ಇಂಗ್ಲೆಂಡ್‌ ಎದುರಿನ ಹೈವೋಲ್ಟೇಜ್‌ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಆಡ್ತಾರಾ? ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್

First Published Oct 26, 2023, 1:04 PM IST

ಬೆಂಗಳೂರು: 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಭರ್ಜರಿಯಾಗಿ ಸಾಗುತ್ತಿದ್ದು, ಆತಿಥೇಯ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ತೋರುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಹೀಗಿರುವಾಗಲೇ, ಇದೀಗ ಟೀಂ ಇಂಡಿಯಾ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಇಂಗ್ಲೆಂಡ್ ಎದುರಿನ ಹೈವೋಲ್ಟೇಜ್‌ ಪಂದ್ಯಕ್ಕೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ಕೂಡಿಕೊಳ್ಳಲಿದ್ದಾರೆಯೇ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡಿದ 5 ಪಂದ್ಯಗಳಲ್ಲೂ ಅದ್ಭುತ ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
 

ಇನ್ನು ಬಾಂಗ್ಲಾದೇಶ ಎದುರಿನ ಪಂದ್ಯದ ವೇಳೆ ಬೌಲಿಂಗ್ ಮಾಡುವ ಸಂದರ್ಭದಲ್ಲಿ ಮೊಣಕಾಲಿನ ಗಾಯಕ್ಕೆ ಒಳಗಾಗಿ ಅರ್ಧದಲ್ಲೇ ಮೈದಾನ ತೊರೆದಿದ್ದ ಹಾರ್ದಿಕ್ ಪಾಂಡ್ಯ, ನ್ಯೂಜಿಲೆಂಡ್ ಎದುರಿನ ಪಂದ್ಯಕ್ಕೂ ಅಲಭ್ಯರಾಗಿದ್ದರು.
 

ಇನ್ನು ಹಾರ್ದಿಕ್ ಪಾಂಡ್ಯ, ಇಂಗ್ಲೆಂಡ್ ಎದುರಿನ ಪಂದ್ಯ ವೇಳೆಗೆ ಸಂಪೂರ್ಣ ಫಿಟ್ ಆಗಿ ತಂಡ ಕೂಡಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇನ್ನೂ ಮೊಣಕಾಲು ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ, ಇಂಗ್ಲೆಂಡ್ ಎದುರಿನ ಪಂದ್ಯದಿಂದಲೂ ಹೊರಬಿದ್ದಿದ್ದಾರೆ.
 

ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಲಿಗಮೇಟ್ ಡ್ಯಾಮೇಜ್ ಆಗಿದ್ದು, ಗುರುವಾರ ಫಿಟ್ನೆಸ್‌ ಟೆಸ್ಟ್‌ಗೆ ಒಳಗಾಗಲಿದ್ದಾರೆ. ಇದಾದ ಬಳಿಕವಷ್ಟೇ ಬಿಸಿಸಿಐ ಮೆಡಿಕಲ್ ಟೀಮ್, ಪಾಂಡ್ಯ ಕಮ್‌ಬ್ಯಾಕ್ ದಿನಾಂಕವನ್ನು ಪ್ರಕಟಿಸಲಿದೆ ಎಂದು ಖ್ಯಾತ ಕ್ರಿಕೆಟ್ ವೆಬ್‌ಸೈಟ್ ವರದಿ ಮಾಡಿದೆ. 
 

ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯವು ಅಕ್ಟೋಬರ್ 29ರಂದು ಲಖನೌದ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದ್ದು, ಭಾರತ ತಂಡವು ಗೆಲುವಿನ ನಾಗಾಲೋಟ ಮುಂದುವರೆಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ಹಾರ್ದಿಕ್ ಅನುಪಸ್ಥಿತಿಯಲ್ಲಿ ಕಿವೀಸ್ ವಿರುದ್ದ ಕಣಕ್ಕಿಳಿದಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿ 5 ವಿಕೆಟ್ ಕಬಳಿಸಿ ಮಿಂಚಿದ್ದರು. ಹೀಗಾಗಿ ಒಂದು ವೇಳೆ ಇಂಗ್ಲೆಂಡ್ ಎದುರು ಪಾಂಡ್ಯ ಆಯ್ಕೆಗೆ ಅಲಭ್ಯರಾದರೆ, ಶಮಿ ಮತ್ತೊಮ್ಮೆ ಕಣಕ್ಕಿಳಿಯುವುದು ಬಹುತೇಕ ಖಚಿತವೆನಿಸಲಿದೆ.
 

click me!