ರಾಜ್‌ಕೋಟ್‌ ಟೆಸ್ಟ್‌ನಲ್ಲಿ 500 ವಿಕೆಟ್ ಕ್ಲಬ್ ಸೇರಲು ರವಿಚಂದ್ರನ್ ಅಶ್ವಿನ್ ರೆಡಿ

First Published Feb 12, 2024, 4:02 PM IST

ರಾಜ್‌ಕೋಟ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗಲೇ ಟೀಂ ಇಂಡಿಯಾ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಪ್ರತಿಷ್ಠಿತ ಕ್ಲಬ್ ಸೇರಲು ರೆಡಿಯಾಗಿದ್ದಾರೆ.
 

ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಮೂರನೇ ಟೆಸ್ಟ್ ಪಂದ್ಯವು ಫೆಬ್ರವರಿ 15ರಿಂದ ರಾಜ್‌ಕೋಟ್‌ನಲ್ಲಿ ಆರಂಭವಾಗಲಿದೆ.
 

ಈಗಾಗಲೇ ಮೊದಲೆರಡು ಪಂದ್ಯಗಳ ಪೈಕಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಗೆಲುವು ಸಾಧಿಸಿದ್ದು, ಇದೀಗ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ನಡೆಯಲಿರುವ ಮೂರನೇ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

Latest Videos


ಇದೇ ಸಂದರ್ಭದಲ್ಲಿ ಟೀಂ ಇಂಡಿಯಾ ಅನುಭವಿ ಆಫ್‌ಸ್ಪಿನ್ನರ್ ಸಾಧನೆಯ ಮೇಲೆ ಕ್ರಿಕೆಟ್ ಅಭಿಮಾನಿಗಳು ಕಣ್ಣಿಟ್ಟಿದ್ದಾರೆ. ಅಶ್ವಿನ್ ಇದೀಗ ಟೆಸ್ಟ್ ಕ್ರಿಕೆಟ್‌ನಲ್ಲಿ 500 ವಿಕೆಟ್ ಕಬಳಿಸುವ ಹೊಸ್ತಿಲಲ್ಲಿದ್ದಾರೆ.

ಹೌದು, ರವಿಚಂದ್ರನ್ ಅಶ್ವಿನ್ ಇದೀಗ ಟೆಸ್ಟ್ ಕ್ರಿಕೆಟ್‌ನಲ್ಲಿ 500 ವಿಕೆಟ್ ಕಬಳಿಸಲು ಕೇವಲ ಇನ್ನೊಂದು ಬಲಿ ಬೇಕಿದೆ. ಇದುವರೆಗೂ 97 ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್ 499 ವಿಕೆಟ್ ಕಬಳಿಸಿದ್ದಾರೆ.

ರಾಜ್‌ಕೋಟ್ ಟೆಸ್ಟ್‌ನಲ್ಲಿ ರವಿಚಂದ್ರನ್ ಅಶ್ವಿನ್ ಇನ್ನೊಂದು ವಿಕೆಟ್ ಕಬಳಿಸಿದರೆ ಟೆಸ್ಟ್ ಕ್ರಿಕೆಟ್‌ನಲ್ಲಿ 500 ವಿಕೆಟ್ ಕಬಳಿಸಿದ ಜಗತ್ತಿನ 9ನೇ ಹಾಗೂ ಭಾರತದ ಎರಡನೇ ಬೌಲರ್ ಎನ್ನುವ ಕೀರ್ತಿಗೆ ಪಾತ್ರರಾಗಲಿದ್ದಾರೆ. 

Ravichandran Ashwin

ಈಗಾಗಲೇ ಅನಿಲ್ ಕುಂಬ್ಳೆ ಟೆಸ್ಟ್ ಕ್ರಿಕೆಟ್‌ನಲ್ಲಿ 619 ವಿಕೆಟ್ ಕಬಳಿಸುವ ಮೂಲಕ ಭಾರತ ಪರ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ. ಅಶ್ವಿನ್ ಇನ್ನೊಂದು ವಿಕೆಟ್ ಕಬಳಿಸಿದರೆ 500 ವಿಕೆಟ್ ಎಲೈಟ್ ಕ್ಲಬ್‌ಗೆ ಸೇರ್ಪಡೆಯಾಗುವಂತೆ ಮಾಡಲಿದೆ.

ಈಗಾಗಲೇ ಮುತ್ತಯ್ಯ ಮುರುಳೀಧರನ್, ಶೇನ್ ವಾರ್ನ್, ಜೇಮ್ಸ್ ಆಂಡರ್‌ಸನ್, ಅನಿಲ್ ಕುಂಬ್ಳೆ, ಸ್ಟುವರ್ಟ್ ಬ್ರಾಡ್, ಗ್ಲೆನ್ ಮೆಗ್ರಾಥ್, ಕರ್ಟ್ನಿ ವಾಲ್ಷ್ ಹಾಗೂ ನೇಥನ್ ಲಯನ್ ಟೆಸ್ಟ್ ಕ್ರಿಕೆಟ್‌ನಲ್ಲಿ 500+ ವಿಕೆಟ್ ಸಾಧನೆ ಮಾಡಿದ್ದಾರೆ.

click me!