IND vs BAN ಪಂದ್ಯದ ವೇಳೆ ಸಾರಾ ತೆಂಡುಲ್ಕರ್ ಪ್ರತ್ಯಕ್ಷ, ಗಿಲ್ ಸೆಂಚುರಿ ಪಕ್ಕಾ ಎಂದ ಫ್ಯಾನ್ಸ್!

Published : Oct 19, 2023, 06:55 PM ISTUpdated : Oct 19, 2023, 06:58 PM IST

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ಪುಣೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ರೋಚಕ ಹೋರಾಟದ ನಡುವೆ ಗ್ಯಾಲರಿಯಲ್ಲಿ ಸಚಿನ್ ಪುತ್ರಿ ಸಾರಾ ತೆಂಡೂಲ್ಕರ್ ಪ್ರತ್ಯಕ್ಷರಾಗಿದ್ದಾರೆ. ಇದರ ಬೆನ್ನಲ್ಲೇ ಮೀಮ್ಸ್ ಹಾಗೂ ಭರ್ಜರಿ ಕಮೆಂಟ್ ವೈರಲ್ ಆಗಿದೆ.

PREV
17
IND vs BAN ಪಂದ್ಯದ ವೇಳೆ ಸಾರಾ ತೆಂಡುಲ್ಕರ್ ಪ್ರತ್ಯಕ್ಷ, ಗಿಲ್ ಸೆಂಚುರಿ ಪಕ್ಕಾ ಎಂದ ಫ್ಯಾನ್ಸ್!

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಐಸಿಸಿ ಏಕದಿನ ವಿಶ್ವಕಪ್ ಲೀಗ್ ಪಂದ್ಯ ರೋಚಕ ಕ್ಷಣಗಳಿಗೆ ಸಾಕ್ಷಿಯಾಗಿದೆ. ಇದರ ನಡುವೆ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಗ್ಯಾಲರಿಯಲ್ಲಿ ಪ್ರತ್ಯಕ್ಷವಾಗಿದ್ದಾರೆ.

27

ಸಾರಾ ತೆಂಡೂಲ್ಕರ್ ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತಿದ್ದಂತೆ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಇದೇ ವೇಳೆ ಶುಭಮನ್ ಗಿಲ್ ಇಂದಿನ ಪಂದ್ಯದಲ್ಲಿ ಶತಕ ಸಿಡಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
 

37

ಇದೀಗ ಅಭಿಮಾನಿಗಳು ಸಾರಾ ಕುರಿತ ಮೀಮ್ಸ್ ಹರಿಬಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಾರಾ ತೆಂಡೂಲ್ಕರ್ ಭಾರಿ ಚರ್ಚೆಯಾಗುತ್ತಿದ್ದಾರೆ. 

47

ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಜೊತೆ ಸಾರಾ ತೆಂಡೂಲ್ಕರ್ ಡೇಟಿಂಗ್ ನಡೆಸುತ್ತಿದ್ದಾರೆ ಅನ್ನೋ ಊಹಾಪೋಹಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಲೇ ಇದೆ

57

ಇವರಿಬ್ಬರ ನಡುವಿನ ಡೇಟಿಂಗ್ ಕುರಿತು ಯಾವುದೇ ಅಧಿಕೃತ ಮಾಹಿತಿಗಳಿಲ್ಲ. ಆದರೆ ಸಾಮಾಜಿಕ ಮಾಧ್ಯಮದಲ್ಲಿ ಡೇಟಿಂಗ್ ನಡೆಸುತ್ತಿದ್ದಾರೆ ಅನ್ನೋ ಮಾತುಗಳು ಪದೇ ಪದೇ ಕೇಳಿಬಂದಿದೆ.

67

ಇತ್ತೀಚೆಗಷ್ಟೇ ಸಾರಾ ತೆಂಡೂಲ್ಕರ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಸಚಿನ್ ತೆಂಡೂಲ್ಕರ್ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದರು.

77

ಪುಣೆಯಲ್ಲಿ ನಡೆಯುತ್ತಿರುವ ಭಾರತ ಹಾಗೂ ಬಾಂಗ್ಲಾದೇಶ ಪಂದ್ಯ ರೋಚಕ ಘಟ್ಟ ತಲುಪಿದೆ. ಭಾರತದ ಗೆಲುವಿಗೆ ಬಾಂಗ್ಲಾದೇಶ 257 ರನ್ ಟಾರ್ಗೆಟ್ ನೀಡಿದೆ

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories