Ind vs Ban: ಬಾಂಗ್ಲಾದೇಶ ಎದುರಿನ ಮೊದಲ ಏಕದಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ, ಯಾರಿಗೆಲ್ಲಾ ಸಿಗಲಿದೆ ಸ್ಥಾನ?

Published : Dec 03, 2022, 01:17 PM IST

ಢಾಕಾ(ಡಿ.03): ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ಮೂರು ಪಂದ್ಯಗಳ ಏಕದಿನ ಸರಣಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ನ್ಯೂಜಿಲೆಂಡ್ ಎದುರಿನ ಏಕದಿನ ಸರಣಿಯಿಂದ ಹೊರಗುಳಿದಿದ್ದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೆ ಎಲ್ ರಾಹುಲ್ ಭಾರತ ತಂಡ ಕೂಡಿಕೊಂಡಿದ್ದು, ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ. ಡಿಸೆಂಬರ್ 04ರಂದು ಆರಂಭವಾಗಲಿರುವ ಮೊದಲ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ  

PREV
111
Ind vs Ban: ಬಾಂಗ್ಲಾದೇಶ ಎದುರಿನ ಮೊದಲ ಏಕದಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ, ಯಾರಿಗೆಲ್ಲಾ ಸಿಗಲಿದೆ ಸ್ಥಾನ?

1. ರೋಹಿತ್ ಶರ್ಮಾ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಟಿ20 ವಿಶ್ವಕಪ್ ಟೂರ್ನಿಯ ಬಳಿಕ ವಿಶ್ರಾಂತಿ ಪಡೆದಿದ್ದು, ಇದೀಗ ಹೊಸ ಹುರುಪಿನೊಂದಿಗೆ ಬಾಂಗ್ಲಾದೇಶ ಎದುರು ಅಬ್ಬರಿಸಲು ಎದುರು ನೋಡುತ್ತಿದ್ದಾರೆ.
 

211

2. ಶಿಖರ್ ಧವನ್: ಗಬ್ಬರ್ ಸಿಂಗ್ ಖ್ಯಾತಿಯ ಧವನ್, ಕಿವೀಸ್ ಎದುರಿನ ಏಕದಿನ ಸರಣಿಯಲ್ಲಿ ತಂಡವನ್ನು ಮುನ್ನಡೆಸಿದ್ದರು. ಇದೀಗ ಹಾಲಿ ನಾಯಕ ರೋಹಿತ್ ಶರ್ಮಾ ಜತೆಗೆ ದೊಡ್ಡ ಜತೆಯಾಟವಾಡುವ ವಿಶ್ವಾಸದಲ್ಲಿದ್ದಾರೆ.
 

311

3. ವಿರಾಟ್ ಕೊಹ್ಲಿ: ಟೀಂ ಇಂಡಿಯಾ ರನ್ ಮಷೀನ್‌ ವಿರಾಟ್ ಕೊಹ್ಲಿ, ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಲಯದಲ್ಲಿದ್ದು, ಬಾಂಗ್ಲಾದೇಶ ಎದುರು ಆರ್ಭಟಿಸುವ ವಿಶ್ವಾಸದಲ್ಲಿದ್ದಾರೆ. ಬಾಂಗ್ಲಾದೇಶ ಎದುರು ವಿರಾಟ್ ಕೊಹ್ಲಿ ಉತ್ತಮ ಟ್ರ್ಯಾಕ್ ರೆಕಾರ್ಡ್ ಹೊಂದಿದ್ದಾರೆ.
 

411

4. ರಿಷಭ್ ಪಂತ್: ಟಿ20 ಕ್ರಿಕೆಟ್‌ನಲ್ಲಿ ರನ್ ಬರ ಅನುಭವಿಸುತ್ತಿರುವ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಏಕದಿನ ಕ್ರಿಕೆಟ್‌ನಲ್ಲಿ ಫಾರ್ಮ್‌ಗೆ ಮರಳುವ ವಿಶ್ವಾಸದಲ್ಲಿದ್ದಾರೆ. ಬಾಂಗ್ಲಾದೇಶ ಎದುರಿನ ಸರಣಿ ಪಂತ್ ಪಾಲಿಗೆ ಸಾಕಷ್ಟು ಮಹತ್ವದ್ದೆನಿಸಿಕೊಂಡಿದೆ.
 

511

5. ಕೆ ಎಲ್ ರಾಹುಲ್: ಕರ್ನಾಟಕ ಮೂಲದ ಕೆ ಎಲ್ ರಾಹುಲ್ ಕೂಡಾ ದೊಡ್ಡ ಮೊತ್ತದ ಇನಿಂಗ್ಸ್ ಆಡಲು ವಿಫಲವಾಗುತ್ತಿದ್ದಾರೆ. ಬಾಂಗ್ಲಾದೇಶ ಎದುರಿನ ಸರಣಿಯಲ್ಲಿ ರಾಹುಲ್ ರನ್ ಮಳೆ ಹರಿಸಲು ಸುವರ್ಣಾವಕಾಶವೆನಿಸಿಕೊಂಡಿದೆ.
 

611

6. ವಾಷಿಂಗ್ಟನ್ ಸುಂದರ್: ನ್ಯೂಜಿಲೆಂಡ್ ಎದುರಿನ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ತೋರಿದ್ದ ಸುಂದರ್‌ಗೆ ಬಾಂಗ್ಲಾದೇಶ ಎದುರಿನ ಸರಣಿಯಲ್ಲಿ ಮತ್ತೊಮ್ಮೆ ಅವಕಾಶ ದೊರೆಯುವ ನಿರೀಕ್ಷೆಯಿದ್ದು, ಉತ್ತಮ ಪ್ರದರ್ಶನ ತೋರುವ ವಿಶ್ವಾಸದಲ್ಲಿದ್ದಾರೆ.
 

711

7. ಅಕ್ಷರ್ ಪಟೇಲ್: ಬೌಲಿಂಗ್ ಆಲ್ರೌಂಡರ್ ಅಕ್ಷರ್ ಪಟೇಲ್‌ ಕೂಡಾ ಈ ಸರಣಿಯಲ್ಲಿ ಮಿಂಚುವ ವಿಶ್ವಾಸದಲ್ಲಿದ್ದಾರೆ. ರವೀಂದ್ರ ಜಡೇಜಾ ಅನುಪಸ್ಥಿತಿಯನ್ನು ಅಕ್ಷರ್ ಪಟೇಲ್ ಯಾವ ರೀತಿ ಬಳಸಿಕೊಳ್ಳುತ್ತಾರೆ ಕಾದು ನೋಡಬೇಕಿದೆ.
 

811
Image credit: Getty

8. ಶಾರ್ದೂಲ್ ಠಾಕೂರ್: ಮಧ್ಯಮ ವೇಗದ ಬೌಲರ್ ಶಾರ್ದೂಲ್ ಠಾಕೂರ್ ಬೌಲಿಂಗ್ ಹಾಗೂ ಅಗತ್ಯ ಸಂದರ್ಭದಲ್ಲಿ ಬ್ಯಾಟಿಂಗ್‌ನಲ್ಲಿ ನೆರವಾಗಬಲ್ಲ ಸಾಮರ್ಥ್ಯವನ್ನು ಹೊಂದಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

911

9. ದೀಪಕ್ ಚಹರ್: ಟೀಂ ಇಂಡಿಯಾ ಸ್ವಿಂಗ್ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಂಡಿರುವ ದೀಪಕ್ ಚಹರ್, ಪವರ್ ಪ್ಲೇ ಹಾಗೂ ಡೆತ್ ಓವರ್‌ನಲ್ಲಿ ವಿಕೆಟ್ ಕಬಳಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ.

1011

10. ಮೊಹಮ್ಮದ್ ಸಿರಾಜ್: ಏಕದಿನ ಸರಣಿಯಿಂದ ಮೊಹಮ್ಮದ್ ಶಮಿ ಹೊರಬಿದ್ದಿರುವುದರಿಂದ, ಮೊಹಮ್ಮದ್ ಸಿರಾಜ್ ಜವಾಬ್ದಾರಿಯುತ ಬೌಲಿಂಗ್ ಪ್ರದರ್ಶನ ತೋರಬೇಕಿದೆ.
 

1111

11. ಉಮ್ರಾನ್ ಮಲಿಕ್: ಶಮಿ ಬದಲಿಗೆ ಕೊನೆಯ ಕ್ಷಣದಲ್ಲಿ ಟೀಂ ಇಂಡಿಯಾ ಕೂಡಿಕೊಂಡಿರುವ ಮಾರಕ ವೇಗಿ ಉಮ್ರಾನ್ ಮಲಿಕ್, ಮಿಂಚಿನ ದಾಳಿ ನಡೆಸುವ ಮೂಲಕ ಬಾಂಗ್ಲಾದೇಶ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.
 

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories