ICC Test Rankings: 10ನೇ ಸ್ಥಾನಕ್ಕೆ ಜಾರಿದ ಕೊಹ್ಲಿ, ಬೌಲಿಂಗ್‌ನಲ್ಲಿ ಅಶ್ವಿನ್ ಝಲಕ್‌..!

Published : Mar 30, 2022, 06:11 PM IST

ದುಬೈ: ಇತ್ತೀಚೆಗಷ್ಟೇ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಮುಕ್ತಾಯವಾಗಿದೆ. ಇದೇ ವೇಳೆ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್‌ ಸರಣಿ ಕೂಡಾ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ ಐಸಿಸಿ ಪರಿಷ್ಕೃತ ರ‍್ಯಾಂಕಿಂಗ್‌ ಪ್ರಕಟಗೊಂಡಿದ್ದು, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕೆಲ ಸ್ಥಾನಗಳನ್ನು ಜಾರಿದ್ದರೆ, ಅನುಭವಿ ಆಫ್‌ ಸ್ಪಿನ್ನರ್ ಅಶ್ವಿನ್ ಕೆಲ ಸ್ಥಾನಗಳನ್ನು ಏರಿಕೆ ಕಂಡಿದ್ದಾರೆ. 

PREV
15
ICC Test Rankings: 10ನೇ ಸ್ಥಾನಕ್ಕೆ ಜಾರಿದ ಕೊಹ್ಲಿ, ಬೌಲಿಂಗ್‌ನಲ್ಲಿ ಅಶ್ವಿನ್ ಝಲಕ್‌..!
Image credit: Getty

ಐಸಿಸಿ ನೂತನ ಟೆಸ್ಟ್‌ ರ‍್ಯಾಂಕಿಂಗ್‌ ಪ್ರಕಟಗೊಂಡಿದ್ದು, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಕೆಲ ಸ್ಥಾನಗಳನ್ನು ಕುಸಿತ ಕಂಡಿದ್ದಾರೆ. ಇನ್ನು ಟೀಂ ಇಂಡಿಯಾ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್‌ ಶ್ರೇಯಾಂಕದಲ್ಲಿ ಗಣನೀಯ ಏರಿಕೆ ಕಂಡಿದ್ದಾರೆ.

25
Image credit: Social Media

ರೋಹಿತ್ ಶರ್ಮಾ 754 ರೇಟಿಂಗ್ ಅಂಕಗಳೊಂದಿಗೆ 8ನೇ ಸ್ಥಾನಕ್ಕೆ ಜಾರಿದ್ದಾರೆ. ಇನ್ನು ಕಳೆದ ಎರಡೂವರೆ ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಬಾರಿಸಲು ವಿಫಲರಾಗಿರುವ ವಿರಾಟ್ ಕೊಹ್ಲಿ 742 ರೇಟಿಂಗ್ ಅಂಕಗಳೊಂದಿಗೆ 10ನೇ ಸ್ಥಾನಕ್ಕೆ ಕುಸಿದಿದ್ದಾರೆ. 

35
Image credit: Getty

ಇನ್ನುಳಿದಂತೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್‌ ರಿಷಭ್ ಪಂತ್ 11ನೇ ಸ್ಥಾನದಲ್ಲಿದ್ದರೆ, ಕನ್ನಡಿಗ ಮಯಾಂಕ್ ಅಗರ್‌ವಾಲ್ 20ನೇ ಸ್ಥಾನದಲ್ಲಿದ್ದಾರೆ. ಇನ್ನುಳಿದಂತೆ ಆಸ್ಟ್ರೇಲಿಯಾದ ಮಾರ್ನಸ್ ಲಬುಶೇನ್ 892 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲೇ ಭದ್ರವಾಗಿದ್ದಾರೆ.

45
Image credit: Getty

ಟೀಂ ಇಂಡಿಯಾ ಆಫ್‌ಸ್ಪಿನ್ನರ್‌ ರವಿಚಂದ್ರನ್ ಅಶ್ವಿನ್‌ ಬೌಲರ್ ವಿಭಾಗದಲ್ಲಿ 850 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇದಾದ ಬಳಿಕ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ 830 ರೇಟಿಂಗ್ ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇನ್ನು 901 ರೇಟಿಂಗ್ ಅಂಕಗಳನ್ನು ಹೊಂದಿರುವ ಪ್ಯಾಟ್ ಕಮಿನ್ಸ್‌ ಮೊದಲ ಸ್ಥಾನದಲ್ಲೇ ಮುಂದುವರೆದಿದ್ದಾರೆ.

55
Image credit: Getty

ಇನ್ನು ಆಲ್ರೌಂಡರ್ ವಿಭಾಗದಲ್ಲಿ ಟೀಂ ಇಂಡಿಯಾ ಸ್ಟಾರ್ ಆಟಗಾರ ಆಲ್ರೌಂಡರ್ ರವೀಂದ್ರ ಜಡೇಜಾ 385 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲೇ ಭದ್ರವಾಗಿದ್ದರೆ, ರವಿಚಂದ್ರನ್ ಅಶ್ವಿನ್ 341 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

Read more Photos on
click me!

Recommended Stories