ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ (Team India), ಆಫ್ಘಾನಿಸ್ತಾನ (Afghanistan) ಎದುರು ಭರ್ಜರಿ ಗೆಲುವು ದಾಖಲಿಸುವ ಮೂಲಕ ಸೆಮೀಸ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಇದೀಗ ನವೆಂಬರ್ 05ರಂದು ಟೀಂ ಇಂಡಿಯಾ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಸ್ಕಾಟ್ಲೆಂಡ್ (Scotland Cricket Team) ತಂಡವನ್ನು ಎದುರಿಸಲಿದೆ. ಸ್ಕಾಟ್ಲೆಂಡ್ ಎದುರಿನ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ
1. ಕೆ.ಎಲ್.ರಾಹುಲ್:
ಸ್ಪೋಟಕ ಆರಂಭಿಕ ಬ್ಯಾಟ್ಸ್‌ಮನ್ ರಾಹುಲ್, ಆಫ್ಘಾನಿಸ್ತಾನ ಎದುರು ಸ್ಫೋಟಕ ಬ್ಯಾಟಿಂಗ್ ಮೂಲಕ ಫಾರ್ಮ್‌ಗೆ ಮರಳಿದ್ದು, ಅದೇ ಲಯವನ್ನು ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ
211
2.ರೋಹಿತ್ ಶರ್ಮಾ:
ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಕೂಡಾ ಕಳೆದ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿ ತಂಡ ಬೃಹತ್ ಮೊತ್ತ ಗಳಿಸಲು ನೆರವಾಗಿದ್ದರು. ಹೀಗಾಗಿ ಹಿಟ್‌ಮ್ಯಾನ್ ಮತ್ತೊಂದು ಉತ್ತಮ ಇನಿಂಗ್ಸ್ ಆಡುವ ಸಾಧ್ಯತೆಯಿದೆ.
311
3. ವಿರಾಟ್ ಕೊಹ್ಲಿ:
ಟೀಂ ಇಂಡಿಯಾ ನಾಯಕ ಕೊಹ್ಲಿಗೆ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶವೇ ಸಿಗಲಿಲ್ಲ. ಬರ್ತ್ ಡೇ ಬಾಯ್ ಕಿಂಗ್ ಕೊಹ್ಲಿ ತಮ್ಮ ಜನ್ಮದಿನದಂದು ಮತ್ತೊಂದು ಸ್ಮರಣೀಯ ಇನಿಂಗ್ಸ್ ಆಡುವ ಸಾಧ್ಯತೆಯಿದೆ.
411
4.ಸೂರ್ಯಕುಮಾರ್ ಯಾದವ್:
ಭಾರತದ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್ ಯಾದವ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ. ಕಳೆದ ಪಂದ್ಯದಲ್ಲಿ ಸೂರ್ಯ ಕೂಡಾ ಬ್ಯಾಟಿಂಗ್ ಮಾಡಲು ಇಳಿದಿರಲಿಲ್ಲ. ಟಿ20 ವಿಶ್ವಕಪ್‌ನಲ್ಲಿ ಮತ್ತೊಮ್ಮೆ ತಮ್ಮ ಸಾಮರ್ಥ್ಯ ಅನಾವರಣ ಮಾಡಲು ಸೂರ್ಯ ಕಾಯುತ್ತಿದ್ದಾರೆ.
511
5.ರಿಷಭ್ ಪಂತ್:
ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್. ಮಧ್ಯಮ ಕ್ರಮಾಂಕದಲ್ಲಿ ನಿರ್ಭಯವಾಗಿ ಬ್ಯಾಟ್ ಬೀಸುವ ಕ್ಷಮತೆ ಪಂತ್‌ಗಿದೆ. ಕಳೆದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಪಂತ್ ಫಿನಿಶರ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದಾರೆ.
611
6. ಹಾರ್ದಿಕ್ ಪಾಂಡ್ಯ:
ಹಾರ್ಡ್ ಹಿಟ್ಟರ್ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ಫಿನಿಶರ್ ಪಾತ್ರ ನಿಭಾಯಿಸಲಿದ್ದಾರೆ. ಬೌಲಿಂಗ್‌ನಲ್ಲಿ ಕೊಂಚ ದುಬಾರಿಯಾಗಿದ್ದರೂ ಸಹಾ ಬ್ಯಾಟಿಂಗ್‌ನಲ್ಲಿ ಲಯ ಕಂಡುಕೊಂಡಿದ್ದು ತಂಡದ ಪಾಲಿಗೆ ಒಳ್ಳೆಯ ಬೆಳವಣಿಗೆಯಾಗಿದೆ.
711
7. ರವೀಂದ್ರ ಜಡೇಜಾ:
ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಬಲ್ಲ ಆಟಗಾರ. ಮಹತ್ವದ ಪಂದ್ಯದಲ್ಲಿ ಜಡ್ಡು ಗೇಮ್ ಚೇಂಜರ್ ಆಗುವ ಸಾಧ್ಯತೆಯಿದೆ.
811
8. ಭುವನೇಶ್ವರ್ ಕುಮಾರ್
ಕಳೆದ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಮತ್ತೊಮ್ಮೆ ದುಬಾರಿಯಾಗಿದ್ದರು. ಹೀಗಾಗಿ ಶಾರ್ದೂಲ್ ಠಾಕೂರ್‌ಗೆ ವಿಶ್ರಾಂತಿ ನೀಡಿ ಮತ್ತೊಮ್ಮೆ ಅನುಭವಿ ವೇಗಿ ಭುವನೇಶ್ವರ್‌ಗೆ ಮಣೆಹಾಕುವ ಸಾಧ್ಯತೆ ಹೆಚ್ಚು.
911
9. ರವಿಚಂದ್ರನ್ ಅಶ್ವಿನ್:
ಆಫ್ಘಾನಿಸ್ತಾನ ಎದುರು ಶಿಸ್ತುಬದ್ದ ದಾಳಿ ನಡಸಿದ್ದು ಮಾತ್ರವಲ್ಲದೇ ಪ್ರಮುಖ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಹೀಗಾಗಿ ಮತ್ತೊಮ್ಮೆ ಅಶ್ವಿನ್ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವುದು ಖಚಿತ
1011
10. ಮೊಹಮದ್ ಶಮಿ:
ವೇಗಿ ಶಮಿ ಆಫ್ಘಾನ್ ಎದುರು 3 ವಿಕೆಟ್ ಕಬಳಿಸಿ ಮಿಂಚಿದ್ದರು. ಕೊಂಚ ದುಬಾರಿಯಾದರೂ ಸಹ ಮಹತ್ವದ ಸಂದರ್ಭದಲ್ಲಿ ವಿಕೆಟ್ ಕಬಳಿಸುವ ಕ್ಷಮತೆ ಶಮಿಗಿದೆ.
1111
11. ಜಸ್‌ಪ್ರೀತ್ ಬುಮ್ರಾ:
ಟೀಂ ಇಂಡಿಯಾ ಯಾರ್ಕರ್ ಹಾಗೂ ಡೆತ್ ಓವರ್ ಸ್ಪೆಷಲಿಸ್ಟ್ ಆಗಿರುವ ಬುಮ್ರಾ ವಿಶ್ವದ ಯಾವುದೇ ಪಿಚ್‌ನಲ್ಲಿ ಬೇಕಿದ್ದರೂ ಅಪಾಯಕಾರಿಯಾಗಬಲ್ಲ ಬೌಲರ್. ಬುಮ್ರಾ ಮತ್ತೊಮ್ಮೆ ಅಬ್ಬರಿಸಲು ರೆಡಿಯಾಗಿದ್ದಾರೆ.