ದುಬೈ(ಜು.21): ಕೊರೋನಾ ಭೀತಿಯಿಂದಾಗಿ ಸ್ತಬ್ಧವಾಗಿದ್ದ ಕ್ರಿಕೆಟ್ ಚಟುವಟಿಕೆಗಳು ಕ್ರಿಕೆಟ್ ಜನಕರ ನಾಡಾದ ಇಂಗ್ಲೆಂಡ್‌ನಲ್ಲೇ ಆರಂಭವಾಗಿದೆ. ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಜಂಟಲ್‌ಮನ್ ಕ್ರೀಡೆಗೆ ಮತ್ತಷ್ಟು ಮೆರುಗನ್ನು ಹೆಚ್ಚಿಸಿವೆ.
ಇದೀಗ ಎರಡನೇ ಟೆಸ್ಟ್ ಪಂದ್ಯ ಮುಕ್ತಾಯವಾಗಿದ್ದು, ಆತಿಥೇಯ ಇಂಗ್ಲೆಂಡ್ ತಂಡ 113 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ. ಎರಡನೇ ಟೆಸ್ಟ್ ಪಂದ್ಯ ಮುಕ್ತಾಯವಾಗುತ್ತಿದ್ದಂತೆ ಐಸಿಸಿ ಬ್ಯಾಟ್ಸ್‌ಮನ್‌ಗಳ ನೂತನ ರ‍್ಯಾಂಕಿಂಗ್ ಬಿಡುಗಡೆಗೊಳಿಸಿದ್ದು, ಬೆನ್ ಸ್ಟೋಕ್ಸ್ 6 ಸ್ಥಾನ ಮೇಲೇರಿ ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್ ಟಾಪ್ 10 ರ‍್ಯಾಂಕಿಂಗ್ ಬ್ಯಾಟ್ಸ್‌ಮನ್‌ಗಳ ಪಟ್ಟಿಯನ್ನು ಮುಂದಿಡುತ್ತಿದೆ ನೋಡಿ.