T20 World Cup: ಕಿವೀಸ್ ಎದುರು ಐಸಿಸಿ ಕಹಿ ನೆನಪನ್ನು ಅಳಿಸಿ ಹಾಕುತ್ತಾ ಟೀಂ ಇಂಡಿಯಾ..?

First Published Oct 31, 2021, 5:04 PM IST

ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್‌ (ICC T20 World Cup) ಟೂರ್ನಿಯಲ್ಲಿ ವಿರಾಟ್ ಕೊಹ್ಲಿ (Virat Kohli) ನೇತೃತ್ವದ ಟೀಂ ಇಂಡಿಯಾ (Team India) ದುಬೈನಲ್ಲಿಂದು ಬಲಿಷ್ಠ ನ್ಯೂಜಿಲೆಂಡ್ (New Zealand Cricket) ತಂಡವನ್ನು ಎದುರಿಸಲಿದೆ. ಈ ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್‌ ಪ್ರವೇಶಿಸುವ ದೃಷ್ಠಿಯಿಂದ ಈ ಪಂದ್ಯ ಟೀಂ ಇಂಡಿಯಾ ಪಾಲಿಗೆ ಮಹತ್ವದ್ದಾಗಿದೆ. ಇದರ ಬೆನ್ನಲ್ಲೇ ಇತಿಹಾಸವನ್ನು ಕೆದಕಿ ನೋಡಿದಾಗ ಭಾರತಕ್ಕೆ ಕಹಿ ನೆನಪುಗಳೇ ಹೆಚ್ಚು. ಏನವು ಕಹಿ ನೆನಪುಗಳು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
 

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಗಿದೆ. ಪಾಕಿಸ್ತಾನ ವಿರುದ್ದ ಭಾರತ 10 ವಿಕೆಟ್‌ಗಳ ರೋಚಕ ಸೋಲು ಕಂಡಿದೆ.

ಟೀಂ ಇಂಡಿಯಾ ಸೆಮಿಫೈನಲ್‌ ಕನಸನ್ನು ಜೀವಂತವಾಗಿರಿಸಿಕೊಳ್ಳಬೇಕಿದ್ದರೆ, ನ್ಯೂಜಿಲೆಂಡ್ ವಿರುದ್ದ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ದುಬೈನಲ್ಲಿ ನಡೆಯಲಿರುವ ಪಂದ್ಯ ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವ ಸಾಧ್ಯತೆಯಿದೆ.

ಐಸಿಸಿ ಕ್ರಿಕೆಟ್ ಟೂರ್ನಿಗಳಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಎದುರು ಭಾರತ ಕಳಪೆ ದಾಖಲೆಯನ್ನು ಹೊಂದಿದೆ. 2003ರ ಬಳಿಕ ಕಿವೀಸ್‌ ವಿರುದ್ದ ಭಾರತ ಆಡಿರುವ ಐಸಿಸಿ ಟೂರ್ನಿಯಲ್ಲಿ ಸೋಲುಂಡಿದೆ.

2007ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಕಿವೀಸ್‌ಗೆ ಶರಣಾಗಿತ್ತು. 2016ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಸೋಲುಂಡಿದೆ. ಎರಡು ಬಾರಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ನ್ಯೂಜಿಲೆಂಡ್‌ಗೆ ಭಾರತ ಸೋಲುಂಡಿದೆ.

ಇನ್ನು ಇಂಗ್ಲೆಂಡ್‌ನಲ್ಲಿ 2019ರಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲೂ ಕಿವೀಸ್ ತಂಡವು 18 ರನ್‌ಗಳ ರೋಚಕ ಜಯ ಸಾಧಿಸಿತ್ತು. 
 

ಇನ್ನು ಸೌಥಾಂಪ್ಟನ್‌ನಲ್ಲಿ 2021ರ ಚೊಚ್ಚಲ ಅವೃತ್ತಿಯ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಭಾರತ ಹಾಗೂ ನ್ಯೂಜಿಲೆಂಡ್ ತಂಡವು ಸೆಣಸಾಟ ನಡೆಸಿದ್ದವು. ಆ ಪಂದ್ಯದಲ್ಲಿ ನ್ಯೂಜಿಲೆಂಡ್‌ 8 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಭಾರತಕ್ಕೆ ಶಾಕ್‌ ನೀಡಿತ್ತು.
 

click me!