1. ಋತುರಾಜ್ ಗಾಯಕ್ವಾಡ್:
ಮಹಾರಾಷ್ಟ್ರ ಮೂಲದ ಪ್ರತಿಭಾನ್ವಿತ ಆರಂಭಿಕ ಬ್ಯಾಟರ್ ಗಾಯಕ್ವಾಡ್ ರೆಡ್ ಹಾಟ್ ಫಾರ್ಮ್‌ನಲ್ಲಿದ್ದು, ಲಂಕಾ ಎದುರಿನ ಸರಣಿಯಲ್ಲಿ ಭರ್ಜರಿ ಪ್ರದರ್ಶನ ತೋರುವ ಮೂಲಕ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.
Ishan Kishan
2. ಇಶಾನ್ ಕಿಶನ್:
ಸ್ಪೋಟಕ ಎಡಗೈ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್, ವಿಂಡೀಸ್ ಎದುರಿನ ಟಿ20 ಸರಣಿಯಲ್ಲಿ ದೊಡ್ಡ ಮೊತ್ತ ಕಲೆಹಾಕಲು ವಿಫಲವಾಗಿದ್ದರು. ಇದೀಗ ಕಿಶನ್ ಲಂಕಾ ಎದುರು ಅಬ್ಬರಿಸಲು ಎದುರು ನೋಡುತ್ತಿದ್ದಾರೆ.
3. ರೋಹಿತ್ ಶರ್ಮಾ:
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ನಾಯಕನಾಗಿ ಯಶಸ್ವಿಯಾಗುತ್ತಿದ್ದು, ಬ್ಯಾಟಿಂಗ್‌ನಲ್ಲಿ ಮಿಂಚಲು ಎದುರು ನೋಡುತ್ತಿದ್ದಾರೆ. ಹಿಟ್‌ಮ್ಯಾನ್ ಅಬ್ಬರಿಸಿದರೆ, ಭಾರತ ಅನಾಯಾಸವಾಗಿ ದೊಡ್ಡ ಮೊತ್ತ ಕಲೆಹಾಕಬಹುದಾಗಿದೆ
4. ಶ್ರೇಯಸ್ ಅಯ್ಯರ್:
ಸೂರ್ಯಕುಮಾರ್ ಯಾದವ್ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ತಮ್ಮ ಮಧ್ಯಮ ಕ್ರಮಾಂಕದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ. ಅಯ್ಯರ್ ಅವರಿಂದ ದೊಡ್ಡ ಮೊತ್ತವನ್ನು ನಿರೀಕ್ಷಿಸಲಾಗುತ್ತಿದೆ
5. ಸಂಜು ಸ್ಯಾಮ್ಸನ್:
ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟರ್ 2015ರಲ್ಲಿ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರೂ ಸಹಾ ಚುಟುಕು ಕ್ರಿಕೆಟ್‌ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿಲ್ಲ. ಇದೀಗ ಲಂಕಾ ಎದುರಿನ ಸರಣಿಯ ವೇಳೆ ಅಬ್ಬರಿಸಿ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.
6. ವೆಂಕಟೇಶ್ ಅಯ್ಯರ್:
ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ವೆಂಕಟೇಶ್ ಅಯ್ಯರ್ ಆಲ್ರೌಂಡರ್ ಆಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯಿಡಲಾರಂಭಿಸಿದ್ದಾರೆ. ಮ್ಯಾಚ್ ಫಿನಿಶರ್ ಆಗಿ ವೆಂಕಿ ಯಶಸ್ವಿಯಾಗುತ್ತಿರುವುದು ತಂಡಕ್ಕೆ ಪ್ಲಸ್ ಪಾಯಿಂಟ್ ಎನಿಸಿದೆ.
7. ರವೀಂದ್ರ ಜಡೇಜಾ:
ಸಾಕಷ್ಟು ಬಿಡುವಿನ ಬಳಿಕ ಸಂಪೂರ್ಣ ಫಿಟ್ ಆಗಿದ್ದು, ಇದೀಗ ತಂಡ ಕೂಡಿಕೊಂಡಿದ್ದಾರೆ. ಜಡೇಜಾ ಸೇರ್ಪಡೆ ತಂಡ ಬೌಲಿಂಗ್, ಬ್ಯಾಟಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ತಂಡಕ್ಕೆ ಬಲ ಬಂದಂತೆ ಆಗಿದೆ.
8. ಹರ್ಷಲ್ ಪಟೇಲ್:
ಟೀಂ ಇಂಡಿಯಾ ಡೆತ್ ಓವರ್ ಸ್ಪೆಷಲಿಸ್ಟ್ ಹರ್ಷಲ್ ಪಟೇಲ್, ವಿಂಡೀಸ್ ಎದುರಿನ ಟಿ20 ಸರಣಿಯಲ್ಲೂ ಮಿಂಚಿನ ಪ್ರದರ್ಶನ ತೋರಿದ್ದು, ಇದೀಗ ಮತ್ತೊಮ್ಮೆ ಲಂಕಾ ಎದುರು ಮಿಂಚಲು ಎದುರು ನೋಡುತ್ತಿದ್ದಾರೆ.
9. ರವಿ ಬಿಷ್ಣೋಯ್:
ಟೀಂ ಇಂಡಿಯಾ ಯುವ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಕೂಡಾ ವಿಂಡೀಸ್ ಎದುರಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದು, ಅದೇ ಪ್ರದರ್ಶನವನ್ನು ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.
10. ಭುವನೇಶ್ವರ್ ಕುಮಾರ್:
ಟೀಂ ಇಂಡಿಯಾ ಅನುಭವಿ ವೇಗಿ ಭುವಿ ವಿಂಡೀಸ್ ಎದುರಿನ ಮೊದಲೆರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದ್ದು, ಇದೀಗ ಲಂಕಾ ಎದುರಿನ ಸರಣಿಯಲ್ಲೂ ಮಾರಕ ದಾಳಿ ನಡೆಸಲು ರೆಡಿಯಾಗಿದ್ದಾರೆ.
জসপ্রিত বুমরা (ভারত)
11. ಜಸ್ಪ್ರೀತ್ ಬುಮ್ರಾ
ದಕ್ಷಿಣ ಆಫ್ರಿಕಾ ಪ್ರವಾಸದ ಬಳಿಕ ವಿಶ್ರಾಂತಿ ಪಡೆದಿದ್ದ ವೇಗಿ ಬುಮ್ರಾ ಇದೀಗ ತಂಡ ಕೂಡಿಕೊಂಡಿದ್ದು, ಲಂಕಾ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ. ಬುಮ್ರಾ ಬೌಲಿಂಗ್ ದಾಳಿಯನ್ನು ಲಂಕಾ ಪಡೆ ಯಾವ ರೀತಿ ಎದುರಿಸಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.