ವಿಂಡೀಸ್ ಎದುರಿನ ಟಿ20 ಸರಣಿಯಿಂದಲೂ ಟೀಂ ಇಂಡಿಯಾ ಸ್ಟಾರ್ ಆಟಗಾರ ಔಟ್..?

Published : Jul 27, 2022, 05:57 PM IST

ಪೋರ್ಟ್ ಆಫ್‌ ಸ್ಪೇನ್‌: ಭಾರತ ಹಾಗೂ ವೆಸ್ಟ್‌ ಇಂಡೀಸ್ ತಂಡಗಳ ನಡುವಿನ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಮುಂಬರುವ ಐಸಿಸಿ ಟಿ20 ವಿಶ್ವಕಪ್‌ ದೃಷ್ಠಿಯಿಂದ ಈ ಚುಟುಕು ಸರಣಿ ಸಾಕಷ್ಟು ಮಹತ್ವದ್ದೆನಿಸಿದೆ. ವಿಂಡೀಸ್ ಎದುರಿನ ಸರಣಿಗೂ ಭಾರತ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ.   

PREV
16
ವಿಂಡೀಸ್ ಎದುರಿನ ಟಿ20 ಸರಣಿಯಿಂದಲೂ ಟೀಂ ಇಂಡಿಯಾ ಸ್ಟಾರ್ ಆಟಗಾರ ಔಟ್..?

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ನಿರ್ಣಾಯಕ ಹಂತ ತಲುಪಿದ್ದು, ಒಂದು ಪಂದ್ಯ ಭಾಕಿ ಇರುವಂತೆಯೇ ಟೀಂ ಇಂಡಿಯಾ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. 

26

ಇನ್ನು ವೆಸ್ಟ್ ಇಂಡೀಸ್ ಎದುರಿನ 5 ಪಂದ್ಯಗಳ ಟಿ20 ಸರಣಿಯು ಜುಲೈ 29ರಿಂದ ಆರಂಭವಾಗಲಿದ್ದು, ಮುಂಬರುವ ಟಿ20 ವಿಶ್ವಕಪ್ ದೃಷ್ಟಿಯಿಂದ ಸಾಕಷ್ಟು ಮಹತ್ವದ್ದೆನಿಸಿದೆ. ಆದರೆ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಗೆ ಶಾಕ್ ಎದುರಾಗಿದೆ.

36

ಹೌದು, ವೆಸ್ಟ್ ಇಂಡೀಸ್ ಎದುರಿನ ಸೀಮಿತ ಓವರ್‌ಗಳ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಕನ್ನಡಿಗ ಕೆ ಎಲ್ ರಾಹುಲ್‌, ವಿಂಡೀಸ್ ಎದುರಿನ ಸರಣಿಗೂ ಮುನ್ನ ಕೋವಿಡ್‌ 19 ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಏಕದಿನ ಸರಣಿಯಿಂದ ಹೊರಬಿದ್ದಿದ್ದರು.

46

ಇದೀಗ ಕೆ ಎಲ್ ರಾಹುಲ್‌ ಅವರಿಗೆ ಹೆಚ್ಚಿನ ವಿಶ್ರಾಂತಿಯ ಅಗತ್ಯವಿದೆ ಎನ್ನುವ ಸೂಚನೆ ಸಿಕ್ಕಿರುವುದರಿಂದ ವಿಂಡೀಸ್ ಎದುರಿನ 5 ಪಂದ್ಯಗಳ ಟಿ20 ಸರಣಿಯಿಂದಲೇ ರಾಹುಲ್ ಹೊರಬೀಳಲಿದ್ದಾರೆ ಎನ್ನುವ ಮಾಹಿತಿ ಬೆಳಕಿಗೆ ಬಂದಿದೆ.

56
Rohit Sharma and Shikhar Dhawan

ವೆಸ್ಟ್ ಇಂಡೀಸ್ ಎದುರಿನ ಏಕದಿನ ಸರಣಿಯಲ್ಲಿ ಶಿಖರ್ ಧವನ್ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇನ್ನು ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಕೂಡಿಕೊಳ್ಳಲಿದ್ದು, ಟಿ20 ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ.

66

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 5 ಪಂದ್ಯಗಳ ಟಿ20 ಸರಣಿಯು ಜುಲೈ 29ರಂದು ಆರಂಭವಾಗಿ ಆಗಸ್ಟ್‌ 07ರ ವರೆಗೆ ನಡೆಯಲಿದೆ. ಮೊದಲ ಮೂರು ಟಿ20 ಪಂದ್ಯಗಳು ವೆಸ್ಟ್ ಇಂಡೀಸ್‌ನಲ್ಲಿ ನಡೆದರೇ, ಕೊನೆಯ ಎರಡು ಟಿ20 ಪಂದ್ಯಗಳಿಗೆ ಅಮೆರಿಕ ಆತಿಥ್ಯ ವಹಿಸಲಿದೆ.

Read more Photos on
click me!

Recommended Stories