Ind vs Ban: ಬಾಂಗ್ಲಾದೇಶ ಎದುರಿನ ಮೂರು ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಮಹತ್ವದ ಬದಲಾವಣೆ..?

First Published Dec 9, 2022, 4:55 PM IST

ಢಾಕಾ(ಡಿ.09): ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಟೀಂ ಇಂಡಿಯಾ ಕೆಲ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಈಗಾಗಲೇ ಸರಣಿ ಕೈಚೆಲ್ಲಿರುವ ಟೀಂ ಇಂಡಿಯಾ, ಮೂರನೇ ಪಂದ್ಯದಲ್ಲಿ ಪ್ರಮುಖ 3 ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಮೂರನೇ ಏಕದಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ ನೋಡಿ

1. ಶಿಖರ್ ಧವನ್: ಅನುಭವಿ ಆರಂಭಿಕ ಬ್ಯಾಟರ್ ಶಿಖರ್ ಧವನ್‌, ಮೊದಲೆರಡು ಏಕದಿನ ಪಂದ್ಯಗಳಲ್ಲಿ ರನ್‌ ಬರ ಅನುಭವಿಸುತ್ತಿದ್ದು, ಇದೀಗ ಮೂರನೇ ಪಂದ್ಯದಲ್ಲಿ ದೊಡ್ಡ ಇನಿಂಗ್ಸ್‌ ಆಡುವ ಮೂಲಕ ಫಾರ್ಮ್‌ಗೆ ಮರಳಲು ಎದುರು ನೋಡುತ್ತಿದ್ದಾರೆ.
 

2. ಇಶಾನ್ ಕಿಶನ್‌: ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್‌, ಮೊದಲೆರಡು ಪಂದ್ಯಗಳಲ್ಲಿ ಬೆಂಚ್ ಕಾಯಿಸಿದ್ದರು. ಮೂರನೇ ಏಕದಿನ ಪಂದ್ಯಕ್ಕೆ ರೋಹಿತ್ ಶರ್ಮಾ ಅಲಭ್ಯರಾದ ಹಿನ್ನೆಲೆಯಲ್ಲಿ ಇಶಾನ್‌ ಕಿಶನ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ದೊರೆಯುವ ಸಾಧ್ಯತೆಯಿದೆ.

3. ವಿರಾಟ್ ಕೊಹ್ಲಿ: ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡಾ ಮೊದಲೆರಡು ಪಂದ್ಯಗಳಲ್ಲಿ ನೀರಸ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಇದೀಗ ಟೆಸ್ಟ್ ಸರಣಿಗೂ ಮುನ್ನ ಕಡೆಯ ಏಕದಿನ ಪಂದ್ಯದಲ್ಲಿ ಕೊಹ್ಲಿ ದೊಡ್ಡ ಇನಿಂಗ್ಸ್‌ ಕಟ್ಟಲು ಎದುರು ನೋಡುತ್ತಿದ್ದಾರೆ.
 

4. ಶ್ರೇಯಸ್ ಅಯ್ಯರ್: ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆಯುತ್ತಿರುವ ಶ್ರೇಯಸ್‌ ಅಯ್ಯರ್, ಕೊನೆಯ ಏಕದಿನ ಪಂದ್ಯದಲ್ಲೂ ಅದೇ ಲಯ ಮುಂದುವರೆಸಿಕೊಂಡು ಹೋಗುವ ವಿಶ್ವಾಸದಲ್ಲಿದ್ದಾರೆ.

5. ಕೆ. ಎಲ್ ರಾಹುಲ್: ವಿಕೆಟ್ ಕೀಪರ್ ಬ್ಯಾಟರ್ ಕೆ ಎಲ್ ರಾಹುಲ್, ಇದೀಗ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸುವುದರ ಜತೆಗೆ ಬ್ಯಾಟಿಂಗ್‌ನಲ್ಲಿಯೂ ಜವಾಬ್ದಾರಿಯುತ ಪ್ರದರ್ಶನ ತೋರಬೇಕಿದೆ.

6. ರಾಹುಲ್ ತ್ರಿಪಾಠಿ: ಐಪಿಎಲ್ ಹಾಗೂ ದೇಶಿ ಕ್ರಿಕೆಟ್‌ನಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ತೋರುವ ಮೂಲಕ ಗಮನ ಸೆಳೆದಿದ್ದ ರಾಹುಲ್ ತ್ರಿಪಾಠಿ, ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ದೀಪಕ್ ಚಹರ್ ಬದಲಿಗೆ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.

7. ಅಕ್ಷರ್ ಪಟೇಲ್: ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್‌, ಕಳೆದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಬ್ಯಾಟಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗಿದ್ದರು. ಇದೀಗ ಮೂರನೇ ಪಂದ್ಯದಲ್ಲಿ ಅಕ್ಷರ್, ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮಿಂಚಬೇಕಿದೆ.
 

8. ವಾಷಿಂಗ್ಟನ್ ಸುಂದರ್: ತಮಿಳುನಾಡು ಮೂಲದ ಆಲ್ರೌಂಡರ್‌ ವಾಷಿಂಗ್ಟನ್ ಸುಂದರ್, ಮೊದಲ ಏಕದಿನ ಪಂದ್ಯದಲ್ಲಿ ಪರಿಣಾಮಕಾರಿ ಪ್ರದರ್ಶನ ತೋರಿದ್ದರು. ಸುಂದರ್ ಕೊನೆಯ ಪಂದ್ಯದಲ್ಲಿ ಜವಾಬ್ದಾರಿಯುತ ಪ್ರದರ್ಶನ ತೋರಬೇಕಿದೆ.
 

9. ಶಾರ್ದೂಲ್ ಠಾಕೂರ್: ಟೀಂ ಇಂಡಿಯಾ ಅನುಭವಿ ವೇಗಿ ಶಾರ್ದೂಲ್ ಠಾಕೂರ್ ಕಳೆದ ಪಂದ್ಯದಲ್ಲಿ ಶಿಸ್ತುಬದ್ದ ದಾಳಿ ನಡೆಸಿದ್ದರು. ಆದರೆ ವಿಕೆಟ್ ಕಬಳಿಸಲು ಯಶಸ್ವಿಯಾಗಿರಲಿಲ್ಲ. ಶಾರ್ದೂಲ್‌ ವಿಕೆಟ್ ಕಬಳಿಸುವತ್ತ ಗಮನ ಹರಿಸಬೇಕಿದೆ.  
 

10. ಉಮ್ರಾನ್ ಮಲಿಕ್: ಟೀಂ ಇಂಡಿಯಾ ಯುವ ವೇಗಿ ಉಮ್ರಾನ್ ಮಲಿಕ್, ಎರಡನೇ ಏಕದಿನ ಪಂದ್ಯದಲ್ಲಿ ಮಾರಕ ದಾಳಿ ನಡೆಸಿದ್ದರು. ಆದರೆ ಕೊನೆಯಲ್ಲಿ ದುಬಾರಿಯಾಗಿದ್ದರು. ಡೆತ್‌ ಓವರ್‌ಗಳಲ್ಲಿ ಉಮ್ರಾನ್ ಮಲಿಕ್ ಲೈನ್ & ಲೆಂಗ್ತ್‌ ಕಡೆ ಗಮನ ಕೊಡಬೇಕಿದೆ.
 

11. ಮೊಹಮ್ಮದ್ ಸಿರಾಜ್‌: ಅನುಭವಿ ವೇಗಿಗಳ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಸಿರಾಜ್ ಅತ್ಯಂತ ಶಿಸ್ತುಬದ್ದ ದಾಳಿಯ ಮೂಲಕ ಗಮನ ಸೆಳೆಯುತ್ತಿದ್ದಾರೆ. ಸಿರಾಜ್ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
 

click me!