Ind vs NZ 3rd ODI: ಮೂರನೇ ಪಂದ್ಯಕ್ಕೆ ಸಂಜು ಸ್ಯಾಮ್ಸನ್‌ಗೆ ಸಿಗುತ್ತಾ ಸ್ಥಾನ?

First Published Nov 29, 2022, 4:04 PM IST

ಕ್ರೈಸ್ಟ್‌ಚರ್ಚ್‌: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಪಂದ್ಯವು ನವೆಂಬರ್ 30ರಂದು ಆರಂಭವಾಗಲಿದ್ದು, ಟೀಂ ಇಂಡಿಯಾ ಪಾಲಿಗೆ ಸರಣಿ ಸಮಬಲ ಸಾಧಿಸುವ ದೃಷ್ಟಿಯಿಂದ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದೆ. ಮೊದಲ ಪಂದ್ಯ ಸೋತಿರುವ ಟೀಂ ಇಂಡಿಯಾ, ಸರಣಿ ಸಮಬಲ ಸಾಧಿಸಬೇಕಿದ್ದರೇ ಕೊನೆಯ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದೆ. ಹೀಗಾಗಿ ಟೀಂ ಇಂಡಿಯಾ ಕೆಲ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.
 

1. ಶಿಖರ್ ಧವನ್:

ಟೀಂ ಇಂಡಿಯಾ ನಾಯಕ ಧವನ್, ಮೊದಲ ಪಂದ್ಯದಲ್ಲಿ ಆಕರ್ಷಕ 72 ರನ್ ಚಚ್ಚಿದ್ದರು, ಆದರೆ ಎರಡನೇ ಪಂದ್ಯದಲ್ಲಿ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದರು. ಇದೀಗ ಮೂರನೇ ಪಂದ್ಯದಲ್ಲಿ ಉತ್ತಮ ಆರಂಭ ಒದಗಿಸಿಕೊಡಲು ಎದುರು ನೋಡುತ್ತಿದ್ದಾರೆ.
 

2. ಶುಭ್‌ಮನ್‌ ಗಿಲ್:

ಮೊದಲೆರಡು ಏಕದಿನ ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆದಿರುವ ಗಿಲ್‌, ಇದೀಗ ಮೂರನೇ ಪಂದ್ಯದಲ್ಲೂ ಭರ್ಜರಿ ಬ್ಯಾಟಿಂಗ್ ನಡೆಸುವ ವಿಶ್ವಾಸ ಮೂಡಿಸಿದ್ದಾರೆ. ಗಿಲ್ ಆರಂಭಿಕನಾಗಿ ಭರವಸೆ ಮೂಡಿಸಿದ್ದಾರೆ.
 

3. ಸೂರ್ಯಕುಮಾರ್ ಯಾದವ್:

ಟಿ20 ಸರಣಿಯಲ್ಲಿ ಆಕರ್ಷಕ ಶತಕ ಚಚ್ಚಿದ್ದ ಸೂರ್ಯಕುಮಾರ್, ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬೆನ್ನೆಲುಬು ಎನಿಸಿಕೊಂಡಿದ್ದಾರೆ. ಎರಡನೇ ಏಕದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅಜೇಯ 45 ರನ್ ಸಿಡಿಸಿದ್ದರು.
 

4. ಶ್ರೇಯಸ್ ಅಯ್ಯರ್:

ಮೊದಲ ಏಕದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್, ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಮಿಂಚಿದ್ದರು. ಇದೀಗ ಅದೇ ಲಯ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.

5. ರಿಷಭ್ ಪಂತ್:

ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಬ್ಯಾಟಿಂಗ್ ವೈಫಲ್ಯ ಮುಂದುವರೆದಿದ್ದು, ಕಿವೀಸ್ ಎದುರಿನ ಮೂರನೇ ಏಕದಿನ ಪಂದ್ಯದಲ್ಲಿ ಉಪನಾಯಕ ಪಂತ್‌ಗೆ ಮತ್ತೊಂದು ಅವಕಾಶ ದೊರೆಯುವ ಸಾಧ್ಯತೆಯಿದೆ.

6. ಸಂಜು ಸ್ಯಾಮ್ಸನ್:

ವಿಕೆಟ್ ಕೀಪರ್ ಬ್ಯಾಟರ್‌ ಸಂಜು ಸ್ಯಾಮ್ಸನ್ ಮೊದಲ ಪಂದ್ಯದಲ್ಲಿ 36 ರನ್ ಗಳಿಸಿದ್ದರು. ಆದರೆ ಎರಡನೇ ಪಂದ್ಯದಿಂದ ಹೊರಬಿದ್ದಿದ್ದರು. ಇದೀಗ ಮೂರನೇ ಪಂದ್ಯದಲ್ಲಿ ಸಂಜು ಮತ್ತೆ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.

7. ವಾಷಿಂಗ್ಟನ್ ಸುಂದರ್:

ಆಲ್ರೌಂಡರ್ ವಾಷಿಂಗ್ಟನ್ ಸುಂದರ್, ಮೊದಲ ಏಕದಿನ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ಮಿಂಚಿದ್ದರು. ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಬೇಕಿದ್ದರೆ ಸುಂದರ್ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮಿಂಚಬೇಕಿದೆ.
 

8. ದೀಪಕ್ ಚಹರ್:

ಟೀಂ ಇಂಡಿಯಾ ಸ್ವಿಂಗ್ ಸ್ಪೆಷಲಿಸ್ಟ್ ದೀಪಕ್ ಚಹರ್, ಎರಡನೇ ಪಂದ್ಯದಲ್ಲಿ ತಂಡ ಕೂಡಿಕೊಂಡಿದ್ದರೂ ಸಹಾ, ಬೌಲಿಂಗ್‌ ಮಾಡಲು ಮಳೆ ಅಡ್ಡಿಪಡಿಸಿತ್ತು. ಮೂರನೇ ಪಂದ್ಯದಲ್ಲೂ ದೀಪಕ್ ಚಹರ್ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
 

9.  ಉಮ್ರಾನ್ ಮಲಿಕ್:

ಜಮ್ಮು ಕಾಶ್ಮೀರ ಮೂಲದ ಮಾರಕ ವೇಗಿ ಉಮ್ರಾನ್ ಮಲಿಕ್, ಪಾದಾರ್ಪಣೆ ಪಂದ್ಯದಲ್ಲೇ ಎರಡು ವಿಕೆಟ್ ಕಬಳಿಸಿ ಗಮನ ಸೆಳೆದಿದ್ದರು. ಇದೀಗ ಮೂರನೇ ಏಕದಿನ ಪಂದ್ಯದಲ್ಲೂ ಮಿಂಚುವ ಸಾಧ್ಯತೆಯಿದೆ.
 

10. ಆರ್ಶದೀಪ್ ಸಿಂಗ್:

ಪ್ರತಿಭಾನ್ವಿತ ಎಡಗೈ ವೇಗಿ ಆರ್ಶದೀಪ್ ಸಿಂಗ್ ಮೊದಲ ಏಕದಿನ ಪಂದ್ಯದಲ್ಲಿ ಕೊಂಚ ದುಬಾರಿಯಾಗಿದ್ದರು. ಹೀಗಿದ್ದೂ ಟೀಂ ಮ್ಯಾನೇಜ್‌ಮೆಂಟ್‌ ಮತ್ತೊಮ್ಮೆ ಆರ್ಶದೀಪ್‌ಗೆ ಮಣೆಹಾಕುವ ಸಾಧ್ಯತೆಯಿದೆ.

11. ಕುಲ್ದೀಪ್ ಯಾದವ್:

ಅನುಭವಿ ಲೆಗ್‌ ಸ್ಪಿನ್ನರ್ ಕುಲ್ದೀಪ್‌ ಯಾದವ್‌, ಕೊನೆಯ ಏಕದಿನ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಹೀಗಾದಲ್ಲಿ ಚಹಲ್‌ಗೆ ವಿಶ್ರಾಂತಿ ಸಿಗುವ ಸಾಧ್ಯತೆಯಿದೆ.
 

click me!