Ind vs SA, Boxing Day Test: ಹೀಗಿದೆ ನೋಡಿ ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ

Suvarna News   | Asianet News
Published : Dec 26, 2021, 11:16 AM IST

ಬೆಂಗಳೂರು: ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ತಂಡಗಳ ನಡುವಿನ ಮೂರು ಪಂದ್ಯಗಳ ಫ್ರೀಡಂ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಡಿಸೆಂಬರ್ 26ರಿಂದ ಸೆಂಚೂರಿಯನ್ ಸೂಪರ್ ಸ್ಪೋರ್ಟ್‌ ಪಾರ್ಕ್‌ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಹರಿಣಗಳ ನಾಡಿನಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆಲುವಿನ ಕನವರಿಕೆಯಲ್ಲಿರುವ ಟೀಂ ಇಂಡಿಯಾ(Team India), ಮೊದಲ ಟೆಸ್ಟ್ ಪಂದ್ಯದಲ್ಲಿ ಈ ಕೆಳಕಂಡ ಆಡುವ ಹನ್ನೊಂದರ ಬಳಗದಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಮೊದಲ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ ಹೀಗಿದೆ ನೋಡಿ.  

PREV
111
Ind vs SA, Boxing Day Test: ಹೀಗಿದೆ ನೋಡಿ ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ
1. ಕೆ.ಎಲ್‌. ರಾಹುಲ್‌

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಭಾರತ ಟೆಸ್ಟ್ ತಂಡದ ಉಪನಾಯಕರಾಗಿ ಆಯ್ಕೆಯಾಗಿರುವ ರಾಹುಲ್‌, ಇತ್ತೀಚೆಗಷ್ಟೇ ಇಂಗ್ಲೆಂಡ್ ಪ್ರವಾಸದಲ್ಲಿ ತೋರಿದಂತಹ ಪ್ರದರ್ಶನವನ್ನು ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.

211
2. ಮಯಾಂಕ್ ಅಗರ್‌ವಾಲ್

ಕರ್ನಾಟಕದ ಮತ್ತೋರ್ವ ಆರಂಭಿಕ ಬ್ಯಾಟರ್‌ ಅಗರ್‌ವಾಲ್‌, ಇತ್ತೀಚೆಗಷ್ಟೇ ನ್ಯೂಜಿಲೆಂಡ್ ವಿರುದ್ದದ ತವರಿನ ಟೆಸ್ಟ್ ಸರಣಿಯಲ್ಲಿ ಆಕರ್ಷಕ ಶತಕ ಬಾರಿಸಿ ಫಾರ್ಮ್‌ಗೆ ಮರಳಿದ್ದು, ಹರಿಣಗಳ ನಾಡಿನ ಪ್ರವಾಸವನ್ನು ಸ್ಮರಣೀಯವಾಗಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.
 

311
3. ಚೇತೇಶ್ವರ್ ಪೂಜಾರ

ಭಾರತ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ, ಇತ್ತೀಚೆಗಿನ ದಿನಗಳಲ್ಲಿ ರನ್‌ ಭರವನ್ನು ಅನುಭವಿಸುತ್ತಿದ್ದು, ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಉತ್ತಮ ಪ್ರದರ್ಶನ ತೋರಲು ರೆಡಿಯಾಗಿದ್ದಾರೆ.
 

411
4. ವಿರಾಟ್ ಕೊಹ್ಲಿ

ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಕಳೆದ ಎರಡು ವರ್ಷಗಳಿಂದ ಟೆಸ್ಟ್ ಶತಕವನ್ನು ಬಾರಿಸಿಲ್ಲ, ಇದೀಗ ವರ್ಷಾಂತ್ಯದ ಕೊನೆಯ ಟೆಸ್ಟ್‌ನಲ್ಲಿ ಶತಕ ಸಿಡಿಸಿ, 2021ಕ್ಕೆ ಗುಡ್‌ ಬೈ ಹೇಳಲು ಎದುರು ನೋಡುತ್ತಿದ್ದಾರೆ.

511
5. ಶ್ರೇಯಸ್ ಅಯ್ಯರ್

ಕಿವೀಸ್ ಎದುರಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಅನುಪಸ್ಥಿತಿಯಲ್ಲಿ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಿ, ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ್ದ ಶ್ರೇಯಸ್‌ ಅಯ್ಯರ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ. ಹೀಗಾದಲ್ಲಿ ಅಜಿಂಕ್ಯ ರಹಾನೆ ಬೆಂಚ್ ಕಾಯಿಸಬೇಕಾಗುತ್ತದೆ.

611
6. ರಿಷಭ್ ಪಂತ್

ವಿಕೆಟ್‌ ಕೀಪರ್‌ ಬ್ಯಾಟರ್‌ ರಿಷಭ್ ಪಂತ್, ತವರಿನಲ್ಲಿ ನಡೆದ ಕಿವೀಸ್ ಎದುರಿನ ಟೆಸ್ಟ್‌ ಸರಣಿಯಿಂದ ವಿಶ್ರಾಂತಿ ಬಯಸಿ ತಂಡದಿಂದ ಹೊರಗುಳಿದಿದ್ದರು. ಇದೀಗ ಹರಿಣಗಳ ನಾಡಿನಲ್ಲಿ ಅಬ್ಬರಿಸಲು ಪಂತ್ ಸಿದ್ದತೆ ನಡೆಸಿದ್ದಾರೆ.
 

711
7. ಶಾರ್ದೂಲ್ ಠಾಕೂರ್

ಶಾರ್ದೂಲ್ ಠಾಕೂರ್ ತಮ್ಮ ಕರಾರುವಕ್ಕಾದ ಮಧ್ಯಮ ವೇಗದ ಬೌಲಿಂಗ್ ದಾಳಿ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಕಂಗೆಡಿಸುವ ಕ್ಷಮತೆ ಹೊಂದಿದ್ದಾರೆ. ಇನ್ನು ಉಪಯುಕ್ತ ಸಂದರ್ಭದಲ್ಲಿ ಬ್ಯಾಟಿಂಗ್‌ನಲ್ಲೂ ರನ್ ಕಾಣಿಕೆ ನೀಡುವ ಸಾಮರ್ಥ್ಯ ಠಾಕೂರ್‌ಗಿದೆ.

811
8. ರವಿಚಂದ್ರನ್ ಅಶ್ವಿನ್

ಟೀಂ ಇಂಡಿಯಾ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್‌, ಭರ್ಜರಿ ಫಾರ್ಮ್‌ನಲ್ಲಿದ್ದು, ಐಸಿಸಿ ಬೌಲಿಂಗ್ ಹಾಗೂ ಆಲ್ರೌಂಡರ್‌ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇದೀಗ ದಕ್ಷಿಣ ಆಫ್ರಿಕಾ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.

911
9 ಮೊಹಮ್ಮದ್ ಶಮಿ

ಅನುಭವಿ ವೇಗದ ಬೌಲರ್ ಶಮಿ ಕೂಡಾ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು. ಇದೀಗ ವೇಗಿಗಳ ಸ್ವರ್ಗ ಎನಿಸಿರುವ ಸೆಂಚೂರಿಯನ್‌ನಲ್ಲಿ ಮಾರಕ ದಾಳಿ ನಡೆಸುವ ಲೆಕ್ಕಾಚಾರ ಹಾಕಿಕೊಂಡಿದ್ದಾರೆ.

1011
10. ಮೊಹಮ್ಮದ್ ಸಿರಾಜ್‌

ಭಾರತ ತಂಡದ ಪ್ರತಿಭಾನ್ವಿತ ವೇಗಿ ಮೊಹಮ್ಮದ್ ಸಿರಾಜ್, ಸಿಕ್ಕ ಅವಕಾಶವನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದು, ಅನುಭವಿ ವೇಗಿ ಇಶಾಂತ್ ಶರ್ಮಾ ಅವರನ್ನು ಹಿಂದಿಕ್ಕಿ ಸಿರಾಜ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ.

1111
11. ಜಸ್ಪ್ರೀತ್ ಬುಮ್ರಾ

ಭಾರತದ ಯಾರ್ಕರ್‌ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ, ಹರಿಣಗಳ ನಾಡಿನ ಸರಣಿಗೆ ಸಂಪೂರ್ಣ ಫಿಟ್‌ ಆಗಿದ್ದು, ವೇಗದ ಪಿಚ್‌ನಲ್ಲಿ ರನ್‌ಗಳ ಭೇಟೆಗೆ ಸಜ್ಜಾಗಿದ್ದಾರೆ. 2018ರಲ್ಲಿ ಬುಮ್ರಾ ದಕ್ಷಿಣ ಆಫ್ರಿಕಾ ವಿರುದ್ದವೇ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು.

Read more Photos on
click me!

Recommended Stories