Ind vs SL: ಲಂಕಾ ಎದುರಿನ ಮೊದಲ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ ಪ್ರಕಟ

First Published | Mar 3, 2022, 6:14 PM IST

ಮೊಹಾಲಿ: ಭಾರತ ಹಾಗೂ ಶ್ರೀಲಂಕಾ (India vs Sri Lanka) ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಂ ಇಂಡಿಯಾ (Team India) ಜಯದ ನಾಗಾಲೋಟವನ್ನು ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದೆ. ಇದೇ ಮೊದಲ ಬಾರಿಗೆ ಭಾರತ ಟೆಸ್ಟ್ ತಂಡದ ಪೂರ್ಣಾವಧಿ ನಾಯಕರಾದ ಬಳಿಕ ತಂಡವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಮೇಲೆ ಸಾಕಷ್ಟು ನಿರೀಕ್ಷೆಗಳಿಗೆ. ಲಂಕಾ ಎದುರಿನ ಮೊದಲ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ ಹೀಗಿದೆ ನೋಡಿ

Image Credit: Getty Images

1. ರೋಹಿತ್ ಶರ್ಮಾ: ಟೆಸ್ಟ್‌ ತಂಡದ ಪೂರ್ಣಾವಧಿ ನಾಯಕರಾದ ಬಳಿಕ ಮೊದಲ ಬಾರಿಗೆ ರೋಹಿತ್ ಶರ್ಮಾ ಭಾರತ ಟೆಸ್ಟ್ ತಂಡವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ. ನಾಯಕನ ಜವಾಬ್ದಾರಿ ಜತೆ ಆರಂಭಿಕನಾಗಿಯೂ ಹಿಟ್‌ಮ್ಯಾನ್ ಯಶಸ್ವಿಯಾಗಬೇಕಿದೆ.

2. ಮಯಾಂಕ್ ಅಗರ್‌ವಾಲ್‌: ಟೀಂ ಇಂಡಿಯಾ ಆರಂಭಿಕ ಬ್ಯಾಟರ್‌ ಮಯಾಂಕ್ ಅಗರ್‌ವಾಲ್‌ ತವರಿನಲ್ಲಿ ಅತ್ಯಂತ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದು, ಇದೀಗ ಕೆ.ಎಲ್‌. ರಾಹುಲ್ ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ಯಶಸ್ವಿಯಾಗಲು ಮತ್ತೊಂದು ಅವಕಾಶ ಬಂದೊದಗಿದೆ.

Tap to resize

3. ಶುಭ್‌ಮನ್‌ ಗಿಲ್‌: ಟೀಂ ಇಂಡಿಯಾ ಪ್ರತಿಭಾನ್ವಿಯ ಅಗ್ರಕ್ರಮಾಂಕದ ಬ್ಯಾಟರ್‌ ಶುಭ್‌ಮನ್ ಗಿಲ್‌ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಚೇತೇಶ್ವರ್ ಪೂಜಾರ ಅವರ ಸ್ಥಾನವನ್ನು ಗಿಲ್ ತುಂಬುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.
 

4. ವಿರಾಟ್ ಕೊಹ್ಲಿ: 2014ರ ಬಳಿಕ ಕೊಹ್ಲಿ ಮೊದಲ ಬಾರಿಗೆ ಟೆಸ್ಟ್ ನಾಯಕನಾಗಿರದೇ ಸಾಮಾನ್ಯ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ. ಇದು ವಿರಾಟ್ ಕೊಹ್ಲಿ ಪಾಲಿನ 100ನೇ ಟೆಸ್ಟ್ ಪಂದ್ಯ ಇದಾಗಿದ್ದು, 71ನೇ ಟೆಸ್ಟ್ ಶತಕ ಬಾರಿಸಲು ಕೊಹ್ಲಿ ಎದುರು ನೋಡುತ್ತಿದ್ದಾರೆ.
 

5. ಶ್ರೇಯಸ್ ಅಯ್ಯರ್: ಟೀಂ ಇಂಡಿಯಾ ಪ್ರತಿಭಾನ್ವಿತ ಮಧ್ಯಮ ಕ್ರಮಾಂಕದ ಬ್ಯಾಟರ್‌ ಶ್ರೇಯಸ್ ಅಯ್ಯರ್ ರೆಡ್ ಹಾಟ್ ಫಾರ್ಮ್‌ನಲ್ಲಿದ್ದು, ಟಿ20 ಸರಣಿಯ ಮೂರು ಇನಿಂಗ್ಸ್‌ಗಳಲ್ಲಿ ಅಜೇಯ ಅರ್ಧಶತಕ ಬಾರಿಸಿದ್ದ ಶ್ರೇಯಸ್ ಅಯ್ಯರ್, ಇದೀಗ ಟೆಸ್ಟ್ ಸರಣಿಯಲ್ಲೂ ಅದೇ ಫಾರ್ಮ್‌ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.

6.ರಿಷಭ್ ಪಂತ್: ವಿಕೆಟ್‌ ಕೀಪರ್‌ ರಿಷಭ್ ಪಂತ್ ಬ್ಯಾಟಿಂಗ್‌ನಲ್ಲಿ ಭಾರತ ಮಧ್ಯಮ ಕ್ರಮಾಂಕದಲ್ಲಿ ಚುರುಕಿನ ಬ್ಯಾಟಿಂಗ್‌ ಮೂಲಕ ತಂಡಕ್ಕೆ ಆಸರೆಯಾಗುವ ಕ್ಷಮತೆ ಹೊಂದಿದ್ದಾರೆ. ಇದರ ಪರಿಸ್ಥಿತಿಗೆ ತಕ್ಕಂತೆ ಪಂತ್ ಬ್ಯಾಟಿಂಗ್ ನಡೆಸುವ ಕಲೆ ಕರಗತ ಮಾಡಿಕೊಂಡಿದ್ದಾರೆ.
 

7. ರವೀಂದ್ರ ಜಡೇಜಾ
ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ, ಇದೀಗ ಸಂಪೂರ್ಣ ಫಿಟ್ ಆಗಿದ್ದು, ಲಂಕಾ ಎದುರಿನ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.
 

8. ರವಿಚಂದ್ರನ್ ಅಶ್ವಿನ್‌: ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್‌ ವಿಂಡೀಸ್ ಹಾಗೂ ಲಂಕಾ ಎದುರಿನ ಸೀಮಿತ ಓವರ್‌ಗಳ ಸರಣಿಯಿಂದ ಹೊರಗುಳಿದಿದ್ದು, ಇದೀಗ ಬಿಡುವಿನ ಬಳಿಕ ಸಂಪೂರ್ಣ ಫಿಟ್ ಆಗಿ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲು ಅಶ್ವಿನ್ ರೆಡಿಯಾಗಿದ್ದಾರೆ.
 

9. ಮೊಹಮ್ಮದ್ ಶಮಿ:ಟೀಂ ಇಂಡಿಯಾ ಅನುಭವಿ ವೇಗಿ ಮೊಹಮ್ಮದ್ ಶಮಿ ಕೂಡಾ ತವರಿನಲ್ಲಿ ನಡೆದ ಎರಡು ಸೀಮಿತ ಓವರ್‌ಗಳ ಸರಣಿಯಿಂದ ಹೊರಗುಳಿದಿದ್ದರು. ಇದೀಗ ಶಮಿ ಲಂಕಾ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.
 

10. ಜಸ್ಪ್ರೀತ್ ಬುಮ್ರಾ: ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ತಮ್ಮ ಕರಾರುವಕ್ಕಾದ ದಾಳಿಯ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ. ಬುಮ್ರಾ ವೇಗದ ದಾಳಿಯನ್ನು ಮುನ್ನಡೆಸಲಿದ್ದಾರೆ.
 

Mohammed Siraj-Ronaldo

11. ಮೊಹಮ್ಮದ್ ಸಿರಾಜ್: ಟೀಂ ಇಂಡಿಯಾ ಪ್ರತಿಭಾನ್ವಿಯ ವೇಗದ ಬೌಲರ್‌ ಮೊಹಮ್ಮದ್ ಸಿರಾಜ್‌ ಕೂಡಾ ಯಾರ್ಕರ್ ಹಾಗೂ ಬೌನ್ಸರ್ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಕಂಗೆಡಿಸಲು ಸಜ್ಜಾಗಿದ್ದಾರೆ.

Latest Videos

click me!