ಇಂಗ್ಲೆಂಡ್ ಎದುರಿನ 2ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಒಂದು ಮಹತ್ತರ ಬದಲಾವಣೆ?

Published : Jul 13, 2022, 06:15 PM IST

ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 10 ವಿಕೆಟ್‌ಗಳ ಅಂತರದ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿದೆ. ಇದೀಗ ಎರಡನೇ ಏಕದಿನ ಪಂದ್ಯವು ಜುಲೈ 14ರಂದು ಇಲ್ಲಿನ ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ ಜರುಗಲಿದ್ದು, ಭಾರತ ಕ್ರಿಕೆಟ್ ತಂಡವು ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಇಂಗ್ಲೆಂಡ್ ಎದುರಿನ ಎರಡನೇ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ.

PREV
111
ಇಂಗ್ಲೆಂಡ್ ಎದುರಿನ 2ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಒಂದು ಮಹತ್ತರ ಬದಲಾವಣೆ?

1. ರೋಹಿತ್ ಶರ್ಮಾ

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಇಂಗ್ಲೆಂಡ್ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ನಾಯಕನಾಗಿ ಹಾಗೂ ಬ್ಯಾಟರ್‌ ಆಗಿ ಯಶಸ್ವಿಯಾಗಿದ್ದರು. ರೋಹಿತ್ ಶರ್ಮಾ 58 ಎಸೆತಗಳಲ್ಲಿ ಅಜೇಯ 76 ರನ್ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದರು.

211
Image Credit: Getty Images

2. ಶಿಖರ್ ಧವನ್

ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ಕೂಡಾ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್‌ ಶರ್ಮಾಗೆ ಉತ್ತಮ ಸಾಥ್ ನೀಡಿದ್ದರು. ಧವನ್ 54 ಎಸೆತಗಳನ್ನು ಎದುರಿಸಿ ಅಜೇಯ 31 ರನ್‌ ಗಳಿಸಿದ್ದರು. 

311
Image credit: Getty

3. ವಿರಾಟ್ ಕೊಹ್ಲಿ

ಮಾಜಿ ನಾಯಕ ವಿರಾಟ್ ಕೊಹ್ಲಿ, ತೊಡೆಸಂದಿನ ಗಾಯದ ಸಮಸ್ಯೆಯಿಂದಾಗಿ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಕಿಂಗ್‌ ಕೊಹ್ಲಿ ಎರಡನೇ ಪಂದ್ಯಕ್ಕೆ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ. ಹೀಗಾದಲ್ಲಿ ಶ್ರೇಯಸ್ ಅಯ್ಯರ್ ತಂಡದಿಂದ ಹೊರಗುಳಿಯಬೇಕಾಗಲಿದೆ.
 

411

4. ಸೂರ್ಯಕುಮಾರ್ ಯಾದವ್: 

ಭಾರತದ 360 ಖ್ಯಾತಿಯ ಪ್ರತಿಭಾನ್ವಿತ ಬ್ಯಾಟರ್‌ ಸೂರ್ಯಕುಮಾರ್ ಯಾದವ್, ಇಂಗ್ಲೆಂಡ್ ಎದುರಿನ ಮೂರನೇ ಟಿ20 ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸಿದ್ದರು. ಇದೀಗ ಏಕದಿನ ಕ್ರಿಕೆಟ್‌ನಲ್ಲೂ ಅಬ್ಬರಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ.

511
Image credit: PTI

5. ರಿಷಭ್ ಪಂತ್

ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು. ಇನ್ನು ಮೊದಲ ಟಿ20 ಪಂದ್ಯದಲ್ಲೂ ಮಿಂಚಿನ ವಿಕೆಟ್‌ ಕೀಪಿಂಗ್ ಮೂಲಕ ಮಿಂಚಿದ್ದರು.
 

611

6. ಹಾರ್ದಿಕ್ ಪಾಂಡ್ಯ

ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್‌ ಹಾರ್ದಿಕ್ ಪಾಂಡ್ಯ, ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗಬಲ್ಲ ಆಟಗಾರ. ಸದ್ಯ ಹಾರ್ದಿಕ್ ಪಾಂಡ್ಯ ಭರ್ಜರಿ ಫಾರ್ಮ್‌ನಲ್ಲಿದ್ದಾರೆ.

711

7. ರವೀಂದ್ರ ಜಡೇಜಾ

ಭಾರತ ಕ್ರಿಕೆಟ್ ತಂಡದ ಮತ್ತೋರ್ವ ಆಲ್ರೌಂಡರ್ ರವೀಂದ್ರ ಜಡೇಜಾ, ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗುವ ಸಾಮರ್ಥ್ಯ ಹೊಂದಿದ್ದಾರೆ. ಜಡೇಜಾ ಏಕದಿನ ಕ್ರಿಕೆಟ್‌ನಲ್ಲಿ ಮಿಂಚಲು ಎದುರು ನೋಡುತ್ತಿದ್ದಾರೆ.

811

8. ಮೊಹಮ್ಮದ್ ಶಮಿ

ಟೀಂ ಇಂಡಿಯಾ ಅನುಭವಿ ವೇಗಿ ಮೊಹಮ್ಮದ್ ಶಮಿ, ಮೊದಲ ಏಕದಿನ ಪಂದ್ಯದಲ್ಲಿ ಪ್ರಮುಖ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಅದೇ ಲಯವನ್ನು ಮುಂದುವರೆಸಿಕೊಂಡು ಹೋಗಲು ಶಮಿ ತುದಿಗಾಲಿನಲ್ಲಿ ನಿಂತಿದ್ದಾರೆ.
 

911

9. ಜಸ್ಪ್ರೀತ್ ಬುಮ್ರಾ

ಮಾರಕ ವೇಗಿ ಬುಮ್ರಾ, ಇಂಗ್ಲೆಂಡ್ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಕೇವಲ 19 ರನ್ ನೀಡಿ 6 ವಿಕೆಟ್ ಕಬಳಿಸಿ ವೃತ್ತಿಜೀವನದ ಶ್ರೇಷ್ಠ ಪ್ರದರ್ಶನ ತೋರಿದ್ದರು. ಏಕದಿನ ಶ್ರೇಯಾಂಕದಲ್ಲಿ ನಂ.1 ಸ್ಥಾನದಲ್ಲಿರುವ ಬುಮ್ರಾ, ಮತ್ತೆ ಇಂಗ್ಲೆಂಡ್ ತಂಡವನ್ನು ಕಾಡಲು ಸಜ್ಜಾಗಿದ್ದಾರೆ.
 

1011
Image credit: PTI

10. ಯುಜುವೇಂದ್ರ ಚಹಲ್‌

ಟೀಂ ಇಂಡಿಯಾ ಅನುಭವಿ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್, ಮೊದಲ ಪಂದ್ಯದಲ್ಲಿ ಬೌಲಿಂಗ್ ಮಾಡಲು ಅವಕಾಶ ಸಿಕ್ಕಿರಲಿಲ್ಲ. ಎರಡನೇ ಪಂದ್ಯದಲ್ಲಿ ಚಹಲ್ ಪೂರ್ಣ ತಯಾರಿಯೊಂದಿಗೆ ಕಣಕ್ಕಿಳಿಯಲು ರೆಡಿಯಾಗಿದ್ದಾರೆ.
 

1111

Prasidh Krishna

11. ಪ್ರಸಿದ್ದ್ ಕೃಷ್ಣ

ಟೀಂ ಇಂಡಿಯಾದ ನೀಳಕಾಯದ ವೇಗಿ ಪ್ರಸಿದ್ಧ್ ಕೃಷ್ಣ, ಮೊದಲ ಪಂದ್ಯದಲ್ಲಿ ಸಿಕ್ಕ ಅವಕಾಶದಲ್ಲೇ ಒಂದು ವಿಕೆಟ್ ಕಬಳಿಸಿದ್ದು, ಎರಡನೇ ಏಕದಿನ ಪಂದ್ಯದಲ್ಲೂ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

Read more Photos on
click me!

Recommended Stories