಿಶನ್

ಇತ್ತೀಚೆಗೆ ಮುಕ್ತಾಯವಾದ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಇಶಾನ್ ಕಿಶನ್ ನೇತೃತ್ವದ ಜಾರ್ಖಂಡ್ ತಂಡವು ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿತ್ತು. ಇಶಾನ್ ಕಿಶನ್‌ ಫೈನಲ್‌ನಲ್ಲಿ ಶತಕ ಸಿಡಿಸಿದ್ದರು. ದೇಶಿ ಕ್ರಿಕೆಟ್‌ನಿಂದ ಡೈರೆಕ್ಟ್ ಭಾರತ ತಂಡಕ್ಕೆ ಎಂಟ್ರಿ ಕೊಡಲು ಆರ್‌.ಪಿ ಸಿಂಗ್ ಹಾಗೂ ಓಜಾ ಕಾರಣ. ಈ ಅವಕಾಶ ಬಳಸಿಕೊಂಡಿರುವ ಇಶಾನ್ ಕಿಶನ್ ಸತತ ಎರಡು ಪಂದ್ಯಗಳಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿ ಸಿಕ್ಕ ಅವಕಾಶ ಸದುಪಯೋಗಪಡಿಸಿಕೊಂಡಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories