Ind vs WI: ವಿಂಡೀಸ್ ಎದುರಿನ ಮೊದಲ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ತಂಡ ಪ್ರಕಟ
First Published | Feb 16, 2022, 3:13 PM ISTಬೆಂಗಳೂರು: ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಿನ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿ ಬೀಗುತ್ತಿರುವ ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಂ ಇಂಡಿಯಾ(Team India), ಇದೀಗ ಮೂರು ಪಂದ್ಯಗಳ ಟಿ20 ಸರಣಿಗೆ ಸಜ್ಜಾಗಿದೆ. ಮುಂಬರುವ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಗೆ ಭಾರತ ತಂಡವನ್ನು ಸಜ್ಜುಗೊಳಿಸುವ ನಿಟ್ಟಿನಿಂದ ಈಗಿನಿಂದಲೇ ಸಿದ್ದತೆಗಳು ಆರಂಭವಾಗಿದೆ. ಇದರ ಭಾಗವಾಗಿ ಇದೀಗ ಟೀಂ ಇಂಡಿಯಾ, ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ವಿಂಡೀಸ್ ಎದುರು ಮೊದಲ ಪಂದ್ಯವನ್ನಾಡಲು ಸಜ್ಜಾಗಿದೆ. ವೆಸ್ಟ್ ಇಂಡೀಸ್ ಎದುರಿನ ಮೊದಲ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ ನೋಡಿ..