ದಕ್ಷಿಣ ಆಫ್ರಿಕಾ ಎದುರಿನ ಎರಡನೇ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ..!

First Published Oct 9, 2022, 12:40 PM IST

ರಾಂಚಿ(ಸೆ.09): ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ ಸೋಲನನ್ನುಭವಿಸಿರುವ ಟೀಂ ಇಂಡಿಯಾ, ಸರಣಿ ಗೆಲ್ಲುವ ಆಸೆ ಜೀವಂತವಾಗಿರಿಸಿಕೊಳ್ಳಬೇಕಿದ್ದರೆ, ಈ ಪಂದ್ಯವನ್ನು ಗೆಲ್ಲಲೇಬೇಕಾದರೆ ಈ ಪಂದ್ಯವನ್ನು ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಿದೆ. ಎರಡನೇ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ
 

1. ಶಿಖರ್ ಧವನ್:

ಟೀಂ ಇಂಡಿಯಾ ನಾಯಕ ಶಿಖರ್ ಧವನ್, ಮೊದಲ ಪಂದ್ಯದಲ್ಲಿ ಕೇವಲ 4 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಇದೀಗ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಧವನ್ ಉತ್ತಮ ಆರಂಭ ಒದಗಿಸಿಕೊಡಬೇಕಿದೆ.
 

2. ಶುಭ್‌ಮನ್‌ ಗಿಲ್‌:

ಬಲಗೈ ಬ್ಯಾಟರ್ ಶುಭ್‌ಮನ್ ಗಿಲ್ ಕೂಡಾ ಮೊದಲ ಪಂದ್ಯದಲ್ಲಿ ದೊಡ್ಡ ಮೊತ್ತ ಗಳಿಸಲು ವಿಫಲವಾಗಿದ್ದರು. ಧವನ್ ಜತೆ ಗಿಲ್ ಉತ್ತಮ ಆರಂಭ ಒದಗಿಸಿಕೊಡಲು ಎದುರು ನೋಡುತ್ತಿದ್ದಾರೆ.

Latest Videos


3. ಋತುರಾಜ್ ಗಾಯಕ್ವಾಡ್‌:

ವಿರಾಟ್ ಕೊಹ್ಲಿಅನುಪಸ್ಥಿತಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಗಾಯಕ್ವಾಡ್‌, 42 ಎಸೆತಗಳಲ್ಲಿ ಕೇವಲ 19 ರನ್‌ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇದೀಗ ಗಾಯಕ್ವಾಡ್‌ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ.
 

4. ಶ್ರೇಯಸ್ ಅಯ್ಯರ್:

ಮುಂಬೈ ಮೂಲದ ಬ್ಯಾಟರ್‌ ಶ್ರೇಯಸ್‌ ಅಯ್ಯರ್, ಮೊದಲ ಪಂದ್ಯದಲ್ಲಿ ಕೇವಲ 37 ಎಸೆತಗಳಲ್ಲಿ 50 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಈಗ ಅಯ್ಯರ್ ಮತ್ತೊಮ್ಮೆ ಮಿಂಚುವ ವಿಶ್ವಾಸವಿದೆ.

5. ಇಶಾನ್ ಕಿಶನ್‌:

ಎಡಗೈ ಸ್ಪೋಟಕ ಬ್ಯಾಟರ್, ಸಿಕ್ಕ ಅವಕಾಶವನ್ನು ಮೊದಲ ಪಂದ್ಯದಲ್ಲಿ ಉಪಯೋಗಿಸಿಕೊಳ್ಳಲು ವಿಫಲವಾಗಿದ್ದರು. ಹೀಗಿದ್ದೂ ಕಿಶನ್‌ಗೆ ಮತ್ತೊಂದು ಅವಕಾಶ ದೊರೆಯುವ ಸಾಧ್ಯತೆಯಿದೆ.

6. ಸಂಜು ಸ್ಯಾಮ್ಸನ್‌:

ಮೊದಲ ಏಕದಿನ ಪಂದ್ಯದಲ್ಲಿ ಸಂಜು ಕೇವಲ 63 ಎಸೆತಗಳಲ್ಲಿ ಅಜೇಯ 86 ರನ್ ಸಿಡಿಸುವ ಮೂಲಕ ಮಿಂಚಿದ್ದರು. ಸಂಜು ಅದೇ ಲಯವನ್ನು ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.

7. ಶಾರ್ದೂಲ್ ಠಾಕೂರ್:

ಬಲಗೈ ಆಲ್ರೌಂಡರ್‌ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು.
 

8. ಕುಲ್ದೀಪ್ ಯಾದವ್:

ಚೈನಾಮನ್ ಸ್ಪಿನ್ನರ್ ಖ್ಯಾತಿಯ ಕುಲ್ದೀಪ್ ಯಾದವ್, ಮೊದಲ ಪಂದ್ಯದಲ್ಲಿ ಶಿಸ್ತುಬದ್ದ ದಾಳಿಯ ಮೂಲಕ ಗಮನ ಸೆಳೆದಿದ್ದರು. ಎರಡನೇ ಪಂದ್ಯದಲ್ಲಿ ಮಿಂಚುವ ವಿಶ್ವಾಸದಲ್ಲಿದ್ದಾರೆ. 

9. ರವಿ ಬಿಷ್ಣೋಯಿ:

ಯುವ ಲೆಗ್‌ ಸ್ಪಿನ್ನರ್ ಬಿಷ್ಣೋಯಿ ಮೊದಲ ಪಂದ್ಯದಲ್ಲಿ ದುಬಾರಿಯಾಗಿದ್ದರು. ಆದರೆ ಎರಡನೇ ಪಂದ್ಯದಲ್ಲಿ ಕಮ್‌ಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದಾರೆ.
 

10. ಮೊಹಮ್ಮದ್ ಸಿರಾಜ್:

ಮೊದಲ ಏಕದಿನ ಪಂದ್ಯದಲ್ಲಿ 8 ಓವರ್‌ ಬೌಲಿಂಗ್‌ ಮಾಡಿ 49 ರನ್‌ ನೀಡಿದ್ದರು, ಆದರೆ ಯಾವುದೇ ವಿಕೆಟ್ ಕಬಳಿಸಲು ವಿಫಲವಾಗಿದ್ದರು. ಎರಡನೇ ಪಂದ್ಯದಲ್ಲಿ ಮಿಂಚುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

11. ಆವೇಶ್ ಖಾನ್:

ಬಲಗೈ ವೇಗದ ಬೌಲರ್‌ ಆವೇಶ್ ಖಾನ್‌, ಕೂಡಾ ಮೊದಲ ಪಂದ್ಯದಲ್ಲಿ ವಿಕೆಟ್ ಕಬಳಿಸಲು ವಿಫಲವಾಗಿದ್ದರು. ಆದರೆ ಎರಡನೇ ಏಕದಿನ ಪಂದ್ಯದಲ್ಲಿ ಫಾರ್ಮ್‌ಗೆ ಮರಳಲು ಹಾತೊರೆಯುತ್ತಿದ್ದಾರೆ.
 

click me!