Ind vs NZ Series: ಕಿವೀಸ್ ಎದುರಿನ 3ನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 4 ಬದಲಾವಣೆ..?

First Published Nov 21, 2021, 3:45 PM IST

ಬೆಂಗಳೂರು: ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡಗಳ ನಡುವಿನ ಮೂರನೇ ಹಾಗೂ ಕೊನೆಯ ಟಿ20 (T20I) ಪಂದ್ಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕೋಲ್ಕತದ ಈಡನ್‌ಗಾರ್ಡನ್‌ ಮೈದಾನದಲ್ಲಿ (Eden Gardens Stadium) ಕೊನೆಯ ಟಿ20 ಪಂದ್ಯ ಜರುಗಲಿದೆ. ಈಗಾಗಲೇ ಮೊದಲೆರಡು ಟಿ20 ಪಂದ್ಯಗಳನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡಿರುವ ರೋಹಿತ್ ಶರ್ಮಾ (Rohit Sharma) ಪಡೆ, ಇದೀಗ ಸರಣಿ ಕ್ಲೀನ್‌ ಸ್ವೀಪ್‌ ಮಾಡುವತ್ತ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ (Team India) 4 ಪ್ರಮುಖ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಕಿವೀಸ್ ಎದುರಿನ ಮೂರನೇ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ.

1. ರೋಹಿತ್ ಶರ್ಮಾ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಉತ್ತಮ ಫಾರ್ಮ್‌ನಲ್ಲಿದ್ದು, ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಇದೀಗ ನಾಯಕನಾಗಿ ಸರಣಿ ಕ್ಲೀನ್‌ ಸ್ವೀಪ್‌ ಮಾಡುವತ್ತ ಚಿತ್ತ ನೆಟ್ಟಿದ್ದಾರೆ.

2. ಋತುರಾಜ್ ಗಾಯಕ್ವಾಡ್‌: ಕೆ.ಎಲ್‌. ರಾಹುಲ್‌ ಮೊದಲೆರಡು ಪಂದ್ಯಗಳನ್ನಾಡಿ ಆಕರ್ಷಕ ಬ್ಯಾಟಿಂಗ್ ನಡೆಸಿದ್ದಾರೆ. ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳುವ ಮುನ್ನ ರಾಹುಲ್‌ಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದ್ದು, ಋತುರಾಜ್‌ ಗಾಯಕ್ವಾಡ್‌ಗೆ ಅವಕಾಶ ಸಿಗುವ ಸಾಧ್ಯತೆಯಿದೆ.

3. ಸೂರ್ಯಕುಮಾರ್ ಯಾದವ್‌: ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದು, ಮತ್ತೊಮ್ಮೆ ಮೂರನೇ ಕ್ರಮಾಂಕದಲ್ಲಿ ಅಬ್ಬರಿಸುವ ಸಾಧ್ಯತೆಯಿದೆ.

4. ಶ್ರೇಯಸ್ ಅಯ್ಯರ್: ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಬೆಂಚ್ ಕಾಯಿಸಿದ್ದ ಶ್ರೇಯಸ್‌ ಅಯ್ಯರ್ ಎರಡನೇ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶವೇ ಸಿಕ್ಕಿರಲಿಲ್ಲ. ಹೀಗಾಗಿ ಮೂರನೇ ಪಂದ್ಯದಲ್ಲಾದರೂ ಫಾರ್ಮ್‌ಗೆ ಮರಳುವ ವಿಶ್ವಾಸದಲ್ಲಿದ್ದಾರೆ.

5. ಇಶಾನ್ ಕಿಶನ್‌: ರಿಷಭ್‌ ಪಂತ್ ಟೆಸ್ಟ್ ಸರಣಿಗೆ ಪಾಲ್ಗೊಳ್ಳುವ ಉದ್ದೇಶದಿಂದ ವಿಶ್ರಾಂತಿ ಪಡೆಯುವ ಸಾಧ್ಯತೆಯಿದ್ದು, ಮೊದಲೆರಡು ಪಂದ್ಯಗಳಲ್ಲಿ ಬೆಂಚ್ ಕಾಯಿಸಿದ್ದ ಇಶಾನ್ ಕಿಶನ್‌ಗೆ ಇಂದು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ದಟ್ಟವಾಗಿದೆ.

6. ವೆಂಕಟೇಶ್‌ ಅಯ್ಯರ್: ಹಾರ್ದಿಕ್‌ ಪಾಂಡ್ಯ ಅನುಪಸ್ಥಿತಿಯಲ್ಲಿ ಆಲ್ರೌಂಡರ್ ಆಟಗಾರನಾಗಿ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿರುವ ವೆಂಕಟೇಶ್‌ ಅಯ್ಯರ್ ಇನ್ನೂ ಬೌಲಿಂಗ್ ಮಾಡಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ವೆಂಕಿ ಬೌಲಿಂಗ್ ಮಾಡುವ ಸಾಧ್ಯತೆಯಿದೆ.

7. ರವಿಚಂದ್ರನ್‌ ಅಶ್ವಿನ್‌: ಟಿ20 ವಿಶ್ವಕಪ್ ಬಳಿಕ ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ಮರಳಿರುವ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಮಿಂಚಿನ ಬೌಲಿಂಗ್ ಪ್ರದರ್ಶನ ತೋರುತ್ತಿದ್ದು, ಇಂದು ಕೂಡಾ ಅದೇ ಪ್ರದರ್ಶನ ತೋರುವ ವಿಶ್ವಾಸದಲ್ಲಿದೆ.

8. ಭುವನೇಶ್ವರ್ ಕುಮಾರ್: ಟೀಂ ಇಂಡಿಯಾ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಮೊದಲೆರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದ್ದು, ಮೂರನೇ ಪಂದ್ಯದಲ್ಲೂ ಟೀಂ ಇಂಡಿಯಾ ವೇಗದ ಬೌಲಿಂಗ್ ಸಾರಥ್ಯ ವಹಿಸುವ ಸಾಧ್ಯತೆಯಿದೆ.

9. ಆವೇಶ್ ಖಾನ್‌: ಐಪಿಎಲ್‌ನಲ್ಲಿ ಮಿಂಚಿನ ಪ್ರದರ್ಶನ ತೋರಿದ್ದ ಆವೇಶ್ ಖಾನ್‌ ಇಂದು ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದ್ದು, ದೀಪಕ್ ಚಹರ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ

Harshal Patel

10. ಹರ್ಷಲ್ ಪಟೇಲ್‌: ಪಾದಾರ್ಪಣೆ ಪಂದ್ಯದಲ್ಲಿ 2 ವಿಕೆಟ್‌ ಕಬಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಬಾಚಿಕೊಂಡಿದ್ದ ಹರ್ಷಲ್ ಪಟೇಲ್‌, ಇದೀಗ ಮೂರನೇ ಪಂದ್ಯದಲ್ಲಿ ಕಮಾಲ್ ಮಾಡಲು ಕಾಯುತ್ತಿದ್ದಾರೆ.

11. ಯುಜುವೇಂದ್ರ ಚಹಲ್‌: ಅನುಭವಿ ಲೆಗ್‌ಸ್ಪಿನ್ನರ್ ಯುಜುವೇಂದ್ರ ಚಹಲ್‌ಗೆ ಕೊನೆಯ ಪಂದ್ಯದಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ. ಅಕ್ಷರ್ ಪಟೇಲ್‌ ಬದಲಿಗೆ ಚಹಲ್ ತಂಡ ಕೂಡಿಕೊಂಡರೆ ಅಚ್ಚರಿಯಿಲ್ಲ. 
 

click me!