Ind vs NZ: ಟಿ20 ಕ್ರಿಕೆಟ್‌ನಲ್ಲೂ ಶತಕ ಚಚ್ಚಿ ದಿಗ್ಗಜರ ಸಾಲು ಸೇರಿದ ಶುಭ್‌ಮನ್ ಗಿಲ್‌..!

Published : Feb 02, 2023, 10:40 AM IST

ಅಹಮದಾಬಾದ್‌(ಫೆ.02): ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟರ್‌ ಶುಭ್‌ಮನ್ ಗಿಲ್ ಸಿಡಿಲಬ್ಬರದ ಬ್ಯಾಟಿಂಗ್ ನಡೆಸುವ ಮೂಲಕ ಮಿಂಚಿದ್ದಾರೆ. ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಸ್ಪೋಟಕ ಬ್ಯಾಟಿಂಗ್ ನಡೆಸಿದ ಗಿಲ್‌, ಅಜೇಯ 126 ರನ್ ಸಿಡಿಸಿ ಮಿಂಚಿದರು. ಇದು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತ ಪರ ದಾಖಲಾದ ಗರಿಷ್ಠ ವೈಯುಕ್ತಿಕ ಸ್ಕೋರ್ ಎನಿಸಿಕೊಂಡಿತು. ಇನ್ನು ಇದೇ ಸಂದರ್ಭದಲ್ಲಿ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಭಾರತದ 5ನೇ ಬ್ಯಾಟರ್ ಎನ್ನುವ ಹಿರಿಮೆಗೆ ಗಿಲ್ ಪಾತ್ರರಾಗಿದ್ದಾರೆ.  ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಚಚ್ಚಿದ ಐವರು ಬ್ಯಾಟರ್‌ಗಳು ಯಾರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ

PREV
15
Ind vs NZ: ಟಿ20 ಕ್ರಿಕೆಟ್‌ನಲ್ಲೂ ಶತಕ ಚಚ್ಚಿ ದಿಗ್ಗಜರ ಸಾಲು ಸೇರಿದ ಶುಭ್‌ಮನ್ ಗಿಲ್‌..!

1. ಸುರೇಶ್ ರೈನಾ:

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ, ಟಿ20. ಏಕದಿನ ಹಾಗೂ ಟೆಸ್ಟ್‌ ಕ್ರಿಕೆಟ್‌ನಲ್ಲಿ ಮೂರಂಕಿ ಮೊತ್ತ ದಾಖಲಿಸಿದ ಮೊದಲ ಬ್ಯಾಟರ್ ಎನ್ನುವ ಹಿರಿಮೆಗೆ ಪಾತ್ರರಾಗಿದ್ದರು. ರೈನಾ ಟೆಸ್ಟ್‌ನಲ್ಲಿ ಒಂದು, ಏಕದಿನ ಕ್ರಿಕೆಟ್‌ನಲ್ಲಿ 5 ಹಾಗೂ ಟಿ20 ಕ್ರಿಕೆಟ್‌ನಲ್ಲಿ ಒಂದು ಶತಕ ಬಾರಿಸಿದ್ದಾರೆ.
 

25

2. ರೋಹಿತ್ ಶರ್ಮಾ:

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ತಮ್ಮ ವಿಸ್ಪೋಟಕ ಬ್ಯಾಟಿಂಗ್ ಮೂಲಕ ಮಿಂಚುತ್ತಿದ್ದು, ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಕೂಡಾ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ್ದಾರೆ. ರೋಹಿತ್ ಶರ್ಮಾ, ಟೆಸ್ಟ್‌ನಲ್ಲಿ 8, ಏಕದಿನ ಕ್ರಿಕೆಟ್‌ನಲ್ಲಿ 30 ಹಾಗೂ ಟಿ20 ಕ್ರಿಕೆಟ್‌ನಲ್ಲಿ 4 ಶತಕ ಸಿಡಿಸಿದ್ದಾರೆ.
 

35

3. ಕೆ ಎಲ್ ರಾಹುಲ್

ಕರ್ನಾಟಕದ ಮೂಲದ ಕ್ರಿಕೆಟಿಗ ಕೆ ಎಲ್ ರಾಹುಲ್ ಕೂಡಾ, ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ್ದಾರೆ. ಕೆ ಎಲ್ ರಾಹುಲ್‌ ಟೆಸ್ಟ್‌ನಲ್ಲಿ 7, ಏಕದಿನ ಕ್ರಿಕೆಟ್‌ನಲ್ಲಿ 5 ಹಾಗೂ ಟಿ20 ಕ್ರಿಕೆಟ್‌ನಲ್ಲಿ ಎರಡು ಶತಕ ಸಿಡಿಸಿದ್ದಾರೆ. 

45

4. ವಿರಾಟ್ ಕೊಹ್ಲಿ

ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಶತಕಗಳ ಶಿಖರವನ್ನೇರುತ್ತಿರುವ ವಿರಾಟ್ ಕೊಹ್ಲಿ, ಕಳೆದ ಏಷ್ಯಾಕಪ್ ಟೂರ್ನಿಯಲ್ಲಿ ಆಫ್ಘಾನಿಸ್ತಾನ ಎದುರು ಶತಕ ಸಿಡಿಸಿ, ಮೂರೂ ಮಾದರಿಯಲ್ಲೂ ಶತಕ ಚಚ್ಚಿದ ಭಾರತದ 4ನೇ ಬ್ಯಾಟರ್ ಎನಿಸಿಕೊಂಡಿದ್ದರು. ಕೊಹ್ಲಿ, ಟೆಸ್ಟ್‌ನಲ್ಲಿ 27, ಏಕದಿನ ಕ್ರಿಕೆಟ್‌ನಲ್ಲಿ 46 ಹಾಗೂ ಟಿ20 ಕ್ರಿಕೆಟ್‌ನಲ್ಲಿ ಒಂದು ಶತಕ ಸಿಡಿಸಿದ್ದಾರೆ.

55

5. ಶುಭ್‌ಮನ್ ಗಿಲ್‌: 

ಪಂಜಾಬ್ ಮೂಲದ ಪ್ರತಿಭಾನ್ವಿಯ ಬ್ಯಾಟರ್ ಶುಭ್‌ಮನ್ ಗಿಲ್, ಇದೀಗ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಭಾರತೀಯ ಬ್ಯಾಟರ್‌ಗಳ ಪೈಕಿ 5ನೇ ಆಟಗಾರ ಎನಿಸಿದ್ದಾರೆ. ಗಿಲ್‌ ಇದುವರೆಗೂ ಟೆಸ್ಟ್‌ನಲ್ಲಿ ಒಂದು, ಏಕದಿನ ಕ್ರಿಕೆಟ್‌ನಲ್ಲಿ 5 ಹಾಗೂ ಟಿ20 ಕ್ರಿಕೆಟ್‌ನಲ್ಲಿ ಒಂದು ಶತಕ ಸಿಡಿಸಿದ್ದಾರೆ.
 

Read more Photos on
click me!

Recommended Stories