1. ಕೆ.ಎಲ್. ರಾಹುಲ್
ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಹಾಗೂ ಹಂಗಾಮಿ ಟೆಸ್ಟ್ ಉಪನಾಯಕ ಕೆ.ಎಲ್. ರಾಹುಲ್ ಮೊದಲ ಟೆಸ್ಟ್‌ನಲ್ಲಿ ಶತಕ ಹಾಗೂ ಎರಡನೇ ಟೆಸ್ಟ್‌ನಲ್ಲಿ ಅರ್ಧಶತಕ ಬಾರಿಸಿದ್ದರು. ಇದೀಗ ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಮಿಂಚಲು ರೆಡಿಯಾಗಿದ್ದಾರೆ.
2. ಮಯಾಂಕ್ ಅಗರ್‌ವಾಲ್:
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದೊಳಗೆ ಸ್ಥಾನಗಿಟ್ಟಿಸಿಕೊಂಡಿರುವ ಮತ್ತೋರ್ವ ಕನ್ನಡಿಗ ಮಯಾಂಕ್, ತಮಗೆ ದೊರೆತ ಆರಂಭವನ್ನು ದೊಡ್ಡ ಮೊತ್ತವನ್ನಾಗಿ ಪರಿವರ್ತಿಸಲು ವಿಫಲವಾಗಿದ್ದು, ಹರಿಣಗಳ ನಾಡಿನಲ್ಲಿ ಚೊಚ್ಚಲ ಟೆಸ್ಟ್ ಶತಕದ ಕನವರಿಕೆಯಲ್ಲಿದ್ದಾರೆ.
3. ಚೇತೇಶ್ವರ್ ಪೂಜಾರ:
ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಜೋಹಾನ್ಸ್‌ಬರ್ಗ್ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸಿ ಫಾರ್ಮ್‌ಗೆ ಮರಳುವಲ್ಲಿ ಯಶಸ್ವಯಾಗಿದ್ದರು. ಅನುಭವಿ ಆಟಗಾರ ಕೇಪ್‌ಟೌನ್ ಟೆಸ್ಟ್‌ನಲ್ಲೂ ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಪಕ್ಕಾ.
4. ವಿರಾಟ್ ಕೊಹ್ಲಿ:
ಬೆನ್ನು ನೋವಿನ ಸಮಸ್ಯೆಯಿಂದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ನಾಯಕ ವಿರಾಟ್ ಕೊಹ್ಲಿ ಸಂಪೂರ್ಣ ಫಿಟ್ ಆಗಿದ್ದು, ಕೇಪ್‌ಟೌನ್ ಟೆಸ್ಟ್‌ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಹೀಗಾಗಿ ಹನುಮ ವಿಹಾರಿ ತಂಡದಿಂದ ಹೊರಬೀಳುವ ಸಾಧ್ಯತೆಯಿದೆ. ದಕ್ಷಿಣ ಆಫ್ರಿಕಾ ಪ್ರವಾಸದ ಕೊನೆಯ ಟೆಸ್ಟ್‌ನಲ್ಲಾದರೂ ಕೊಹ್ಲಿ ಶತಕ ಬಾರಿಸುತ್ತಾರಾ ಕಾದು ನೋಡಬೇಕಿದೆ.
5. ಅಜಿಂಕ್ಯ ರಹಾನೆ:
ಟೀಂ ಇಂಡಿಯಾ ಮತ್ತೋರ್ವ ಅನುಭವಿ ಬ್ಯಾಟರ್ ರಹಾನೆ ಕೂಡಾ ಕಳೆದ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಆಕರ್ಷಕ ಅರ್ಧಶತಕ ಶತಕ ಸಿಡಿಸಿ ತಂಡಕ್ಕೆ ನೆರವಾಗಿದ್ದರು. ಹೀಗಾಗಿ ಕೊನೆಯ ಟೆಸ್ಟ್‌ನಲ್ಲೂ ರಹಾನೆ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
6. ರಿಷಭ್ ಪಂತ್:
ವಿಕೆಟ್ ಕೀಪರ್ ಬ್ಯಾಟರ್ ಪಂತ್ ಕಳೆದ ಪಂದ್ಯದಲ್ಲಿ ಬೇಜವಾಬ್ದಾರಿಯುತ ಬ್ಯಾಟಿಂಗ್ ಮೂಲಕ ಟೀಕೆಗೆ ಗುರಿಯಾಗಿದ್ದರು. ಹೀಗಿದ್ದೂ ಮಹತ್ವದ ಟೆಸ್ಟ್ ಪಂದ್ಯದಲ್ಲಿ ಆಕ್ರಮಣಕಾರಿ ಬ್ಯಾಟರ್‌ಗೆ ಟೀಂ ಇಂಡಿಯಾ ಮಣೆಹಾಕುವ ಸಾಧ್ಯತೆಯಿದೆ.
7. ರವಿಚಂದ್ರನ್ ಅಶ್ವಿನ್:
ದಕ್ಷಿಣ ಆಫ್ರಿಕಾ ಪ್ರವಾಸ ಅಶ್ವಿನ್ ಪಾಲಿಗೆ ಇಲ್ಲಿಯವರೆಗೆ ಬೌಲಿಂಗ್‌ನಲ್ಲಿ ಫಲಪ್ರದವಾಗಿಲ್ಲ. ಆದರೆ ಬ್ಯಾಟಿಂಗ್‌ನಲ್ಲಿ ಉಪಯುಕ್ತ ಜತೆಯಾಟ ನಿಭಾಯಿಸುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ. ಹೀಗಾಗಿ ಅಶ್ವಿನ್ ಕೊನೆಯ ಟೆಸ್ಟ್‌ನಲ್ಲೂ ಕಣಕ್ಕಿಳಿಯುವುದು ಬಹುತೇಕ ಖಚಿತ.
8. ಶಾರ್ದೂಲ್ ಠಾಕೂರ್:
ಕಳೆದ ಟೆಸ್ಟ್ ಪಂದ್ಯದಲ್ಲಿ ಮಾರಕ ಬೌಲಿಂಗ್ ಮೂಲಕ ಹರಿಣಗಳ ಪಡೆಯನ್ನು ತಬ್ಬಿಬ್ಬುಗೊಳಿಸಿದ್ದ ಶಾರ್ದೂಲ್ ಠಾಕೂರ್, ಬ್ಯಾಟಿಂಗ್‌ನಲ್ಲೂ ತಂಡಕ್ಕೆ ಆಸರೆಯಾಗಬಲ್ಲರು. ಹೀಗಾಗಿ ಠಾಕೂರ್ ಆಲ್ರೌಂಡರ್ ಪಾತ್ರ ನಿಭಾಯಿಸಲಿದ್ದಾರೆ.
9. ಮೊಹಮ್ಮದ್ ಶಮಿ:
ಟೀಂ ಇಂಡಿಯಾ ಅನುಭವಿ ಮೊಹಮ್ಮದ್ ಶಮಿ ಭರ್ಜರಿ ಫಾರ್ಮ್‌ನಲ್ಲಿದ್ದು, ಕೊನೆಯ ಟೆಸ್ಟ್ ಪಂದ್ಯದಲ್ಲೂ ಹರಿಣಗಳ ಬ್ಯಾಟರ್‌ಗಳನ್ನು ಕಾಡುವ ನಿರೀಕ್ಷೆಯಲ್ಲಿದ್ದಾರೆ. ಕೇಪ್‌ಟೌನ್‌ನ ಪಿಚ್‌ನಲ್ಲಿ ಶಮಿ ಕಮಾಲ್ ಮಾಡಲು ಎದುರು ನೋಡುತ್ತಿದ್ದಾರೆ.
10. ಜಸ್ಪ್ರೀತ್ ಬುಮ್ರಾ:
ಟೀಂ ಇಂಡಿಯಾ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ 2018ರಲ್ಲಿ ಇದೇ ಕೇಪ್‌ಟೌನ್ ಟೆಸ್ಟ್‌ನ ಮೂಲಕ ರೆಡ್ ಬಾಲ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇದೀಗ ನಿರ್ಣಾಯಕ ಟೆಸ್ಟ್‌ನಲ್ಲಿ ಅಬ್ಬರಿಸಲು ಬುಮ್ರಾ ರೆಡಿಯಾಗಿದ್ದಾರೆ.
11. ಇಶಾಂತ್ ಶರ್ಮಾ:
ಮೂರನೇ ಟೆಸ್ಟ್ ಪಂದ್ಯದಿಂದ ವೇಗಿ ಮೊಹಮ್ಮದ್ ಸಿರಾಜ್ ಹೊರಬಿದ್ದಿದ್ದು, ಅವರ ಬದಲಿಗೆ ಅನುಭವಿ ವೇಗಿ ಇಶಾಂತ್ ಶರ್ಮಾ ಅವರಿಗೆ ಟೀಂ ಇಂಡಿಯಾ ಮಣೆಹಾಕುವ ಸಾಧ್ಯತೆ ಹೆಚ್ಚಿದೆ.