ಪುಣೆ: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಪುಣೆಯ ಎಂಸಿಎ ಮೈದಾನದಲ್ಲಿ ಇಂದು(ಮಾ.28) 1.30ಕ್ಕೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಮೊದಲ ಪಂದ್ಯವನ್ನು 66 ರನ್ ಅಂತರದಲ್ಲಿ ಜಯಿಸಿ ಸರಣಿಯಲ್ಲಿ ಶುಭಾರಂಭ ಮಾಡಿದ್ದ ಭಾರತ ತಂಡಕ್ಕೆ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಿರುಗೇಟು ನೀಡಿತ್ತು.
ಇದೀಗ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಕೆಲವು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಮೊದಲೆರಡು ಪಂದ್ಯಗಳಲ್ಲಿ ದುಬಾರಿಯಾಗಿದ್ದ ಕುಲ್ದೀಪ್ ಯಾದವ್‌ಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. 3ನೇ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ.