ಕಾರ್ಡಿಫ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಹೀಗಿರುವಾಗಲೇ ಶುಭ್‌ಮನ್ ಗಿಲ್ ಲಭ್ಯತೆ ಬಗ್ಗೆ ಇನ್ನೂ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಒಂದು ವೇಳೆ ಗಿಲ್ ಅಲಭ್ಯರಾದರೇ, ಇಂದಿನ ಪಂದ್ಯಕ್ಕೆ ನಾಯಕರಾಗೋದು ಯಾರು?
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯವು ಇಂದು ಇಲ್ಲಿನ ಸೋಫಿಯಾ ಗಾರ್ಡನ್‌ನಲ್ಲಿ ಭಾರತೀಯ ಕಾಲಮಾನ ಸಂಜೆ 5.30ರಿಂದ ಆರಂಭವಾಗಲಿದೆ. ಈ ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸದ್ಯ ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ 1-0 ಮುನ್ನಡೆಯಲ್ಲಿದೆ.
26
ಗಿಲ್ ಲಭ್ಯತೆ ಬಗ್ಗೆ ಶುರುವಾಯ್ತು ಹೊಸ ತಲೆನೋವು
ಇಂದು ನಡೆಯಲಿರುವ ಎರಡನೇ ಏಕದಿನ ಪಂದ್ಯವನ್ನು ಗೆದ್ದು, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಲ್ಲಿ ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ ಟೀಂ ಇಂಡಿಯಾ. ಹೀಗಿರುವಾಗಲೇ ಎಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಪಂದ್ಯದ ವೇಳೆಯಲ್ಲಿ 80 ರನ್ ಗಳಿಸಿ ಬ್ಯಾಟ್ ಮಾಡುತ್ತಿದ್ದ ಗಿಲ್ ಗಾಯದ ಸಮಸ್ಯೆಯಿಂದ ರಿಟೈರ್ಡ್ ಹರ್ಟ್ ಆಗಿ ಪೆವಿಲಿಯನ್‌ಗೆ ವಾಪಾಸ್ಸಾಗಿದ್ದರು. ಹೀಗಾಗಿ ಇಂದಿನ ಪಂದ್ಯಕ್ಕೆ ಗಿಲ್ ಸಂಪೂರ್ಣ ಫಿಟ್ ಆಗಿದ್ದಾರೆಯೇ ಅಥವಾ ಇಲ್ಲವೇ ಎನ್ನುವ ಪ್ರಶ್ನೆಗೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ.
36
ಗಿಲ್ ಅಲಭ್ಯರಾದರೇ, ಇಂದಿನ ಮ್ಯಾಚ್‌ಗೆ ಕ್ಯಾಪ್ಟನ್ ಯಾರು?
ಮುಂಬರುವ 2027ರ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ರೋಹಿತ್ ಶರ್ಮಾ ಅವರನ್ನು ಬದಿಗೆ ಸರಿಸಿ 2025ರ ಅಕ್ಟೋಬರ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಭಾರತ ಏಕದಿನ ತಂಡದ ನಾಯಕತ್ವ ಪಟ್ಟ ಕಟ್ಟಲಾಗಿತ್ತು. ಇನ್ನು ಮುಂಬೈ ಮೂಲದ ಶ್ರೇಯಸ್ ಅಯ್ಯರ್‌ಗೆ ಉಪನಾಯಕ ಪಟ್ಟ ಕಟ್ಟಲಾಗಿದೆ. ಇದೀಗ ಸದ್ಯ ಭಾರತ ತಂಡದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಕೂಡಾ ಇದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗಿಲ್ ಅಲಭ್ಯರಾದರೇ, ಹಂಗಾಮಿ ನಾಯಕ ಯಾರಾಗಬಹುದು ಎನ್ನುವ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿದೆ.
ಇದೀಗ ಸದ್ಯದ ಮಾಧ್ಯಮಗಳ ವರದಿ ಪ್ರಕಾರ, ಟೀಂ ಇಂಡಿಯಾ ಉಪನಾಯಕರಾಗಿರುವ ಶ್ರೇಯಸ್ ಅಯ್ಯರ್ ಎರಡನೇ ಏಕದಿನ ಪಂದ್ಯಕ್ಕೆ ಹಂಗಾಮಿ ನಾಯಕನಾಗಿ ಕಾರ್ಯ ನಿರ್ವಹಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಶ್ರೇಯಸ್ ಅಯ್ಯರ್ ಈಗಾಗಲೇ ಮೂರು ಫ್ರಾಂಚೈಸಿ ಪರ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದು ಮಾತ್ರವಲ್ಲದೇ ಒಮ್ಮೆ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಇದಷ್ಟೇ ಅಲ್ಲದೇ ಶ್ರೇಯಸ್ ಅಯ್ಯರ್ ಇದೀಗ ಭಾರತ ಟಿ20 ತಂಡದ ನಾಯಕರಾಗಿದ್ದಾರೆ.
56
ಶ್ರೇಯಸ್ ಅಯ್ಯರ್‌ಗೆ ಎದುರಾಗಲಿದೆ ಅಗ್ನಿ ಪರೀಕ್ಷೆ:
ಶ್ರೇಯಸ್ ಅಯ್ಯರ್ ಟಿ20 ನಾಯಕರಾದ ಬೆನ್ನಲ್ಲೇ ಭಾರತ ತಂಡವು ಐರ್ಲೆಂಡ್ ಎದುರು 2-0 ಅಂತರದಲ್ಲಿ ವೈಟ್‌ವಾಷ್ ಅನುಭವಿಸಿತ್ತು. ಇದಾದ ಬಳಿಕ ಇಂಗ್ಲೆಂಡ್ ಎದುರು ಭಾರತ 0-4 ಅಂತರದಲ್ಲಿ ಟಿ20 ಸರಣಿ ಸೋತಿದೆ. ಹೀಗಾಗಿ ಶ್ರೇಯಸ್ ಅಯ್ಯರ್ ನಾಯಕನಾಗಿ ಕೊಂಚ ಒತ್ತಡದಲ್ಲಿದ್ದಾರೆ. ಒಂದು ವೇಳೆ ಇಂದು ಹಂಗಾಮಿ ನಾಯಕರಾದರೇ ಶ್ರೇಯಸ್ ಅಯ್ಯರ್ ಅಗ್ನಿ ಪರೀಕ್ಷೆ ಎದುರಿಸಬೇಕಾಗುತ್ತದೆ.
66
ಶ್ರೇಯಸ್ ಅಯ್ಯರ್‌ಗೆ ಸಿಗಲಿದೆ ರೋ-ಕೊ ಬೆಂಬಲ:
ರೋಹಿತ್ ಶರ್ಮಾ ಭಾರತ ಸೀಮಿತ ಓವರ್‌ಗಳ ಕ್ರಿಕೆಟ್‌ನ ಯಶಸ್ವಿ ನಾಯಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಕೊಹ್ಲಿ ಕೂಡಾ ಸಾಕಷ್ಟು ವರ್ಷಗಳ ಕಾಲ ಭಾರತ ತಂಡವನ್ನು ಮುನ್ನಡೆಸಿದ ಅನುಭವ ಇದೆ. ಈ ಇಬ್ಬರ ಜತೆ ಶ್ರೇಯಸ್ ಅಯ್ಯರ್ ಒಳ್ಳೆಯ ಒಡನಾಟ ಹೊಂದಿದ್ದಾರೆ. ಹೀಗಾಗಿ ಇಂದು ಅಯ್ಯರ್ ನಾಯಕರಾದರೇ ರೋ-ಕೊ ಬೆಂಬಲ ಸಿಗಲಿದೆ. ಇನ್ನು ಗಿಲ್ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ಜತೆ ಇಶಾನ್ ಕಿಶನ್ ಆರಂಭಿಕನಾಗಿ ಇನ್ನಿಂಗ್ಸ್ ಆರಂಭಿಸುವ ನಿರೀಕ್ಷೆಯಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.