1. ಶಿಖರ್ ಧವನ್: ಟಿ20 ವಿಶ್ವಕಪ್ ಹಾಗೂ ಕಿವೀಸ್ ಎದುರಿನ ಸರಣಿಯಿಂದ ಹೊರಬಿದ್ದಿದ್ದ ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ಇದೀಗ ತಂಡದಲ್ಲಿ ಸ್ಥಾನ ಪಡೆದಿದ್ದು, ಆರಂಭಿಕನಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನಿಸಿದೆ.
2. ಕೆ.ಎಲ್. ರಾಹುಲ್: ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ನಾಯಕ ಸ್ಥಾನ ವಹಿಸಿಕೊಂಡಿರುವ ರಾಹುಲ್, ತಾವು ಅಗ್ರಕ್ರಮಾಂಕದಲ್ಲಿ ಕಣಕ್ಕಿಳಿಯುವುದಾಗಿ ಖಚಿತಪಡಿಸಿದ್ದಾರೆ. ಧವನ್ ಜತೆ ಉತ್ತಮ ಆರಂಭ ಒದಗಿಸಿಕೊಡಲು ಎದುರು ನೋಡುತ್ತಿದ್ದಾರೆ.
3. ವಿರಾಟ್ ಕೊಹ್ಲಿ: ಕಳೆದ ಎರಡು ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಬಾರಿಸಲು ವಿಫಲವಾಗಿದ್ದು, ಇದೀಗ ಹರಿಣಗಳ ನಾಡಿನಲ್ಲಿ ಸೀಮಿತ ಓವರ್‌ಗಳ ಸರಣಿಯಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ.
4. ಶ್ರೇಯಸ್ ಅಯ್ಯರ್: ಕಿವೀಸ್ ಎದುರಿನ ಟೆಸ್ಟ್ ಸರಣಿಯಲ್ಲಿ ಆಕರ್ಷಕ ಶತಕ ಬಾರಿಸಿದ್ದ ಅಯ್ಯರ್, ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್ ಸರಣಿಯಲ್ಲಿ ಬೆಂಚ್ ಕಾಯಿಸಿದ್ದರು. ಇದೀಗ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲು ಅಯ್ಯರ್ ಸಜ್ಜಾಗಿದ್ದಾರೆ.
Rishabh Pant
5. ರಿಷಭ್ ಪಂತ್: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಸ್ಪೋಟಕ ಬ್ಯಾಟಿಂಗ್ ಮೂಲಕ ತಂಡಕ್ಕೆ ಆಸರೆಯಾಗಬಲ್ಲ ಕ್ಷಮತೆ ಹೊಂದಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಪಂತ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಬೇಕಿದೆ.
6. ವೆಂಕಟೇಶ್ ಅಯ್ಯರ್: ಐಪಿಎಲ್‌ನಲ್ಲಿ ಆಲ್ರೌಂಡ್ ಪ್ರದರ್ಶನದ ಮೂಲಕ ಗಮನ ಸೆಳೆದು ಕಿವೀಸ್ ಎದುರಿನ ಟಿ20 ಸರಣಿಯಲ್ಲಿ ಟೀಂ ಇಂಡಿಯಾಗೆ ಎಂಟ್ರಿಕೊಟ್ಟಿದ್ದ ಅಯ್ಯರ್, ಇದೀಗ ಏಕದಿನ ಕ್ರಿಕೆಟ್‌ನಲ್ಲಿ ಫಿನೀಷರ್ ಪಾತ್ರ ನಿಭಾಯಿಸುವ ಸಾಧ್ಯತೆಯಿದೆ.
7. ಶಾರ್ದೂಲ್ ಠಾಕೂರ್: ಟೀಂ ಇಂಡಿಯಾ ಮಧ್ಯಮ ವೇಗದ ಬೌಲರ್ ಶಾರ್ದೂಲ್ ಠಾಕೂರ್ ಬೌಲಿಂಗ್ ಮಾತ್ರವಲ್ಲದೇ ಬ್ಯಾಟಿಂಗ್‌ನಲ್ಲೂ ತಂಡಕ್ಕೆ ಆಸರೆಯಾಗಬಲ್ಲ ಸಾಮರ್ಥ್ಯ ಹೊಂದಿದ್ದಾರೆ.
8. ರವಿಚಂದ್ರನ್ ಅಶ್ವಿನ್: ಅಶ್ವಿನ್ ಬರೋಬ್ಬರಿ 4 ವರ್ಷಗಳ ಬಳಿಕ ಇದೀಗ ಏಕದಿನ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಟೆಸ್ಟ್‌ನಲ್ಲಿ ವಿಕೆಟ್ ಕಬಳಿಸಲು ವಿಫಲರಾಗಿದ್ದ ಅಶ್ವಿನ್, ಏಕದಿನ ಕ್ರಿಕೆಟ್‌ನಲ್ಲಿ ಮಿಂಚಲು ಎದುರು ನೋಡುತ್ತಿದ್ದಾರೆ.
9. ಭುವನೇಶ್ವರ್ ಕುಮಾರ್: ಟೀಂ ಇಂಡಿಯಾ ಸ್ವಿಂಗ್ ಸ್ಪೆಷಲಿಸ್ಟ್ ಭುವನೇಶ್ವರ್ ಕುಮಾರ್, ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಡೆತ್ ಓವರ್‌ನಲ್ಲಿ ಪರಿಣಾಮಕಾರಿ ದಾಳಿ ನಡೆಸುವ ಸಾಮರ್ಥ್ಯ ಹೊಂದಿದ್ದಾರೆ.
10. ಜಸ್ಪ್ರೀತ್ ಬುಮ್ರಾ: ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ತಮ್ಮ ಕರಾರುವಕ್ಕಾದ ಬೌಲಿಂಗ್ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ತಬ್ಬಿಬ್ಬುಗೊಳಿಸುವ ಕ್ಷಮತೆ ಹೊಂದಿದ್ದು, ಹರಿಣಗಳ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.
11. ಯುಜುವೇಂದ್ರ ಚಹಲ್: ಕಳಪೆ ಫಾರ್ಮ್ ಮೂಲಕ ತಂಡದಿಂದ ಹೊರಬಿದ್ದು ಬಳಿಕ ಐಪಿಎಲ್‌ನಲ್ಲಿ ಮಿಂಚಿ ತಂಡಕ್ಕೆ ಕಮ್‌ಬ್ಯಾಕ್ ಮಾಡಿರುವ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್, ಇದೀಗ ಸೀಮಿತ ಓವರ್‌ಗಳ ಸರಣಿಯಲ್ಲಿ ಮಿಂಚಲು ರೆಡಿಯಾಗಿದ್ದಾರೆ.