Ind vs Aus: ಆಸೀಸ್ ಎದುರಿನ ಮೊದಲ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ, ಅಶ್ವಿನ್-ಸುಂದರ್ ಇಬ್ಬರಲ್ಲಿ ಯಾರಿಗೆ ಸ್ಥಾನ?

First Published | Sep 22, 2023, 12:57 PM IST

ಮೊಹಾಲಿ: ಇತ್ತೀಚೆಗಷ್ಟೇ ಏಷ್ಯಾಕಪ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಟೀಂ ಇಂಡಿಯಾ ಇದೀಗ ಏಕದಿನ ವಿಶ್ವಕಪ್ ಟೂರ್ನಿಗೂ ಮುನ್ನ ಆಸ್ಟ್ರೇಲಿಯಾ ಎದುರು ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲು ಸಜ್ಜಾಗಿದೆ. ಇಂದು ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ ನೋಡಿ.
 

1. ಶುಭ್‌ಮನ್ ಗಿಲ್:

ಯುವ ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್, 2023ರ ಏಷ್ಯಾಕಪ್ ಟೂರ್ನಿಯಲ್ಲಿ ಫಾರ್ಮ್‌ಗೆ ಮರಳುವಲ್ಲಿ ಯಶಸ್ವಿಯಾಗಿದ್ದರು. ಏಷ್ಯಾಕಪ್‌ನಲ್ಲಿ ಆರು ಪಂದ್ಯಗಳನ್ನಾಡಿ 302 ರನ್ ಬಾರಿಸುವ ಮೂಲಕ ಟೂರ್ನಿಯಲ್ಲಿ ಗರಿಷ್ಠ ರನ್ ಸರದಾರರಾಗಿ ಹೊರಹೊಮ್ಮಿದ್ದರು. ಟೂರ್ನಿಯಲ್ಲಿ 2 ಅರ್ಧಶತಕ ಹಾಗೂ ಒಂದು ಶತಕ ಸಿಡಿಸಿದ್ದ ಗಿಲ್, ಇದೀಗ ಆಸೀಸ್ ಎದುರು ಮಿಂಚಲು ಎದುರು ನೋಡುತ್ತಿದ್ದಾರೆ.
 

2. ಇಶಾನ್ ಕಿಶನ್:

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್, ಇಂದು ಆರಂಭಿಕನಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನಿಸಿದೆ. ಏಷ್ಯಾಕಪ್ ಫೈನಲ್‌ನಲ್ಲಿ ಗಿಲ್ ಹಾಗೂ ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿದು ಭಾರತಕ್ಕೆ 10 ವಿಕೆಟ್ ಗೆಲುವು ತಂದುಕೊಟ್ಟಿದ್ದರು.
 

Latest Videos


3. ಕೆ ಎಲ್ ರಾಹುಲ್:

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಮೊದಲೆರಡು ಪಂದ್ಯಗಳಿಗೆ ನಾಯಕನಾಗಿ ನೇಮಕವಾಗಿರುವ ಕೆ ಎಲ್ ರಾಹುಲ್, ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.
 

4. ಶ್ರೇಯಸ್ ಅಯ್ಯರ್:

ಫಿಟ್ನೆಸ್ ಸಮಸ್ಯೆಯಿಂದ ಏಷ್ಯಾಕಪ್ ಟೂರ್ನಿಯ ಬಹುತೇಕ ಪಂದ್ಯಗಳಿಂದ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್, ಇದೀಗ ಸಂಪೂರ್ಣ ಫಿಟ್ ಆಗಿ ತಂಡ ಕೂಡಿಕೊಂಡಿದ್ದು, ಅಯ್ಯರ್‌ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. 
 

5. ಸೂರ್ಯಕುಮಾರ್ ಯಾದವ್:

ಟಿ20 ಕ್ರಿಕೆಟ್‌ನಲ್ಲಿ ನಂ.1 ಬ್ಯಾಟರ್ ಆಗಿರುವ ಸೂರ್ಯಕುಮಾರ್ ಯಾದವ್‌ ಈಗಾಗಲೇ ಭಾರತ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸೂರ್ಯ, ವಿಶ್ವಕಪ್ ಟೂರ್ನಿಯ ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬೇಕಿದ್ದರೇ ಈ ಸರಣಿಯಲ್ಲಿ ಮಿಂಚಲೇಬೇಕಿದೆ.
 

6. ತಿಲಕ್ ವರ್ಮಾ:

ಮುಂಬೈ ಇಂಡಿಯನ್ಸ್ ತಂಡದ ಪ್ರತಿಭಾನ್ವಿತ ಬ್ಯಾಟರ್ ತಿಲಕ್ ವರ್ಮಾ, ವೆಸ್ಟ್ ಇಂಡೀಸ್ ಎದುರಿನ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿದ್ದರು. ಭವಿಷ್ಯದ ಭಾರತ ತಂಡದಲ್ಲಿ ಸ್ಥಾನ ಗಟ್ಟಿಮಾಡಿಕೊಳ್ಳಲು ತಿಲಕ್‌ಗೆ ಇದು ಉತ್ತಮ ಅವಕಾಶ ಎನಿಸಿದೆ.
 

7. ರವಿಚಂದ್ರನ್ ಅಶ್ವಿನ್:

ಗಾಯದ ಸಮಸ್ಯೆಯಿಂದ ಸ್ಪಿನ್ ಆಲ್ರೌಂಡರ್ ಅಕ್ಷರ್ ಪಟೇಲ್ ಸದ್ಯ ಭಾರತ ತಂಡದಿಂದ ಹೊರಬಿದ್ದಿದ್ದು, ಇದೀಗ ಅನುಭವಿ ಸ್ಪಿನ್ ಆಲ್ರೌಂಡರ್ ಆರ್ ಅಶ್ವಿನ್‌, ಬಹುತೇಕ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವುದು ಖಚಿತ ಎನಿಸಿದೆ.

8. ರವೀಂದ್ರ ಜಡೇಜಾ:

ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ, ಏಷ್ಯಾಕಪ್ ಟೂರ್ನಿಯಲ್ಲಿ 6 ವಿಕೆಟ್ ಕಬಳಿಸಿ ಮಿಂಚಿದ್ದರು. ಆದರೆ ಬ್ಯಾಟಿಂಗ್‌ನಲ್ಲಿ ನಿರೀಕ್ಷಿತ ಪ್ರದರ್ಶನ ತೋರಿರಲಿಲ್ಲ. ಜಡ್ಡು ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
 

9. ಶಾರ್ದೂಲ್ ಠಾಕೂರ್:

ಶಾರ್ದೂಲ್ ಠಾಕೂರ್ ಏಷ್ಯಾಕಪ್ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರಲು ಯಶಸ್ವಿಯಾಗಿರಲಿಲ್ಲ. ಹೀಗಾಗಿ ವಿಶ್ವಕಪ್ ಟೂರ್ನಿಗೂ ಆಸೀಸ್ ಎದುರು ಗಮನಾರ್ಹ ಪ್ರದರ್ಶನ ತೋರಲು ಮುಂಬೈ ಮೂಲದ ಆಲ್ರೌಂಡರ್ ಎದುರು ನೋಡುತ್ತಿದ್ದಾರೆ.
 

10. ಜಸ್ಪ್ರೀತ್ ಬುಮ್ರಾ:

ಮಾರಕ ವೇಗಿ ಬುಮ್ರಾ ತಮ್ಮ ಕರಾರುವಕ್ಕಾದ ವೇಗ ಹಾಗೂ ಯಾರ್ಕರ್ ದಾಳಿಯ ಮೂಲಕ ಮಿಂಚುತ್ತಿದ್ದು, ಇದೀಗ ಆಸೀಸ್ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ. ಭಾರತೀಯ ಪಿಚ್‌ನಲ್ಲಿ ಬುಮ್ರಾ ಮತ್ತಷ್ಟು ಅಪಾಯಕಾರಿ ಆಗಬಲ್ಲರು.
 

11. ಮೊಹಮ್ಮದ್ ಸಿರಾಜ್:

ಏಕದಿನ ಕ್ರಿಕೆಟ್‌ನ ನಂ.1 ವೇಗದ ಬೌಲರ್ ಸಿರಾಜ್, ಏಷ್ಯಾಕಪ್‌ನಲ್ಲಿ ಮಾರಕ ದಾಳಿ ನಡೆಸಿ ಮಿಂಚಿದ್ದರು. ಇದೀಗ ಆಸ್ಟ್ರೇಲಿಯಾ ಬ್ಯಾಟರ್‌ಗಳ ಮೇಲೆ ಸವಾರಿ ಮಾಡಲು ಸಿರಾಜ್ ಎದುರು ನೋಡುತ್ತಿದ್ದಾರೆ.
 

click me!