1. ರೋಹಿತ್ ಶರ್ಮಾ: ಭಾರತ ಸೀಮಿತ ಓವರ್‌ಗಳ ತಂಡದ ನಾಯಕ ರೋಹಿತ್ ಶರ್ಮಾ, ಸಂಪೂರ್ಣ ಫಿಟ್ ಆಗಿದ್ದು, ಮೊದಲ ಬಾರಿಗೆ ಪೂರ್ಣ ಪ್ರಮಾಣದ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ.
2. ಇಶಾನ್ ಕಿಶನ್: ಮೊದಲ ಪಂದ್ಯದಿಂದ ಕೆ.ಎಲ್. ರಾಹುಲ್ ಹೊರಗುಳಿದಿರುವುದರಿಂದ, ಇಶಾನ್ ಕಿಶನ್ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. ಈಗಾಗಲೇ ಚುಟುಕು ಕ್ರಿಕೆಟ್ ಮಾದರಿಯಲ್ಲಿ ಗಮನ ಸೆಳೆದಿರುವ ಇಶಾನ್ ಕಿಶನ್, ಏಕದಿನ ಕ್ರಿಕೆಟ್‌ನಲ್ಲಿ ಅಬ್ಬರಿಸಲು ರೆಡಿಯಾಗಿದ್ದಾರೆ.
3. ವಿರಾಟ್ ಕೊಹ್ಲಿ: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಕಳೆದೆರಡು ವರ್ಷಗಳಿಂದ ಶತಕ ಬಾರಿಸಲು ವಿಫಲವಾಗಿದ್ದಾರೆ. ಆದರೆ ಇದೀಗ ಭಾರತ ಆಡುತ್ತಿರುವ 1000ನೇ ಏಕದಿನ ಪಂದ್ಯದಲ್ಲಿ ಮೂರಂಕಿ ಮೊತ್ತದ ಇನಿಂಗ್ಸ್ ಕಟ್ಟಲು ಕಿಂಗ್ ಕೊಹ್ಲಿ ಎದುರು ನೋಡುತ್ತಿದ್ದಾರೆ.
4. ಸೂರ್ಯಕುಮಾರ್ ಯಾದವ್: ಭಾರತ ಮಧ್ಯಮ ಕ್ರಮಾಂಕದ ಪ್ರತಿಭಾನ್ವಿತ ಬ್ಯಾಟರ್ ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.
5. ರಿಷಭ್ ಪಂತ್: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಫಿನೀಶರ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕಿದೆ. ಕಳೆದ ಕೆಲವು ಪಂದ್ಯಗಳಲ್ಲಿ ದೊಡ್ಡ ಇನಿಂಗ್ಸ್ ಆಡುವಲ್ಲಿ ವಿಫಲವಾಗಿರುವ ಪಂತ್, ದೊಡ್ಡ ಇನಿಂಗ್ಸ್ ಆಡುವ ನಿರೀಕ್ಷೆಯಲ್ಲಿದ್ದಾರೆ.
6. ಶಾರುಕ್ ಖಾನ್: ತಮಿಳುನಾಡು ಮೂಲದ ಪ್ರತಿಭಾನ್ವಿತ ಬ್ಯಾಟರ್ ಶಾರುಕ್ ದೇಶಿ ಕ್ರಿಕೆಟ್‌ನಲ್ಲಿ ಮಿಂಚು ಹರಿಸಿದ್ದಾರೆ. ಇದೀಗ ಏಕದಿನ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಪರ ಅಬ್ಬರಿಸಲು ಎದುರು ನೋಡುತ್ತಿದ್ದಾರೆ.
7. ಶಾರ್ದೂಲ್ ಠಾಕೂರ್: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಆಲ್ರೌಂಡ್ ಪ್ರದರ್ಶನದ ಮೂಲಕ ಗಮನ ಸೆಳೆದಿರುವ ಶಾರ್ದೂಲ್ ಠಾಕೂರ್, ಇದೀಗ ಅನುಭವಿ ಬೌಲರ್‌ಗಳ ಅನುಪಸ್ಥಿತಿಯಲ್ಲಿ ಮಿಂಚಲು ರೆಡಿಯಾಗಿದ್ದಾರೆ.
(photo source- instagram)
8. ದೀಪಕ್ ಚಹರ್: ಟೀಂ ಇಂಡಿಯಾ ವೇಗಿ ದೀಪಕ್ ಚಹರ್ ಕೂಡಾ ಡೆತ್ ಓವರ್ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಳ್ಳುವತ್ತ ಹೆಜ್ಜೆ ಹಾಕುತ್ತಿದ್ದಾರೆ. ಅಗತ್ಯ ಸಂದರ್ಭದಲ್ಲಿ ಬ್ಯಾಟಿಂಗ್‌ನಲ್ಲೂ ಉಪಯುಕ್ತ ಕಾಣಿಕೆ ನೀಡುವ ಕ್ಷಮತೆ ದೀಪಕ್ ಚಹರ್‌ಗಿದೆ.
9. ಮೊಹಮ್ಮದ್ ಸಿರಾಜ್: ಟೀಂ ಇಂಡಿಯಾ ವೇಗದ ಬೌಲರ್ ಮೊಹಮ್ಮದ್ ಸಿರಾಜ್, ಕೂಡಾ ಸಿಕ್ಕ ಅವಕಾಶವನ್ನು ಬಾಚಿಕೊಳ್ಳಲು ಎದುರು ನೋಡುತ್ತಿದ್ದಾರೆ. ಶಮಿ ಹಾಗೂ ಬುಮ್ರಾ ಅನುಪಸ್ಥಿತಿಯಲ್ಲಿ ಸಿರಾಜ್ ಮಿಂಚಲು ಹಾತೊರೆಯುತ್ತಿದ್ದಾರೆ.
10. ಯುಜುವೇಂದ್ರ ಚಹಲ್: ಟೀಂ ಇಂಡಿಯಾ ಅನುಭವಿ ಸ್ಪಿನ್ನರ್ ಯುಜುವೇಂದ್ರ ಚಹಲ್, ಮತ್ತೊಮ್ಮೆ ಏಕದಿನ ಕ್ರಿಕೆಟ್‌ನಲ್ಲಿ ನೆಲೆಕಂಡುಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ವಿಫಲವಾಗಿದ್ದ ಚಹಲ್, ಇದೀಗ ತವರಿನಲ್ಲಿ ಮಿಂಚಲು ಎದುರು ನೋಡುತ್ತಿದ್ದಾರೆ.
11. ಕುಲ್ದೀಪ್ ಯಾದವ್: ಟೀಂ ಇಂಡಿಯಾ ಮಣಿಕಟ್ಟು ಸ್ಪಿನ್ನರ್ ಕುಲ್ದೀಪ್ ಯಾದವ್, ಅಚ್ಚರಿಯೆನ್ನುವಂತೆ ಮತ್ತೊಮ್ಮೆ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದು ಕುಲ್ಚಾ ಜೋಡಿ ಕಮಾಲ್ ಎದುರು ನೋಡುತ್ತಿದ್ದಾರೆ.